ಸೇನಾ ಹೆಲಿಕಾಪ್ಟರ್ ಪತನ
ಜಮ್ಮು, ಮೇ ೪: ಜಮ್ಮು ಮತ್ತು ಕಾಶ್ಮೀರದ ಕಿಶ್ತಾ÷್ವರ್ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಗುರುವಾರ ಭಾರತೀಯ ಸೇನೆಯ ಎಎಲ್‌ಹೆಚ್ ಧ್ರುವ ಹೆಲಿಕಾಪ್ಟರ್ ಪತನಗೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭಾರತೀಯ ಸೇನೆಯ ಈ ಹೆಲಿಕಾಪ್ಟರ್‌ನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಸಿಬ್ಬಂದಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಿಶ್ತಾ÷್ವರ್ ಜಿಲ್ಲೆಯ ಮರ್ವಾ ಪ್ರದೇಶದಲ್ಲಿ ಈ ಅಪಘಾತ ಸಂಭವಿಸಿದ್ದು, ಗಾಯಗೊಂಡ ಸ್ಥಿತಿಯಲ್ಲಿ ಪೈಲಟ್ ಮತ್ತು ಸಹ ಪೈಲಟ್‌ರನ್ನು ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಕುಸ್ತಿಪಟುಗಳಿಂದ ಪ್ರಶಸ್ತಿಗಳನ್ನು ಹಿಂದಿರುಗಿಸುವ ಎಚ್ಚರಿಕೆ
ನವದೆಹಲಿ, ಮೇ ೪: ದೆಹಲಿ ಪೊಲೀಸರ ದೌರ್ಜನ್ಯದಿಂದ ಮನನೊಂದ ಪ್ರತಿಭಟನಾ ನಿರತ ಕುಸ್ತಿಪಟುಗಳು ಇಂದು ತಮ್ಮ ಪದಕ ಮತ್ತು ಪ್ರಶಸ್ತಿಗಳನ್ನು ಸರ್ಕಾರಕ್ಕೆ ಹಿಂದಿರುಗಿಸುವುದಾಗಿ ಬೆದರಿಕೆ ಹಾಕಿದ್ದು, ಈ ರೀತಿ ಅಗೌರವ ತೋರಿದರೆ ಯಾವುದೇ ಪ್ರಯೋಜನವಾಗುವುದಿಲ್ಲ ಎಂದು ಹೇಳಿದ್ದಾರೆ. ಈ ಗಲಾಟೆಯಲ್ಲಿ ಸಂಗೀತಾ ಫೋಗಟ್ ಸಹೋದರ ದುಶ್ಯಂತ್ ಸೇರಿದಂತೆ ಇಬ್ಬರು ಕುಸ್ತಿಪಟುಗಳಿಗೆ ಗಾಯಗಳಾಗಿವೆ. ಒಲಿಂಪಿಕ್ಸ್ ಕಂಚಿನ ಪದಕ ವಿಜೇತ ಬಜರಂಗ್ ಪುನಿಯಾ ಗುರುವಾರ ಬೆಳಿಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿ, ಕುಸ್ತಿಪಟುಗಳನ್ನು ಈ ರೀತಿ ನಡೆಸಿಕೊಳ್ಳುವುದು ಎಷ್ಟು ಸರಿ. ಇದು ಹೀಗೆ ಮುಂದುವರೆದರೆ ನಾವು ನಮ್ಮ ಎಲ್ಲಾ ಪದಕಗಳು ಮತ್ತು ಪ್ರಶಸ್ತಿಗಳನ್ನು ಭಾರತ ಸರ್ಕಾರಕ್ಕೆ ಹಿಂದಿರುಗಿಸುತ್ತೇವೆ. ಬಳಿಕ ಸಾಮಾನ್ಯ ಜೀವನವನ್ನು ನಡೆಸುತ್ತೇವೆ ಎಂದರು. ಅಪ್ರಾಪ್ತ ವಯಸ್ಕ ಸೇರಿದಂತೆ ಏಳು ಕುಸ್ತಿಪಟುಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಕುಸ್ತಿ ಫೆಡರೇಶನ್ ಆಫ್ ಇಂಡಿಯಾ (ಡಬ್ಲ್ಯುಎಫ್‌ಐ) ಅಧ್ಯಕ್ಷ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ಬಂಧಿಸುವAತೆ ಒತ್ತಾಯಿಸಿ ಏಪ್ರಿಲ್ ೨೩ ರಿಂದ ರಾಷ್ಟç ರಾಜಧಾನಿಯಲ್ಲಿ ಕುಸ್ತಿಪಟುಗಳು ಮತ್ತೆ ಮುಷ್ಕರ ನಡೆಸುತ್ತಿದ್ದಾರೆ. ಇನ್ನು ಕುಸ್ತಿ ಫೆಡರೇಶನ್ ಅಧ್ಯಕ್ಷರ ವಿರುದ್ಧ ದೆಹಲಿ ಪೊಲೀಸರು ಎರಡು ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ. ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರು ಈ ಎಲ್ಲಾ ಆರೋಪಗಳನ್ನು ನಿರಾಕರಿಸಿದ್ದು ಪ್ರತಿಭಟನೆಯು ರಾಜಕೀಯ ಪ್ರೇರಿತವಾಗಿದೆ ಎಂದು ಹೇಳಿದ್ದಾರೆ. ಲೈಂಗಿಕ ಕಿರುಕುಳದ ಆರೋಪದ ಮೇಲೆ ಭಾರತದ ಕುಸ್ತಿ ಫೆಡರೇಶನ್ (ಡಬ್ಲ್ಯುಎಫ್‌ಐ) ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ದೆಹಲಿ ಪೊಲೀಸರು ಎಫ್‌ಐಆರ್ ದಾಖಲಿಸಿದ ನಂತರ, ಅಂರ‍್ರಾಷ್ಟಿçÃಯ ಪಂದ್ಯಾವಳಿಗಳಲ್ಲಿ ಭಾರತವನ್ನು ಪ್ರತಿನಿಧಿಸಿದ್ದ ಮೂವರು ಮಹಿಳಾ ಕುಸ್ತಿಪಟುಗಳು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮುಕ್ತಾಯಗೊಳಿಸಿದೆ. ಇದೇ ವೇಳೆ ಅರ್ಜಿದಾರರಿಗೆ ಯಾವುದೇ ಇತರ ಸಮಸ್ಯೆಗಳ ಸಂದರ್ಭದಲ್ಲಿ ಮ್ಯಾಜಿಸ್ಟೆçÃಟ್ ಅಥವಾ ದೆಹಲಿ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಲು ಸ್ವತಂತ್ರರು ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಬೆಂಗಳೂರಿನಲ್ಲಿ ಮೋದಿ ರೋಡ್ ಶೋ
ಬೆಂಗಳೂರು, ಮೇ ೪: ಮಳೆ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಶನಿವಾರ ಸಂಜೆ ನಡೆಯಬೇಕಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ರೋಡ್ ಶೋನಲ್ಲಿ ಬದಲಾವಣೆ ಆಗಿದ್ದು, ಸಂಜೆ ಬದಲು ಶನಿವಾರ ಬೆಳಿಗ್ಗೆ ಮತ್ತು ಭಾನುವಾರ ಬೆಳಿಗ್ಗೆ ಎರಡು ದಿನ ರೋಡ್ ಶೋ ನಡೆಯಲಿದೆ. ಬೆಂಗಳೂರಿನಲ್ಲಿ ಶನಿವಾರ ಮತ್ತು ಭಾನುವಾರ ಎರಡು ದಿನಗಳ ಕಾಲ ಪ್ರಧಾನಿ ಮೋದಿ ರೋಡ್ ಶೋ ನಡೆಸಲಿದ್ದಾರೆ. ಶನಿವಾರ ಸಂಜೆ ನಡೆಯಬೇಕಿದ್ದ ರೋಡ್ ಶೋ ಭಾನುವಾರಕ್ಕೆ ನಿಗದಿಯಾಗಿದ್ದು, ಸಂಜೆ ಮಳೆ ಬರುವ ಸಾಧ್ಯತೆ ಹಿನ್ನೆಲೆಯಲ್ಲಿ ಭಾನುವಾರ ಬೆಳಿಗ್ಗೆ ರೋಡ್‌ಶೋ ನಡೆಯಲಿದೆ. ಶನಿವಾರ ಬೆಳಿಗ್ಗೆ ೧೦ ರಿಂದ ಮಧ್ಯಾಹ್ನ ೧ ಗಂಟೆಯವರೆಗೆ ಹಾಗೂ ಭಾನುವಾರ ಬೆಳಿಗ್ಗೆ ೯ ರಿಂದ ಮಧ್ಯಾಹ್ನ ೧ ಗಂಟೆವರೆಗೆ ಪ್ರಧಾನಿ ಮೋದಿ ರೋಡ್ ಶೋ ನಡೆಯಲಿದೆ. ಪ್ರಧಾನಿ ಮೋದಿ ತಾ. ೬ ರಂದು ರಾಜಧಾನಿ ಬೆಂಗಳೂರಿನ ೧೭ ಕ್ಷೇತ್ರಗಳಲ್ಲಿ ಶನಿವಾರ ಮತ್ತು ಭಾನುವಾರ ನಮ್ಮ ಕರ್ನಾಟಕ ಯಾತ್ರೆ ಹೆಸರಿನಡಿ ಒಟ್ಟು ೩೬.೬ ಕಿ.ಮೀ. ದೂರ ಬೃಹತ್ ರೋಡ್ ಶೋ ನಡೆಸಲಿದ್ದಾರೆ.
