ಕುಶಾಲನಗರ, ಮೇ ೩ : ರಾಷ್ಟçದ ಭವಿಷ್ಯ ಮತ್ತು ಮುಂದಿನ ಪೀಳಿಗೆಯ ಬಗ್ಗೆ ಚಿಂತನೆ ಮಾಡುವ ಮೂಲಕ ಪ್ರತಿಯೊಬ್ಬರು ಮತ ಚಲಾವಣೆ ಮಾಡಬೇಕಾಗಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಬಿ ಕೆ ಹರಿಪ್ರಸಾದ್ ಕರೆ ನೀಡಿದ್ದರು.

ಅವರು ಕುಶಾಲನಗರದಲ್ಲಿ ಬ್ಲಾಕ್ ಕಾಂಗ್ರೆಸ್ ಕಚೇರಿ ಉದ್ಘಾಟನೆ ಮತ್ತು ಬಹಿರಂಗ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿ, ಕಾಂಗ್ರೆಸ್ ಸರ್ಕಾರದ ಜನಪರ ಕಾರ್ಯಕ್ರಮ ಗಳನ್ನು ರದ್ದು ಮಾಡಿ ಜನವಿರೋಧಿ ನೀತಿಗಳನ್ನು ಅನುಸರಿಸಿದ ಬಿಜೆಪಿಗೆ ಮತ ನೀಡದಂತೆ ಎಚ್ಚರ ವಹಿಸಬೇಕಾಗಿದೆ ಎಂದು ಹೇಳಿದರು. ರಾಜ್ಯದಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತ ದೊರಕದಿದ್ದರೂ ಆಪರೇಷನ್ ಕಮಲ ಮತ್ತಿತರ ಹಿಂಬಾಗಿಲ ಚಟುವಟಿಕೆಗಳ ಮೂಲಕ ಸರ್ಕಾರ ನಡೆಸುತ್ತಿದ್ದಾರೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಭ್ರಷ್ಟಾಚಾರ, ಬೆಲೆ ಏರಿಕೆ, ರೈತ ವಿರೋಧಿ ನೀತಿಗಳೇ ಕಂಡುಬರುತ್ತವೆ ಎಂದು ಆರೋಪಿಸಿದರು. ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಮಾಜಿ ಸಚಿವೆ ಚಿತ್ರನಟಿ ಉಮಾಶ್ರೀ ಮಾತನಾಡಿ, ಬಿಜೆಪಿ ಜನರಲ್ಲಿ ಗೊಂದಲಮಯ ವಿಚಾರಗಳನ್ನು ಮುಂದಿರಿಸಿಕೊAಡು ಸಮಾಜದಲ್ಲಿ ಅಶಾಂತಿ ಮೂಡಿಸುತ್ತಿದೆ. ಈ ಬಾರಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬರುವಂತೆ ಮತದಾರರು ಮನಸ್ಸು ಮಾಡಬೇಕಾಗಿದೆ ಎಂದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಕೆಪಿಸಿಸಿ ಸದಸ್ಯ ಮಂಜುನಾಥ ಗುಂಡೂರಾವ್ ಈ ಬಾರಿಯ ಚುನಾವಣೆಯಲ್ಲಿ ಮತದಾರರು ಬಿಜೆಪಿಗೆ ತಕ್ಕ ಪಾಠವನ್ನು ಕಲಿಸುತ್ತಾರೆ ಎಂದರು. ಅಭ್ಯರ್ಥಿ ಡಾ. ಮಂತರ್ ಗೌಡ ಮಾತನಾಡಿ, ಈ ಬಾರಿ ತನ್ನ ಗೆಲುವಿಗೆ ಪ್ರತಿಯೊಬ್ಬರೂ ಬೆಂಬಲಿಸಬೇಕಾಗಿದೆ ಎಂದು ಮನವಿ ಮಾಡಿದರು.

ಮಾಜಿ ಶಾಸಕ ಇಬ್ರಾಹಿಂ ಮಾಸ್ಟರ್ ಅವರು ಮಾತನಾಡಿದರು. ಕುಶಾಲನಗರ ಪಟ್ಟಣದಲ್ಲಿ ಬ್ಲಾಕ್ ಕಾಂಗ್ರೆಸ್ ಕಚೇರಿ ಉದ್ಘಾಟನೆ ಮಾಡಿದ ನಂತರ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಬೃಹತ್ ರೋಡ್ ಶೋ ನಡೆಯಿತು. ಈ ಸಂದರ್ಭ ಪಕ್ಷದ ಜಿಲ್ಲಾಧ್ಯಕ್ಷ ಧರ್ಮಜ ಉತ್ತಪ್ಪ, ಪ್ರಮುಖರಾದ ಕೆ.ಪಿ. ಚಂದ್ರಕಲಾ, ನಗರಾಧ್ಯಕ್ಷ ಪ್ರಮೋದ್ ಮುತ್ತಪ್ಪ, ಕೆ.ಎಂ. ಲೋಕೇಶ್, ಸುರಯ್ಯ ಅಬ್ರಾರ್, ಕೆ.ಕೆ. ಮಂಜುನಾಥ್ ಕುಮಾರ್, ಕೆ.ಎ. ಯಾಕೋಬ್, ನಟೇಶ್ ಗೌಡ, ಮಿಥುನ್ ಗೌಡ, ಉಸ್ಮಾನ್ ಮತ್ತಿತರರು ಇದ್ದರು.