ಕುಶಾಲನಗರ, ಮೇ ೩: ಕಾರ್ಮಿಕರು ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು ಎಂದು ನಿವೃತ್ತ ವೈದ್ಯಾಧಿಕಾರಿ ಡಾ. ರಾಮಚಂದ್ರ ಸಲಹೆಯಿತ್ತರು.
ಕುಶಾಲನಗರ ಸಮೀಪದ ಕೊಪ್ಪ ಗ್ರಾಮದಲ್ಲಿ ಕಾರ್ಮಿಕ ದಿನಾಚರಣೆ ಅಂಗವಾಗಿ ವಿಘ್ನೇಶ್ವರ ಲೋಡರ್ಸ್ ಮತ್ತು ಅನ್ ಲೋಡರ್ಸ್ ಅಸೋಸಿಯೇಷನ್ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ನಿರಂತರ ದುಡಿಯುವ ವರ್ಗ ದುಶ್ಚಟಗಳಿಗೆ ಬಲಿಯಾಗದೆ ತಮ್ಮ ಮಕ್ಕಳ ಶಿಕ್ಷಣದ ಬಗ್ಗೆ ಮುಖ್ಯವಾಗಿ ಗಮನಹರಿಸಬೇಕು ಎಂದರು.
ಸAಘದ ಅಧ್ಯಕ್ಷ ವೆಂಕಟೇಶ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕೊಪ್ಪ ಗ್ರಾಮ ಪಂಚಾಯಿತಿ ಅಧ್ಯಕ್ಷೆ ರೇಣುಕಾ ಸ್ವಾಮಿ, ಸದಸ್ಯರಾದ ಚಂದ್ರಶೇಖರ್, ಮಾಜಿ ಅಧ್ಯಕ್ಷ ಮಕ್ಬೂಲ್, ಸಂಘದ ಉಪಾಧ್ಯಕ್ಷ ಪುಟ್ಟರಾಜು, ಕಾರ್ಯದರ್ಶಿ ಮಹಾದೇವ್, ಖಜಾಂಚಿ ಬಸವರಾಜು ಮತ್ತಿತರರು ಇದ್ದರು.