ಮಡಿಕೇರಿ, ಏ. ೩೦: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಮಡಿಕೇರಿಯಲ್ಲಿ ಉತ್ಕರ್ಷ ೨೦೨೩ರ ಶೀರ್ಷಿಕೆಯಡಿ ಕಾಲೇಜು ವಾರ್ಷಿಕೊತ್ಸವ ಸಂಸ್ಥೆಯ ಆವರಣದಲ್ಲಿ ನಡೆಯಿತು.

ಮುಖ್ಯ ಅತಿಥಿಗಳಾಗಿ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು, ವೈದ್ಯಕೀಯ ಶಿಕ್ಷಣ ಇಲಾಖೆಯ ನವೀನ್ ರಾಜ್ ಸಿಂಗ್ ಇವರು ಆಗಮಿಸಿ ಮಾತನಾಡಿ, ಕೊಡಗಿನ ಪ್ರಾಕೃತಿಕ

(ಮೊದಲ ಪುಟದಿಂದ) ಸೌಂದರ್ಯವನ್ನು ವರ್ಣಿಸಿ, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿನ ಕ್ಲಿನಿಕಲ್ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಕೋರ್ಸ್ ಪ್ರಾರಂಭಿಸಲು ಅಗತ್ಯ ಕ್ರಮವಹಿಸಲು ಸೂಚಿಸಿದರು. ಭಾರತದಲ್ಲಿ ಸ್ನಾತಕೊತ್ತರ ಸೀಟುಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಈ ನಿಟ್ಟಿನಲ್ಲಿ ಸಮಾಜಕ್ಕೆ ಈ ಸಂಸ್ಥೆಯಿAದ ಹೆಚ್ಚಿನ ಕೊಡುಗೆ ನೀಡುವಂತಾಗಬೇಕೆAದರು. ಸಂಸ್ಥೆಗೆ ಬೇಕಾಗಿರುವ ಎಲ್ಲಾ ಸೌಲಭ್ಯವನ್ನು ಸರ್ಕಾರದ ಮುಖಾಂತರ ಒದಗಿಸಲಾಗುತ್ತಿದೆ ಎಂದು ತಿಳಿಸಿದರು. ಇದಕ್ಕೂ ಮೊದಲು ನವೀನ್ ರಾಜ್ ಸಿಂಗ್ ಅವರು ಬೋಧಕ ಆಸ್ಪತ್ರೆ ಹಾಗೂ ನೂತನ ಆಸ್ಪತ್ರೆ ಕಟ್ಟಡ ಕಾಮಗಾರಿಯ ಪರಿವೀಕ್ಷಣೆ ನಡೆಸಿ ಸಂಸ್ಥೆಯ ವೈದ್ಯರುಗಳೊಂದಿಗೆ ಸಭೆ ನಡೆಸಿದರು.

ಸಂಸ್ಥೆಯ ಡೀನ್ ಹಾಗೂ ನಿರ್ದೇಶಕ ಡಾ. ಕಾರ್ಯಪ್ಪ ಕೆ.ಬಿ. ಅವರು ಮಾತನಾಡಿ, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ೪೫೦ ಹಾಸಿಗೆ ಸಾಮರ್ಥ್ಯದ ಆಸ್ಪತ್ರೆ, ಕ್ರಿಟಿಕಲ್ ಕೇರ್ ಆಸ್ಪತ್ರೆ, ನೂತನ ಸಿಟಿ ಸ್ಕಾö್ಯನ್ ಉಪಕರಣ ಸೇರಿದಂತೆ ಸಂಸ್ಥೆಗೆ ಅಗತ್ಯವಿರುವ ಸೌಲಭ್ಯವನ್ನು ಒದಗಿಸುವಲ್ಲಿ ಪ್ರಧಾನ ಕಾರ್ಯದರ್ಶಿಗಳು ಮುತುವರ್ಜಿ ವಹಿಸಿರುವ ಬಗ್ಗೆ ತಿಳಿಸಿದರು.

ಅತಿಥಿಗಳಾಗಿ ಆಗಮಿಸಿದ ಪದ್ಮಶ್ರೀ ಪ್ರಶಸ್ತಿ ವಿಜೇತೆ ರಾಣಿ ಮಾಚಯ್ಯ ಮತ್ತು ಪ್ರಧಾನ ಕಾರ್ಯ ದರ್ಶಿಗಳನ್ನು ಸನ್ಮಾನಿಸ ಲಾಯಿತು.

ಕಾರ್ಯಕ್ರಮದಲ್ಲಿ ಸಂಸ್ಥೆಯ ನಿರ್ದೇಶಕರು ಹಾಗೂ ಡೀನ್ ಡಾ. ಕಾರ್ಯಪ್ಪ ಕೆ.ಬಿ, ಪ್ರಾಂಶುಪಾಲರಾದ ಡಾ. ವಿಶಾಲ್ ಕುಮಾರ್, ಸಂಸ್ಥೆಯ ಮುಖ್ಯ ಆಡಳಿತಾಧಿಕಾರಿಗಳಾದ ಸ್ವಾಮಿ ಎ.ಎಲ್, ಜಿಲ್ಲಾ ಆರೋಗ್ಯಾಧಿಕಾರಿಗಳಾದ ಡಾ. ಸತೀಶ್, ವೈದ್ಯಕೀಯ ಅಧೀಕ್ಷಕರಾದ ರೂಪೇಶ್ ಗೋಪಾಲ್, ಮುಖ್ಯ ಲೆಕ್ಕಾಧಿಕಾರಿಗಳು ಮತ್ತು ಆರ್ಥಿಕ ಸಲಹೆಗಾರರಾದ ಆನಂದ ಕೆ, ಸ್ಥಾನೀಯ ವೈದ್ಯಾಧಿಕಾರಿಗಳಾದ ಡಾ. ಸತೀಶ್ ವಿ.ಎಸ್. ಅವರುಗಳು ವೇದಿಕೆಯಲ್ಲಿದ್ದರು. ನಂತರ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಎಂಬಿಬಿಎಸ್ ವಿದ್ಯಾರ್ಥಿಗಳಿಂದ ಅತ್ಯಾಕರ್ಷಕ ನೃತ್ಯ, ನಾಟಕ ಸೇರಿದಂತೆ ವಿವಿಧ ಬಗೆಯ ಮನೋರಂಜನಾ ಕಾರ್ಯಕ್ರಮ ನಡೆಯಿತು.