ಮಡಿಕೇರಿ ಮೇ ೩ : ಪೊನ್ನಂಪೇಟೆ ೬೬/೧೧ ಕೆವಿ ವಿದ್ಯುತ್ ಮಾರ್ಗದಲ್ಲಿ ತುರ್ತು ನಿರ್ವಹಣೆ ಕಾರ್ಯವನ್ನು ನಿರ್ವಹಿಸಬೇಕಿರುವುದರಿಂದ ಕ.ವಿ.ಪ್ರ.ನಿ.ನಿ. ರವರ ಕೋರಿಕೆಯಂತೆ ತಾ. ೪ ರಂದು (ಇಂದು) ಬೆಳಿಗ್ಗೆ ೧೦.೩೦ ಗಂಟೆಯಿAದ ಮಧ್ಯಾಹ್ನ ೧.೩೦ ಗಂಟೆಯವರೆಗೆ ೬೬/೧೧ ಕೆವಿ ಪೊನ್ನಂಪೇಟೆ, ೬೬/೧೧ ಕೆವಿ ವೀರಾಜಪೇಟೆ, ೩೩/೧೧ ಕೆವಿ ಶ್ರೀಮಂಗಲ, ೩೩/೧೧ಕೆವಿ ಸಿದ್ದಾಪುರ ೩೩/೧೧ಕೆವಿ ಮೂರ್ನಾಡು ವಿದ್ಯುತ್ ಉಪ ಕೇಂದ್ರಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು.
ಪೊನ್ನಂಪೇಟೆ, ಗೋಣಿಕೊಪ್ಪಲು, ನಲ್ಲೂರು, ಹುದಿಕೇರಿ, ತಿತಿಮತಿ, ಹಾತೂರು, ಪಾಲಿಬೆಟ್ಟ, ಶ್ರೀಮಂಗಲ, ಬಾಳಲೆ, ಕಾನೂರು, ಬಿರುನಾಣಿ, ಕುಟ್ಟ, ವೀರಾಜಪೇಟೆ, ಬಿ.ಶೆಟ್ಟಗೇರಿ, ಬೇತ್ರಿ, ಕಡಂಗಮರೂರು, ಕಾಕೋಟುಪರಂಬು, ಅಮ್ಮತ್ತಿ, ಸಿದ್ದಾಪುರ, ಮಾಲ್ದಾರೆ, ಮೂರ್ನಾಡು, ಮರುಗೋಡು, ನಾಪೋಕ್ಲು, ಕಕ್ಕಬೆ, ಅರೆಕಾಡು, ಐಯ್ಯಂಗೇರಿ ಹಾಗೂ ಸುತ್ತಮುತ್ತಲ÷ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಮಡಿಕೇರಿ ವಿಭಾಗದ ಸೆಸ್ಕ್ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.