ಮಡಿಕೇರಿ, ಮೇ ೩: ವಿಧಾನಸಭೆ ಚುನಾವಣೆಗೆ ಸಂಬAಧಿಸಿದAತೆ ಪ್ರಚಾರ ಕಾರ್ಯ ಕೈಗೊಳ್ಳಲಾಗಿದ್ದು, ಮತದಾರರಿಂದ ಉತ್ತಮ ಬೆಂಬಲ ಹಾಗೂ ಪ್ರೋತ್ಸಾಹ ಸಿಗುತ್ತಿದೆ. ಇದರಿಂದಾಗಿ ಮೊದಲ ಬಾರಿಗೆ ಚುನಾವಣೆಯಲ್ಲಿ ಗೆಲ್ಲುವ ಅವಕಾಶ ಇದೆ ಎಂದು ಆಮ್ ಆದ್ಮಿ ಪಾರ್ಟಿಯ ವೀರಾಜಪೇಟೆ ಕ್ಷೇತ್ರದ ಅಭ್ಯರ್ಥಿ ಸಿ.ಎಸ್. ರವೀಂದ್ರ ಹೇಳಿದ್ದಾರೆ.
‘ಶಕ್ತಿ’ ಸಂದರ್ಶನದಲ್ಲಿ ಮಾತನಾಡಿದ ಅವರು, ಆಮ್ ಆದ್ಮಿ ಪಕ್ಷ ರಾಷ್ಟಿçÃಯ ಪಕ್ಷವಾಗಿದ್ದು, ಈ ಬಾರಿಯ ಚುನಾವಣೆಯಲ್ಲಿ ಸ್ಪರ್ಧಿಸುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯಕ್ಕೆ ಪೂರಕವಾದ ಹಲವಾರು ಕಾರ್ಯಕ್ರಮಗಳನ್ನು ಪಕ್ಷ ಹಾಕಿಕೊಂಡಿದೆ. ದೆಹಲಿಯಲ್ಲಿ ಆಪ್ ಸರ್ಕಾರವೇ ಆಡಳಿತದಲ್ಲಿದ್ದು, ಅಲ್ಲಿ ನಡೆದಿರುವ ಅಭಿವೃದ್ಧಿ ಕಾರ್ಯಗಳು ಹಾಗೂ ಜನಪರ ಯೋಜನೆಗಳ ಬಗ್ಗೆ ಮತದಾರರಿಗೆ ಮನದಟ್ಟು ಮಾಡುವ ಕೆಲಸವನ್ನು ಪ್ರಚಾರದ ವೇಳೆ ಮಾಡಲಾಗುತ್ತಿದೆ ಎಂದು ರವೀಂದ್ರ ತಿಳಿಸಿದರು. ನಮ್ಮ ಪಕ್ಷ ಪಡೆಯುವ ಮತಗಳಿಂದ ಉಳಿದ ಎರಡು ರಾಷ್ಟಿçÃಯ ಪಕ್ಷಗಳಿಗೆ ಹೊಡೆತ ಬೀಳಲಿದೆ. ಕೊಡಗಿಗೆ ಸಂಬAಧಿಸಿದAತೆ ರಾಷ್ಟಿçÃಯ ಪಕ್ಷಗಳ ಪೈಕಿ ಒಂದು ಪಕ್ಷದಿಂದ ಒಬ್ಬರೇ ವ್ಯಕ್ತಿ ಹಲವಾರು ವರ್ಷಗಳಿಂದ ಅಧಿಕಾರದಲ್ಲಿದ್ದು, ಇದರಿಂದಾಗಿ ಜನತೆ ರೋಸಿಹೋಗಿದ್ದಾರೆ. ಮತ್ತೊಂದು ರಾಷ್ಟಿçÃಯ ಪಕ್ಷವನ್ನು ರಾಷ್ಟçಮಟ್ಟದಲ್ಲೇ ಜನರು ತಿರಸ್ಕಾರ ಮಾಡಿದ್ದಾರೆ. ಇದು ನಮ್ಮ ಪಕ್ಷಕ್ಕೆ ಲಾಭದಾಯಕವಾಗಲಿದೆ ಎಂದು ರವೀಂದ್ರ ಅವರು ನುಡಿದರು.
ಜನರಿಗೆ ಅಗತ್ಯ ಸೌಕರ್ಯಗಳು, ಜೀವನ ಭದ್ರತೆ ಒದಗಿಸುವುದು ನಮ್ಮ ಮುಖ್ಯ ಗುರಿಯಾಗಿದೆ. ಈ ಹಿನ್ನೆಲೆಯಲ್ಲಿ ಮತದಾರರ ಮನೆ ಮನೆಗಳಿಗೆ ತೆರಳಿ ಆಪ್ ಪಕ್ಷದ ಉದ್ದೇಶ ಹಾಗೂ ಸಿದ್ಧಾಂತದ ಬಗ್ಗೆ ಮನವರಿಕೆ ಮಾಡಲಾಗುತ್ತಿದ್ದು, ಮತದಾರರಿಂದ ಉತ್ತಮ ಸ್ಪಂದನ ಸಿಗುತ್ತಿದೆ ಎಂದು ಅವರು ಹೇಳಿದರು. -ಉಜ್ವಲ್ ರಂಜಿತ್.