ಮಡಿಕೇರಿ, ಮೇ ೨: ಜಬ್ಬೂಮಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಮೇ ೨೦ ರಂದು ಮಡಿಕೇರಿಯಲ್ಲಿ ಯುವ ಕೊಡವಮೇಳ- ೨೦೨೩ ನಡೆಸುವ ಬಗ್ಗೆ ಮಡಿಕೇರಿ ಕೊಡವ ಸಮಾಜದಲ್ಲಿ ಪೂರ್ವಭಾವಿ ಸಭೆ ನಡೆಯಿತು.
ಮಡಿಕೇರಿ ಕೊಡವ ಸಮಾಜದ ಅಧ್ಯಕ್ಷ ಮಂಡುವAಡ ಮುತ್ತಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕಾರ್ಯಕ್ರಮದ ರೂಪುರೇಷೆಯ ಬಗ್ಗೆ ಜಬ್ಬೂಮಿ ಚಾರಿಟೇಬಲ್ ಟ್ರಸ್ಟ್ನ ಸಂಚಾಲಕ ಚೊಟ್ಟೇಕ್‌ಮಾಡ ರಾಜೀವ್ ಬೋಪಯ್ಯ ವಿವರಿಸಿದರು. ಮಡಿಕೇರಿ ಕೊಡವಕೇರಿಯ ಪದಾಧಿ ಕಾರಿಗಳು ಸಲಹೆಯನ್ನು ನೀಡಿದರು.
ಸಭೆಯಲ್ಲಿ ಮಡಿಕೇರಿ ಕೊಡವ ಸಮಾಜದ ಪದಾಧಿಕಾರಿಗಳು, ಪೊಮ್ಮಕ್ಕಡ ಕೂಟ, ಜಬ್ಬೂಮಿ ಸಂಘಟನೆಯ ಕಾರ್ಯಕರ್ತರು ಹಾಜರಿದ್ದರು.