ಸಿದ್ದಾಪುರ, ಮೇ ೩ : ಸಿದ್ದಾಪುರದಲ್ಲಿ ಸಿಐಟಿಯು ಕಾರ್ಮಿಕ ಸಂಘಟನೆ ವತಿಯಿಂದ ಕಾರ್ಮಿಕ ದಿನಾಚರಣೆಯನ್ನು ಅರ್ಥಪೂರ್ಣ ವಾಗಿ ಆಚರಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ಸಿದ್ದಾಪುರದ ವೀರಾಜಪೇಟೆ ರಸ್ತೆಯಲ್ಲಿ ಸಿದ್ದಾಪುರ, ಮೇ ೩ : ಸಿದ್ದಾಪುರದಲ್ಲಿ ಸಿಐಟಿಯು ಕಾರ್ಮಿಕ ಸಂಘಟನೆ ವತಿಯಿಂದ ಕಾರ್ಮಿಕ ದಿನಾಚರಣೆಯನ್ನು ಅರ್ಥಪೂರ್ಣ ವಾಗಿ ಆಚರಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ಸಿದ್ದಾಪುರದ ವೀರಾಜಪೇಟೆ ರಸ್ತೆಯಲ್ಲಿ ಧ್ವಜಾರೋಹಣ ನೆರವೇರಿಸಿದರು. ಇದಾದ ಬಳಿಕ ಸಿದ್ದಾಪುರದ ಸೆಂಟಿನರಿ ಸಭಾಂಗಣದಲ್ಲಿ ಸಭಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಡಾ. ಎಸ್.ವೈ ಗುರುಶಾಂತ್ ಕಾರ್ಮಿಕರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಹಾಗೂ ಸರಕಾರಗಳು ಕಾರ್ಮಿಕರ ವಿರುದ್ಧ ಜಾರಿಗೆ ತಂದಿರುವ ವಿರೋಧಿ ನೀತಿಗಳ ಬಗ್ಗೆ ಪ್ರಸ್ತಾಪಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಿಐಟಿಯು ಜಿಲ್ಲಾಧ್ಯಕ್ಷ ಪಿ.ಆರ್ ಭರತ್ ವಹಿಸಿದ್ದರು. ಕಾರ್ಯಕ್ರಮದಲ್ಲಿ ಸಿಐಟಿಯು ಕಾರ್ಮಿಕ ಸಂಘಟನೆ ಪದಾಧಿಕಾರಿಗಳಾದ ಎನ್.ಡಿ. ಕುಟ್ಟಪ್ಪ, ಹೆಚ್.ಬಿ. ರಮೇಶ್, ಮಹಾದೇವ್, ಪುಷ್ಪಾ ಬಾಲನ್, ಎ.ಸಿ. ಸಾಬೂ, ಕೆ.ಎಸ್. ರತೀಶ್, ಹೆಚ್.ಆರ್. ನವೀನ್ ಕುಮಾರ್ ಇನ್ನಿತರರು ಹಾಜರಿದ್ದರು.