ಕಣಿವೆ, ಮೇ ೨: ಕುಶಾಲನಗರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನಾಚರಣೆಯನ್ನು ತಾ. ೫ ರಂದು ಅಪರಾಹ್ನ ೩ ಗಂಟೆಗೆ ಕೂಡಿಗೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದೆ.

ಕನ್ನಡ ಸಾಹಿತ್ಯ ಪರಿಷತ್ತಿನ ಕುಶಾಲನಗರ ತಾಲ್ಲೂಕು ಅಧ್ಯಕ್ಷ ಕೆ.ಎಸ್. ಮೂರ್ತಿ ಅಧ್ಯಕ್ಷತೆ ವಹಿಸಲಿದ್ದು, ಪರಿಷತ್ತಿನ ಜಿಲ್ಲಾಧ್ಯಕ್ಷ ಎಂ.ಪಿ. ಕೇಶವ ಕಾಮತ್ ಉದ್ಘಾಟಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಕೊಡಗು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಎನ್. ಮಂಜುನಾಥ, ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ವಿ. ಸುರೇಶ್, ಕಸಾಪ ಹೆಬ್ಬಾಲೆ ಹೋಬಳಿ ಅಧ್ಯಕ್ಷ ಎಂ.ಎನ್. ಮೂರ್ತಿ, ಸುಂಟಿಕೊಪ್ಪ ಹೋಬಳಿ ಅಧ್ಯಕ್ಷ ಸೆಬಾಸ್ಟಿನ್ ಪಾಲ್ಗೊಳ್ಳಲಿದ್ದಾರೆ.

ಕೂಡಿಗೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲ ಕೆ. ಪ್ರಕಾಶ್ ದಿನದ ಮಹತ್ವದ ಕುರಿತು ಮಾತನಾಡಲಿದ್ದಾರೆ ಎಂದು ಕಸಾಪ ಗೌರವ ಕಾರ್ಯದರ್ಶಿ ಎಸ್. ನಾಗರಾಜು ತಿಳಿಸಿದ್ದಾರೆ.