ಕುಶಾಲನಗರ, ಮೇ ೩: ಕುಶಾಲನಗರ ಕನ್ನಿಕಾ ಪರಮೇಶ್ವರಿ ದೇವಸ್ಥಾನದಲ್ಲಿ ವಾಸವಿ ಜನ್ಮಚರಿತ್ರೆಯನ್ನು ಗಣಪತಿ ದೇವಸ್ಥಾನದ ಪ್ರಧಾನ ಅರ್ಚಕ ಆರ್.ಕೆ. ನಾಗೇಂದ್ರ ಬಾಬು ಲೋಕಾರ್ಪಣೆ ಗೊಳಿಸಿದರು.
ವಾಸವಿ ಬಾಲಕಿಯರ ಸಂಘದ ಆಶ್ರಯದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಅಧ್ಯಕ್ಷೆ ಇಬ್ಬನಿ, ಕಾರ್ಯದರ್ಶಿ ಸಾನ್ವಿ, ಆರ್ಯವೈಶ್ಯ ಮಂಡಳಿ ಅಧ್ಯಕ್ಷ ಬಿ.ಎಲ್. ಉದಯಕುಮಾರ್, ಬಿ.ಆರ್. ನಾಗೇಂದ್ರ ಪ್ರಸಾದ್ ಸಮುದಾಯದ ಸದಸ್ಯರು ಉಪಸ್ಥಿತರಿದ್ದರು.