ಸೋಮವಾರಪೇಟೆ, ಮೇ ೪: ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಸಾಹಿತ್ಯ ಪರಿಷತ್‌ನ ೧೦೮ ನೇ ಸಂಸ್ಥಾಪನಾ ದಿನಾಚರಣೆ ತಾ. ೫ ರಂದು (ಇಂದು) ಬೆಳಿಗ್ಗೆ ೧೧ ಗಂಟೆಗೆ ಕನ್ನಡ ಸಾಹಿತ್ಯ ಭವನದಲ್ಲಿ ನಡೆಯಲಿದೆ. ಅಧ್ಯಕ್ಷತೆಯನ್ನು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಸ್.ಡಿ. ವಿಜೇತ್ ವಹಿಸಲಿದ್ದು, ಉದ್ಘಾಟನೆಯನ್ನು ಪೊಲೀಸ್ ನಿರೀಕ್ಷಕ ರಾಮಚಂದ್ರ ನಾಯಕ್ ನೆರವೇರಿಸುತ್ತಾರೆ. ೬ನೇ ತಾಲೂಕು ಸಾಹಿತ್ಯ ಸಮ್ಮೇಳನದ ಅಧ್ಯಕ್ಷೆ ಜಲಾ ಕಾಳಪ್ಪ ಹಾಗೂ ೮ನೇ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಶ.ಗ. ನಯನ ತಾರಾ ಭಾಗವಹಿಸಲಿದ್ದಾರೆ ಎಂದು ಪರಿಷತ್ ಗೌರವ ಕಾರ್ಯದರ್ಶಿ ಜ್ಯೋತಿ ಅರುಣ್ ತಿಳಿಸಿದ್ದಾರೆ.