ಕುಶಾಲನಗರ, ಮೇ ೨: ಕುಶಾಲನಗರ ಸಮೀಪದ ಹಾರಂಗಿ ರಸ್ತೆಯ ಗೋಪಾಲ ಸರ್ಕಲ್ ಬಳಿ ಇರುವ ಬಿಸಿಎಂ ಬಾಲಕರ ವಸತಿ ನಿಲಯದಲ್ಲಿ ಕೆಲವು ಸಮಯದಿಂದ ನೀರಿನ ಸಮಸ್ಯೆ ನಡುವೆ ವಿದ್ಯಾರ್ಥಿಗಳು ಪರದಾಡುತ್ತಿರುವ ಬಗ್ಗೆ ದೂರುಗಳು ಕೇಳಿ ಬಂದಿವೆ.
ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯದ ಸುಮಾರು ೬೦ಕ್ಕೂ ಅಧಿಕ ವಿದ್ಯಾರ್ಥಿಗಳು ನೀರಿಲ್ಲದೆ ಪರದಾಡುತ್ತಿದ್ದು ಈ ಬಗ್ಗೆ ಅಧಿಕಾರಿಗಳಿಗೆ ದೂರು ನೀಡಿದರೂ ಪ್ರಯೋಜನವಾಗಿಲ್ಲ ಎಂದು ಕೆಲವು ವಿದ್ಯಾರ್ಥಿಗಳು ತಿಳಿಸಿದ್ದಾರೆ. ಕುಶಾಲನಗರ ಪಟ್ಟಣದ ಇಂಜಿನಿಯರಿAಗ್, ಪಾಲಿಟೆಕ್ನಿಕ್ ಮತ್ತು ಶಿಕ್ಷಣ ಕೇಂದ್ರಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಈ ನಿಲಯದಲ್ಲಿ ಇದ್ದು ಖಾಸಗಿ ಕಟ್ಟಡದ ಆವರಣದಲ್ಲಿರುವ ಕೊಳವೆಬಾವಿಯಲ್ಲಿ ನೀರಿನ ಕೊರತೆ ಕಂಡು ಬಂದಿದೆ. ತಕ್ಷಣ ಕ್ರಮ ಕೈಗೊಳ್ಳುವಂತೆ ವಿದ್ಯಾರ್ಥಿ ಗಳು ಮನವಿ ಮಾಡಿದ್ದಾರೆ. ಪಟ್ಟಣ ಪಂಚಾಯಿತಿ ಮೂಲಕ ಟ್ಯಾಂಕರ್‌ನಲ್ಲಿ ನೀರು ಸರಬರಾಜು ಮಾಡಲಾಗುತ್ತಿದೆ ಎಂದು ಪಂಚಾಯಿತಿ ಅಧಿಕಾರಿ ಗಳು ತಿಳಿಸಿದ್ದಾರೆ..
ಬಿಸಿಎಂ ತಾಲೂಕು ಅಧಿಕಾರಿ ಸ್ವಾಮಿ ಅವರು ಈ ಬಗ್ಗೆ ಪ್ರತಿಕ್ರಿಯೆ ವ್ಯಕ್ತ ಪಡಿಸಿದ್ದು, ಪ್ರಸಕ್ತ ಕೊಳವೆ ಬಾವಿಯಲ್ಲಿ ನೀರಿನ ಕೊರತೆ ಕಂಡು ಬಂದಿದೆ. ಇದು ಗಮನಕ್ಕೆ ಬಂದ ತಕ್ಷಣ ಟ್ಯಾಂಕರ್‌ಗಳಲ್ಲಿ ನೀರು ಸರಬರಾಜು ಮಾಡಲಾಗಿದೆ. ಸಂಬAಧಿಸಿದ ಹಾಸ್ಟೆಲ್‌ನಿಂದ ಕೆಲವು ವಿದ್ಯಾರ್ಥಿಗಳನ್ನು ಕುಶಾಲನಗರ ಪಟ್ಟಣದ ಬೈಪಾಸ್ ರಸ್ತೆಯಲ್ಲಿರುವ ನಿಲಯಕ್ಕೆ ಸ್ಥಳಾಂತರಿಸಲು ಕ್ರಮ ಕೈಗೊಳ್ಳಲಾಗಿದೆ. ಕೆಲವು ವಿದ್ಯಾರ್ಥಿಗಳು ಇದಕ್ಕೆ ಸಹಕರಿಸುತ್ತಿಲ್ಲ ಎಂದು ಅವರು ತಿಳಿಸಿದ್ದಾರೆ.