ಶನಿವಾರಸಂತೆ, ಏ. ೩೦: ಶಾಸಕ ಸ್ಥಾನ ಲಭಿಸಿದರೆ ಹೊಸ ಚಿಂತನೆ ಹಾಗೂ ಹೊಸ ಯೋಜನೆಯೊಂದಿಗೆ ಕ್ಷೇತ್ರವನ್ನು ಅಭಿವೃದ್ಧಿ ಗೊಳಿಸುವುದು ನನ್ನ ಜವಾಬ್ದಾರಿ ಎಂದು ಮಡಿಕೇರಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಮಂಥರ್ ಗೌಡ ಹೇಳಿದರು.
ಶನಿವಾರಸಂತೆಯಲ್ಲಿ ಶನಿವಾರ ಸಂಜೆ ೬ ಗಂಟೆಗೆ ಗುಡುಗಳಲೆ ವೃತ್ತದಿಂದ ಕಿತ್ತೂರು ರಾಣಿ ಚೆನ್ನಮ್ಮ ವೃತ್ತದವರೆಗೆ ರೋಡ್ ಶೋ ನಡೆಸಿ ನಂತರ ನಡೆದ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಪಿ.ಚಂದ್ರಕಲಾ ಮಾತನಾಡಿ, ಶನಿವಾರಸಂತೆಯಲ್ಲಿ ಅಭಿವೃದ್ಧಿ ಕಾರ್ಯಗಳೇನೂ ಆಗಿಲ್ಲ. ಮತದಾರರು ಮನಸ್ಸು ಮಾಡಿದರೆ ಕಾಂಗ್ರೆಸ್ ಗೆಲುವು ಖಚಿತ ಎಂದರು.
ಕಾAಗ್ರೆಸ್ ಮುಖಂಡ ಟಿ.ಪಿ.ರಮೇಶ್ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತ ನಡೆಸಲು ಡಾ. ಮಂಥರ್ ಗೌಡ ಅವರಿಗೆ ಮತವನ್ನು ನೀಡಬೇಕು ಎಂದರು.
ಕೆಪಿಸಿಸಿ ವಕ್ತಾರ ಎಚ್.ಎಸ್.ಚಂದ್ರಮೌಳಿ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಬಿ.ಎಸ್. ಅನಂತ್ ಕುಮಾರ್, ನಗರ ಕಾಂಗ್ರೆಸ್ ಅಧ್ಯಕ್ಷ ರಂಗಸ್ವಾಮಿ, ಮುಖಂಡರಾದ ಎಚ್.ಆರ್.ಸುರೇಶ್, ಶಾಂತವೇರಿ ವಸಂತ್ ಮಾತನಾಡಿದರು.
ಮುಖಂಡರಾದ ಹರಪಳ್ಳಿ ರವೀಂದ್ರ, ಸಂಜಯ್ ಜೀವಿಜಯ, ಲೋಕೇಶ್, ಕಾಂತರಾಜ್, ಶರತ್ ಶೇಖರ್, ಮಹಮ್ಮದ್ ಪಾಶ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಫರ್ಜಾನಾ, ಸದಸ್ಯರಾದ ಸರ್ದಾರ್ ಅಹಮ್ಮದ್, ಆದಿತ್ಯಗೌಡ, ಸಿ.ಜೆ.ಗಿರೀಶ್ ಇತರರು ಇದ್ದರು.