ಸೋಮವಾರಪೇಟೆ, ಮೇ ೩ : ಸೋಮವಾರಪೇಟೆ ಪಟ್ಟಣದಲ್ಲಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಮತಯಾಚನೆ ನಡೆಸಿದ ನಂತರ ಖಾಸಗಿ ಬಸ್ ನಿಲ್ದಾಣದಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಜೆಡಿಎಸ್ ಅಭ್ಯರ್ಥಿ ನಾಪಂಡ ಮುತ್ತಪ್ಪ ಅವರು, ಚುನಾವಣೆಯಲ್ಲಿ ಜೆಡಿಎಸ್ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದರು.

ನಮ್ಮ ಜೊತೆ ರೈತರು, ಕಾರ್ಮಿಕರು, ದಲಿತರು, ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿದ್ದು, ೩೮ ವರ್ಷಗಳ ನಂತರ ಜನತಾ ಪರಿವಾರದ ಶಾಸಕರನ್ನು ನೋಡುವ ಭಾಗ್ಯ ಮಡಿಕೇರಿ ಕ್ಷೇತ್ರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಈ ಸಂದರ್ಭ ಪಕ್ಷದ ಕ್ಷೇತ್ರ ಸಮಿತಿ ಅಧ್ಯಕ್ಷ ಕೆ.ಟಿ. ಪರಮೇಶ್, ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ಪ್ರವೀಣ್, ತಾಲೂಕು ಅಧ್ಯಕ್ಷ ನಾಗರಾಜ್, ಮಹಿಳಾ ಘಟಕದ ಎಂ.ಎ. ರುಬೀನಾ, ಪ್ರಮುಖರಾದ ಶರಣ್ ಗೌಡ, ಹೊಸಬೀಡು ಹೂವಯ್ಯ, ಪುಷ್ಪ, ಎಂ.ಪಿ. ಹೊನ್ನಪ್ಪ, ದಾಮೋಧರ್, ಪವಿತ್ರ ದೇವೇಂದ್ರ ಸೇರಿದಂತೆ ಇತರರು ಉಪಸ್ಥಿತರಿದ್ದರು.