ಜಾತಿ ಸಮೀಕ್ಷೆಗೆ ಪಾಟ್ನಾ ಹೈಕೋರ್ಟ್ ತಡೆ
ಪಾಟ್ನಾ, ಮೇ ೪: ಪಾಟ್ನಾ ಹೈಕೋರ್ಟ್ ಗುರುವಾರ ರಾಜ್ಯ ಸರ್ಕಾರ ನಡೆಸುತ್ತಿರುವ ಜಾತಿ ಸಮೀಕ್ಷೆಗೆ ತಡೆಯಾಜ್ಞೆ ನೀಡಿದೆ. ಅಲ್ಲದೆ, ಜಾತಿ ಸಮೀಕ್ಷೆ ನಡೆಸಲು ರಾಜ್ಯಕ್ಕೆ ಯಾವುದೇ ಅಧಿಕಾರವಿಲ್ಲ ಎಂದು ಹೇಳಿದೆ. ಈ ಸಂಬAಧ ಅರ್ಜಿಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಕೆ. ವಿನೋದ್ ಚಂದ್ರನ್ ಮತ್ತು ನ್ಯಾಯಮೂರ್ತಿ ಮಧುರೇಶ್ ಪ್ರಸಾದ್ ಅವರಿದ್ದ ವಿಭಾಗೀಯ ಪೀಠವು, ಜಾತಿವಾರು ಸಮೀಕ್ಷೆಯನ್ನು ತಕ್ಷಣವೇ ನಿಲ್ಲಿಸುವಂತೆ ಮತ್ತು ಈಗಾಗಲೇ ಸಂಗ್ರಹಿಸಿದ ದತ್ತಾಂಶವನ್ನು ಸುರಕ್ಷಿತವಾಗಿರಿಸುತ್ತದೆ ಮತ್ತು ಅಂತಿಮ ಆದೇಶಗಳನ್ನು ಹೊರಡಿಸುವವರೆಗೆ ದತ್ತಾಂಶವನ್ನು ಯಾರೊಂದಿಗೂ ಹಂಚಿಕೊಳ್ಳದAತೆ ನೋಡಿಕೊಳ್ಳಬೇಕು ಎಂದು ಸರ್ಕಾರಕ್ಕೆ ಸೂಚಿಸಿದೆ. ಬಿಹಾರದಲ್ಲಿ ಜಾತಿ ಆಧಾರಿತ ಸಮೀಕ್ಷೆಗೆ ಅನುಮತಿ ನೀಡಬೇಕೆ ಅಥವಾ ಬೇಡವೇ ಎಂಬುದರ ಕುರಿತು ಅಂತಿಮ ನಿರ್ಧಾರವನ್ನು ತೆಗೆದುಕೊಳ್ಳುವ ಮೊದಲು ನ್ಯಾಯಾಲಯ ಇದನ್ನು ಪರಿಗಣಿಸಬೇಕಾಗುತ್ತದೆ. ಇದನ್ನು ರಾಜ್ಯವು ಹೆಚ್ಚು ವಿವರವಾಗಿ ತಿಳಿಸಬೇಕಾಗಿದೆ ಎಂದು ನ್ಯಾಯಾಲಯ ಹೇಳಿದೆ.
