ಸೋಮವಾರಪೇಟೆ, ಮೇ ೩ : ತಾ. ೧೦ರಂದು ನಡೆಯುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತದಾರರ ಶಿಕ್ಷಣ ಮತ್ತು ಜಾಗೃತಿ ಕಾರ್ಯಕ್ರಮದಡಿ ಕೊಡಗು ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿ ಹಾಗೂ ಸ್ತಿçà ಶಕ್ತಿ ಒಕ್ಕೂಟಗಳ ವತಿಯಿಂದ ಪಟ್ಟಣದ ಸ್ತಿçà ಶಕ್ತಿ ಭವನದಲ್ಲಿ ರಂಗೋಲಿ ಸ್ಪರ್ಧೆ ನಡೆಯಿತು.
ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರಾದ ಜಿ.ಪಂ.ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ಆಕಾಶ್ ಅವರು ಸ್ಪರ್ಧಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಚುನಾವಣೆಯ ದಿನದಂದು ಪ್ರತಿಯೊಬ್ಬ ಅರ್ಹ ಮತದಾರರೂ ತಮ್ಮ ಮತದಾನದ ಹಕ್ಕನ್ನು ಚಲಾಯಿಸಬೇಕು. ಪ್ರಜಾಪ್ರಭುತ್ವವನ್ನು ಮತ್ತಷ್ಟು ಬಲಪಡಿಸುವಲ್ಲಿ ಎಲ್ಲರೂ ಶ್ರಮಿಸಬೇಕೆಂದರು.
ವಿದ್ಯುನ್ಮಾನ ಮತಯಂತ್ರ, ಮತಗಟ್ಟೆ ಕೇಂದ್ರಗಳ ಚಿತ್ರಣ ಒಳಗೊಂಡ ರಂಗೋಲಿ ನೋಡುಗರ ಗಮನ ಸೆಳೆಯಿತು. ವಿಶೇಷವಾಗಿ ೧೮ ವರ್ಷದೊಳಗಿನ ಯುವಕ ಯುವತಿಯರು ಸ್ಫರ್ಧೆಯಲ್ಲಿ ಪಾಲ್ಗೊಂಡಿದ್ದರು.
ಸ್ತಿçÃಶಕ್ತಿ ಒಕ್ಕೂಟದ ಜಿಲ್ಲಾಧ್ಯಕ್ಷೆ ರೆಹನಾ ಸುಲ್ತಾನ್, ಚುನಾವಣಾ ರಾಯಭಾರಿ ಕೆ. ರವಿ ಮುತ್ತಪ್ಪ ಮತ್ತಿತರರು ಇದ್ದರು.