ಸಿದ್ದಾಪುರ, ಮೇ ೩ : ಕೊಡಗು ಜಿಲ್ಲೆಯಲ್ಲಿ ಬಿಜೆಪಿ ಪಕ್ಷದ ಅಭಿವೃದ್ಧಿಯು ಶೂನ್ಯವಾಗಿದೆ ಎಂದು ಜೆಡಿಎಸ್ ಪಕ್ಷದ ಮಡಿಕೇರಿ ಕ್ಷೇತ್ರದ ಅಭ್ಯರ್ಥಿ ನಾಪಂಡ ಮುತ್ತಪ್ಪ ಆರೋಪಿಸಿದರು. ನೆಲ್ಯಹುದಿಕೇರಿಯ ಪಟ್ಟಣದಲ್ಲಿ ಚುನಾವಣಾ ಪ್ರಚಾರ ಹಾಗೂ ಮತಯಾಚನೆಗೆ ಆಗಮಿಸಿದ ನಂತರ ಪಟ್ಟಣದಲ್ಲಿ ನಡೆದ ಬಹಿರಂಗ ಸಭೆಯಲ್ಲಿ ಮಾತನಾಡಿದರು. ಜಿಲ್ಲೆಯ ಜನತೆ ಈ ಬಾರಿ ಬದಲಾವಣೆ ಬಯಸಿದ್ದು, ಈ ಹಿನ್ನೆಲೆಯಲ್ಲಿ ಮಡಿಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷದ ಗೆಲುವು ಖಚಿತವೆಂದರು.

ಜೆಡಿಎಸ್ ಪಕ್ಷದ ಜಿಲ್ಲಾಧ್ಯಕ್ಷರಾದ ಕೆ.ಎಂ. ಗಣೇಶ್ ಮಾತನಾಡಿ ಈ ಬಾರಿ ಹೆಚ್.ಡಿ ಕುಮಾರಸ್ವಾಮಿ ರವರ ನೇತೃತ್ವದಲ್ಲಿ ಜೆಡಿಎಸ್ ಪಕ್ಷವು ರಾಜ್ಯದಲ್ಲಿ ಅಧಿಕಾರಕ್ಕೆ ಬರುವುದು ಖಚಿತ ಹಾಗೂ ಮುಖ್ಯಮಂತ್ರಿಯಾಗಿ ಕುಮಾರಸ್ವಾಮಿರವರು ಅಧಿಕಾರದ ಚುಕ್ಕಾಣಿ ಹಿಡಿಯುತ್ತಾರೆ ಎಂದರು.

ಸಭೆಯಲ್ಲಿ ಜೆಡಿಎಸ್ ಪಕ್ಷದ ಮಹಿಳಾ ಘಟಕದ ಅಧ್ಯಕ್ಷೆ ಬಿ.ಬಿ ಪುಷ್ಪಾವತಿ, ಹಿಂದುಳಿದ ವರ್ಗದ ಜಿಲ್ಲಾಧ್ಯಕ್ಷ ಎಂ.ಕೆ ಶಿವದಾಸ್, ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷರಾದ ಇಸಾಕ್‌ಖಾನ್, ಯುವ ಜೆಡಿಎಎಸ್ ಜಿಲ್ಲಾಧ್ಯಕ್ಷ ಸಿ.ಎಲ್ ವಿಶ್ವ, ಪಕ್ಷದ ಪದಾಧಿಕಾರಿಗಳಾದ ರವಿ ಕುಮಾರ್, ಕಲಂದರ್ ಬಾಷಾ, ಡೆನ್ನಿ ಬರೋಸ್, ಎಂ.ಎಸ್ ಶರತ್ ಕುಮಾರ್ ಇನ್ನಿತರರು ಹಾಜರಿದ್ದರು.