ಕುಶಾಲನಗರ, ಮೇ ೩: ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯಲ್ಲಿ ಭಜರಂಗದಳ ನಿಷೇಧ ಪ್ರಸ್ತಾವನೆಯನ್ನು ಹಿಂದೂಪರ ಸಂಘಟನೆಗಳು ವಿರೋಧಿಸಿದ್ದು, ಕುಶಾಲನಗರದಲ್ಲಿ ಸಂಘಟನೆಗಳ ಪ್ರಮುಖರು ಕಾಂಗ್ರೆಸ್‌ನ ಹಿಂದೂ ವಿರೋಧಿ ನೀತಿ ವಿರುದ್ಧ ಮನೆ ಮನೆ ಅಭಿಯಾನ ಆರಂಭಿಸಿದ್ದಾರೆ.

ಭಜರAಗದಳದ ಜಿಲ್ಲಾ ಸಂಚಾಲಕ ಅನೀಶ್, ವಿಶ್ವ ಹಿಂದೂ ಪರಿಷತ್ ತಾಲೂಕು ಸಂಚಾಲಕ ಬಿ.ಎಸ್. ದಿನೇಶ್ ನೇತೃತ್ವದಲ್ಲಿ ಮತದಾನದ ಮೂಲಕ ರಾಷ್ಟಿçÃಯ ಕರ್ತವ್ಯವನ್ನು ನೆರವೇರಿಸುವ ನಿಟ್ಟಿನಲ್ಲಿ ಮತದಾರರಲ್ಲಿ ಜಾಗೃತಿ ಮೂಡಿಸುವ ಕಾಯಕ ನಡೆಯುತ್ತಿದೆ ಎಂದು ಹಿಂದೂ ಪರ ಸಂಘಟನೆಗಳ ಪ್ರಮುಖರು ತಿಳಿಸಿದ್ದಾರೆ.

ಈ ಸಂದರ್ಭ ಸುದ್ದಿಗಾರರೊಂದಿಗೆ ಮಾತನಾಡಿದ, ಭಜರಂಗದಳದ ಜಿಲ್ಲಾ ಸಂಚಾಲಕ ಅನೀಶ್ ಭಜರಂಗದಳ ರಾಷ್ಟç ವಿರೋಧಿ ಸಂಘಟನೆ ಅಲ್ಲ, ನಿಷೇಧ ಮಾಡುವುದಾಗಿ ಹೇಳಿರುವ ಕಾಂಗ್ರೆಸ್ ಪಕ್ಷದ ರಾಷ್ಟç ವಿರೋಧಿ ನೀತಿಯನ್ನು ಖಂಡಿಸುತ್ತೇವೆ ಎಂದರು. ವಿಶ್ವ ಹಿಂದೂ ಪರಿಷತ್ ತಾಲೂಕು ಅಧ್ಯಕ್ಷ ಬಿ.ಎಸ್. ದಿನೇಶ್ ಮಾತನಾಡಿ, ಸಂಘಟನೆಗಳ ಕಾರ್ಯಕರ್ತರ ಮೂಲಕ ಹಿಂದೂ ವಿರೋಧಿ ನೀತಿಯನ್ನು ಮತದಾರರಿಗೆ ತಿಳಿಸಿ ಜಾಗೃತಿ ಮೂಡಿಸುವುದಾಗಿ ಹೇಳಿದರು.

ಹಿಂದೂ ಪರ ಸಂಘಟನೆಗಳ ಪ್ರಮುಖರು ಕುಶಾಲನಗರದ ಪ್ರಮುಖ ಬೀದಿಗಳಲ್ಲಿ ಮನೆಮನೆಗೆ ತೆರಳಿ ಪ್ರತಿಯೊಬ್ಬರೂ ಮತದಾನದಲ್ಲಿ ಪಾಲ್ಗೊಳ್ಳುವಂತೆ ಮನವರಿಕೆ ಮಾಡುವುದರೊಂದಿಗೆ ಮತದಾನಕ್ಕೂ ಮುನ್ನ ಯೋಚಿಸಿ ಮತ ಚಲಾಯಿಸಿ ಎಂದು ಅರಿವು ಮೂಡಿಸುತ್ತಿದ್ದ ದೃಶ್ಯ ಗೋಚರಿಸಿತು. ಎಬಿವಿಪಿ ಸಂಚಾಲಕ ಜಯಪ್ರಕಾಶ್, ವಿಶ್ವ ಹಿಂದೂ ಪರಿಷತ್ ಉಪಾಧ್ಯಕ್ಷ ಬಾಲಕೃಷ್ಣ, ಹಿಂದೂ ಜಾಗರಣಾ ವೇದಿಕೆಯ ನಾಣಿ ಮತ್ತಿತರರು ಇದ್ದರು.