ಸುಂಟಿಕೊಪ್ಪ, ಏ. ೩೦: ೫ ವರ್ಷದ ಅಧಿಕಾರದ ಅವಕಾಶಕೊಡಿ ೨೫ ವರ್ಷದಲ್ಲಿ ಆಗದ ಕೆಲಸವನ್ನು ಎಲ್ಲಾ ವರ್ಗದವರಿಗೆ ತಲುಪಿಸುತ್ತೇನೆ ಎಂದು ರಾಷ್ಟಿçÃಯ ಕಾಂಗ್ರೆಸ್ ಪಕ್ಷದ ಆಭ್ಯರ್ಥಿ ಡಾ.ಮಂಥರ್‌ಗೌಡ ಹೇಳಿದರು.

ಕಾಂಗ್ರೆಸ್ ವತಿಯಿಂದ ಸುಂಟಿಕೊಪ್ಪದಲ್ಲಿ ಏರ್ಪಡಿಸಲಾಗಿದ್ದ ಬಹಿರಂಗ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು ಕಾಂಗ್ರೆಸ್ ಪಕ್ಷ ದೇಶದ ಸಭಿಕ್ಷೆಗೆ ಒತ್ತು ನೀಡುತ್ತಿದೆ. ಎಲ್ಲಾ ಜಾತಿ, ಧರ್ಮದವರ ಶ್ರೇಯೋಭಿವೃದ್ಧಿಗೆ ಶ್ರಮಿಸಲಿದೆ ಎಂದು ಹೇಳಿದರು.

ಕಾಂಗ್ರೆಸ್ ಮುಖಂಡ ಹೆಚ್.ಎಸ್. ಚಂದ್ರಮೌಳಿ ಮಾತನಾಡಿ ಕಿರಿಯ ವಯಸ್ಸಿನಲ್ಲಿ ಶಾಸಕನಾಗಲು ಮಂಥರ್‌ಗೌಡರಿಗೆ ಕಾಂಗ್ರೆಸ್ ಗ್ರೀನ್ ಸಿಗ್ನಲ್ ನೀಡಿದ್ದು, ಅವರ ಸಮಾಜಮುಖಿ ಕೆಲಸ ಬಡವರ ಕಲ್ಯಾಣಕ್ಕಾಗಿ ಅವರು ನೀಡಿದ ಕೊಡುಗೆ ಕಾರಣವಾಗಿದೆ. ಅವರು ಈ ಬಾರಿ ಗೆದ್ದರೆ ೩೦ ವರ್ಷದವರೆಗೆ ಬೇರೆ ಶಾಸಕರು ಇಲ್ಲಿ ಬರಲು ಸಾಧ್ಯವಿಲ್ಲ ಎಂದರು.

ಮಾಜಿ ಶಾಸಕರಾದ ಕೆ.ಎಂ.ಇಬ್ರಾಹಿA, ಕಾಂಗ್ರೆಸ್ ಮುಖಂಡರಾದ ಬ್ಲಾಕ್ ಅಧ್ಯಕ್ಷ ವಿ.ಪಿ.ಶಶಿಧರ್, ಜಿ.ಪಂ. ಮಾಜಿ ಸದಸ್ಯೆ ಕೆ.ಪಿ.ಚಂದ್ರಕಲಾ, ಜಿ.ಪಂ.ಮಾಜಿ ಸದಸ್ಯ ಪಿ.ಎಂ.ಲತೀಫ್, ಎಂ.ಎ. ವಸಂತ, ಕೊಡಗು ಜಿಲ್ಲಾ ಅಲ್ಪಸಂಖ್ಯಾತ ಕಾಂಗ್ರೆಸ್ ಘಟಕದ ಅಧ್ಯಕ್ಷ ಎಂ.ಎ.ಉಸ್ಮಾನ್, ಮಾತನಾಡಿದರು.

ಜಿ.ಪಂ. ಮಾಜಿ ಸದಸ್ಯೆ ಸುನೀತಾ, ಸುಂಟಿಕೊಪ್ಪ ಗ್ರಾ.ಪಂ.ಅಧ್ಯಕ್ಷೆ ಶಿವಮ್ಮ ಮಹೇಶ್, ಸದಸ್ಯರುಗಳಾದ ಪಿ.ಎಫ್.ಸಬಾಸ್ಟೀನ್, ರಫೀಕ್‌ಖಾನ್, ಪಿ.ಆರ್.ಸುಕುಮಾರ್, ರಜಾಕ್, ಹಕೀಂ, ಬೆಟ್ಟಗೇರಿ ತೋಟದ ಮಾಲೀಕರಾದ ವಿನೋದ್ ಶಿವಪ್ಪ ಅವರ ಪುತ್ರ ವಿಶಾಲ್ ಶಿವಪ್ಪ, ಸಂಜಯ್ ಜೀವಿಜಯ ಇದ್ದರು.

ಅನಂತರ ರೋಡ್ ಶೋ ನಡೆಸಿ ಮತಯಾಚನೆಯನ್ನು ರಾಷ್ಟಿçÃಯ ಕಾಂಗ್ರೆಸ್ ಪಕ್ಷದ ಆಭ್ಯರ್ಥಿ ಡಾ.ಮಂಥರ್‌ಗೌಡ ಪಕ್ಷದ ಮುಖಂಡರು ಕಾರ್ಯಕರ್ತರು ಮತಯಾಚಿಸಿದರು.