ಮಡಿಕೇರಿ, ಮೇ ೩: ಬೆಂಗಳೂರಿನ ಮಲ್ಲೇಶ್ವರಂನ ಸೇವಾ ಸದನದಲ್ಲಿ ಶ್ರೀ ಸತ್ಯಸಾಯಿ ಸಾಂಸ್ಕೃತಿಕ ಮತ್ತು ಸಾಮಾಜಿಕ ಕೇಂದ್ರದ ವತಿಯಿಂದ ನಡೆದ ರಾಜ್ಯ ಮಟ್ಟದ ಸಾಂಸ್ಕೃತಿಕ ಸಂಭ್ರಮ ಹಾಗೂ ಪ್ರತಿಭೋತ್ಸವದಲ್ಲಿ ವೀರಾಜಪೇಟೆಯ ನಾಟ್ಯ ಮಯೂರಿ ನೃತ್ಯ ಶಾಲೆಯ ಸಂಸ್ಥಾಪಕಿ ವಿದೂಷಿ ಪ್ರೇಮಾಂಜಲಿ ಆಚಾರ್ಯ ಅವರಿಗೆ ಭಾರತ ಸೇವಾರತ್ನ ಪ್ರಶಸ್ತಿ ಪ್ರದಾನ ಮಾಡಲಾಯಿತು.

ವಿದ್ಯಾರ್ಥಿಗಳಾದ ಶ್ರೇಯಾ ಸೋಮಣ್ಣ, ಚಿರಂತನ್, ಭುವನ, ಟಿಯಾನ, ತೇಜಸ್ವಿನಿ, ಶಿವಾನಿ, ಚೈತನ್ಯ ಇವರಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.