ಕೂಡಿಗೆ, ಮೇ ೨: ಕೂಡುಮಂಗಳೂರು ದೊಡ್ಡಮ್ಮ ತಾಯಿ ದೇವಾಲಯದಲ್ಲಿ ಬಿಜೆಪಿ ಪಕ್ಷದ ಕಾರ್ಯಕರ್ತರು ಪೂಜೆ ಸಲ್ಲಿಸಿ ಮಡಿಕೇರಿ ಕ್ಷೇತ್ರದ ಅಭ್ಯರ್ಥಿ ಎಂ.ಪಿ. ಅಪ್ಪಚ್ಚು ರಂಜನ್ ಪರವಾಗಿ ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮನೆ ಮನೆಗೆ ತೆರಳಿ ಚುನಾವಣಾ ಪ್ರಚಾರ ಮಾಡಿದರು. ಈ ಸಂದರ್ಭದಲ್ಲಿ ಕೂಡುಮಂಗಳೂರು ಶಕ್ತಿ ಕೇಂದ್ರ ಪ್ರಮುಖ ಮಂಜುನಾಥ , ಉದ್ಯಮಿ ಕಿಶೋರ್ ಕುಮಾರ್, ಕಿರಣ್, ಪ್ರಶಾಂತ, ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಗಣೇಶ್ ಸೇರಿದಂತೆ ವಿವಿಧ ಘಟಕದ ಅಧ್ಯಕ್ಷರು, ಮಹಿಳಾ ಘಟಕದ ಅಧ್ಯಕ್ಷರು, ಸದಸ್ಯರು, ಪದಾಧಿಕಾರಿಗಳು ಹಾಜರಿದ್ದರು.