ವೀರಾಜಪೇಟೆ, ಮೇ ೩: ಜೆಡಿಎಸ್ ಪಕ್ಷದ ವತಿಯಿಂದ ವಿರಾಜಪೇಟೆ ನಗರದ ಪ್ರಮುಖ ಬೀದಿಗಳಲ್ಲಿ ರೋಡ್ ಶೋ ನಡೆಸಿ ಗಡಿಯಾರ ಕಂಬದ ಬಳಿ ಮತ್ತು ಖಾಸಗಿ ಬಸ್ ನಿಲ್ದಾಣದಲ್ಲಿ ಬಹಿರಂಗ ಸಭೆ ನಡೆಸಿ ಅಭ್ಯರ್ಥಿ ಎಂ.ಎ.ಮನ್ಸೂರ್ ಆಲಿ ಪರ ಮತ ಯಾಚಿಸಿದರು.

ಈ ಸಂದರ್ಭ ಜೆಡಿಎಸ್ ಪಕ್ಷದ ಜಿಲ್ಲಾ ಅಧ್ಯಕ್ಷ ಕೆ.ಎಂ.ಗಣೇಶ್ ಅವರು ಕುಮಾರಸ್ವಾಮಿ ಅವರು ಮಾಡಿರುವ ಅಭಿವೃದ್ಧಿ ಕೆಲಸಗಳನ್ನು ಮತದಾರರ ಮುಂದಿಟ್ಟು ಮತ ಯಾಚಿಸಲಾಗಿದ್ದು ಜಿಡಿಎಸ್ ಪಕ್ಷದ ಗೆಲುವು ಖಚಿತ ಎಂದರು.

ಜೆಡಿಎಸ್ ಪಕ್ಷದ ಮಹಿಳಾ ಘಟಕದ ಜಿಲ್ಲಾ ಅಧ್ಯಕ್ಷೆ ಪುಷ್ಪಾವತಿ ರಮೇಶ್ ಮಾತನಾಡಿ, ಕಾಂಗ್ರೆಸ್ ಪಕ್ಷ ೭೦ ವರ್ಷಗಳಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡದೆ ಈಗ ಗ್ಯಾರಂಟಿ ಕಾರ್ಡ್ ಕೊಡುತ್ತಿದ್ದಾರೆ ಎಂದರು. ಈ ಚುನಾವಣೆಯಲ್ಲಿ ಮತದಾರರು ಜೆಡಿಎಸ್ ಪಕ್ಷದತ್ತ ಒಲವು ತೋರಿದ್ದಾರೆ.

ಪಕ್ಷದ ಪ್ರಚಾರ ಸಮಿತಿ ಅಧ್ಯಕ್ಷ ಇಸಾಕ್ ಖಾನ್ ಮಾತನಾಡಿ ರಾಷ್ಟಿçÃಯ ಪಕ್ಷ ಕಾಂಗ್ರೇಸ್ ಜನಾಂಗ ಜನಾಂಗದ ಮಧ್ಯೆ ವಿಷ ಬೀಜ ಬಿತ್ತುತ್ತಿದೆ. ಜೆಡಿಎಸ್ ಪಕ್ಷ ಬಿಜೆಪಿ ಪರವಾಗಿದೆ ಎಂದು ಜೆಡಿಎಸ್ ವಿರುದ್ದ ಅಪಪ್ರಚಾರದಲ್ಲಿ ತೊಡಗಿದೆ. ಈ ರೀತಿ ಎತ್ತಿಕಟ್ಟುವ ಕೆಲಸದಿಂದಾಗಿಯೇ ಕಾಂಗ್ರೆಸ್ ತನ್ನ ಸ್ಥಾನ ಮಾನ ಕಳೆದುಕೊಂಡು ಬಿಜೆಪಿ ಇಲ್ಲಿ ಬೆಳೆಯಲು ಸಾಧ್ಯವಾಗಿದೆ ಎಂದರು.

ಜೆಡಿಎಸ್ ಅಭ್ಯರ್ಥಿ ಎಂ. ಎ. ಮನ್ಸೂರ್ ಅಲಿ ಮಾತನಾಡಿ ಕೊನೆಯ ಗಳಿಗೆಯಲ್ಲಿ ತನಗೆ ಟಿಕೆಟ್ ಸಿಕ್ಕಿದ್ದು, ಜನ ಪಕ್ಷದ ಮೇಲೆ ವಿಶ್ವಾಸವಿಟ್ಟು ಮತ ನೀಡಲಿದ್ದಾರೆ ಎಂದರು. ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಪಿ.ಎ.ಮಂಜುನಾಥ್, ಜಿಲ್ಲಾ ಅಲ್ಪ ಸಂಖ್ಯಾತ ಘಟಕದ ಜಾಸೀರ್, ಕಾರ್ಯದರ್ಶಿ ಮೋಹನ್ ಮೌರ್ಯ ಮಾತನಾಡಿದರು. ರೋಡ್ ಶೋ ಮತ್ತು ಸಭೆಯಲ್ಲಿ ಯುಸೂಫ್ ಕೊಂಡAಗೇರಿ, ಜಿಲ್ಲಾ ಅಲ್ಪಸಂಖ್ಯಾತ ಯುವ ಘಟಕ ಅಧ್ಯಕ್ಷ ಕಾಲೇರ ಅಲಿ ಹಾಗೂ ಇತರರು ಭಾಗವಹಿಸಿದ್ದರು.