ಮತದಾನ ಮಾಡಿದ ಅರ್ಧ ಗಂಟೆಯಲ್ಲಿ ವೃದ್ಧೆ ಸಾವು
ರಾಯಚೂರು, ಮೇ ೪: ರಾಜ್ಯ ವಿಧಾನಸಭೆ ಚುನಾವಣೆಗೆ ಬ್ಯಾಲೆಟ್ ಪೇಪರ್ ಮೂಲಕ ಮನೆಯಿಂದಲೇ ಮತದಾನ ಮಾಡಿದ ನಂತರ ಅರ್ಧ ಗಂಟೆಯಲ್ಲಿ ವೃದ್ಧೆಯೊಬ್ಬರು ಮೃತಪಟ್ಟಿರುವ ಘಟನೆ ಜಿಲ್ಲೆಯ ಸಿಂಧನೂರು ತಾಲೂಕಿನಲ್ಲಿ ನಡೆದಿದೆ. ಮೃತ ವೃದ್ಧೆ ಅಲಬನೂರು ಗ್ರಾಮದ ೮೨ ವರ್ಷದ ಮಂಗಮ್ಮ ಎಂದು ತಿಳಿದುಬಂದಿದೆ. ಮಂಗಮ್ಮ ಅವರು ವಯೋ ಸಹಜ ಖಾಯಿಲೆಯಿಂದ ಬಳಲುತ್ತಿದ್ದರು. ಈ ಬಾರಿ ಚುನಾವಣಾ ಆಯೋಗ ೮೦ ವರ್ಷ ಮೇಲ್ಪಟ್ಟವರಿಗೆ ಮನೆಯಿಂದಲೇ ಮತದಾನ ಮಾಡುವ ಅವಕಾಶ ಕಲ್ಪಿಸಿಕೊಟ್ಟಿತ್ತು. ಅದರಂತೆ ನಿನ್ನೆ ಮಂಗಮ್ಮ ಅವರ ಮನೆಗೆ ಚುನಾವಣಾ ಸಿಬ್ಬಂದಿ ತೆರಳಿದ್ದರು. ಮಂಗಮ್ಮ ಅವರ ಮನೆಗೆ ಪಿಆರ್‌ಓ ದಿನೇಶ ಕೆ.ಪಿ. ಹಾಗೂ ಎಪಿಆರ್‌ಓ ಬಸಪ್ಪ ಹೆಚ್. ಹಾಗೂ ಇತರ ಸಿಬ್ಬಂದಿ ತೆರಳಿದ್ದರು.
ಮಣಿಪುರದಲ್ಲಿ ಹಿಂಸಾಚಾರ : ನಿಯಂತ್ರಣಕ್ಕೆ ಸೇನೆ ದೌಡು
ಇಂಫಾಲ, ಮೇ ೪: ಮಣಿಪುರದಲ್ಲಿ ಬುಡಕಟ್ಟು ಜನಾಂಗದವರ ಪ್ರತಿಭಟನೆ ವೇಳೆ ಹಿಂಸಾಚಾರ ಭುಗಿಲೆದ್ದಿದ್ದು, ಪರಿಸ್ಥಿತಿಯನ್ನು ನಿಯಂತ್ರಿಸಲು ಸೇನೆ ಮತ್ತು ಅಸ್ಸಾಂ ರೈಫಲ್ಸ್ ಅನ್ನು ರಾಜ್ಯದಲ್ಲಿ ನಿಯೋಜಿಸಲಾಗಿದೆ ಎಂದು ರಕ್ಷಣಾ ವಕ್ತಾರರು ಗುರುವಾರ ತಿಳಿಸಿದ್ದಾರೆ. ಇದುವರೆಗೆ ೭,೫೦೦ ಜನರನ್ನು ಹಿಂಸಾಚಾರ ಪೀಡಿತ ಪ್ರದೇಶಗಳಿಂದ ಪಡೆಗಳು ರಕ್ಷಿಸಿದ್ದು, ಆಶ್ರಯ ನೀಡಿವೆ. ಹೆಚ್ಚಿನ ಜನರನ್ನು ಅಲ್ಲಿಂದ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗುತ್ತಿದೆ ಎಂದು ಅವರು ಹೇಳಿದರು. ಪರಿಸ್ಥಿತಿ ಬಿಗಡಾಯಿಸುತ್ತಿದ್ದಂತೆ ಕಳೆದ ರಾತ್ರಿ ಸೇನೆ ಮತ್ತು ಅಸ್ಸಾಂ ರೈಫಲ್ಸ್ಗೆ ಮನವಿ ಮಾಡಲಾಗಿತ್ತು. ಬಳಿಕ ರಾಜ್ಯ ಪೊಲೀಸರೊಂದಿಗೆ ಪಡೆಗಳನ್ನು ಬೆಳಿಗ್ಗೆ ಹಿಂಸಾಚಾರ ಪೀಡಿತ ಪ್ರದೇಶಗಳಲ್ಲಿ ನಿಯೋಜಿಸಲಾಗಿದೆ. ಪರಿಸ್ಥಿತಿಯನ್ನು ಹತೋಟಿಯಲ್ಲಿಡಲು ಧ್ವಜ ಮೆರವಣಿಗೆ ನಡೆಸಲಾಗುತ್ತಿದೆ ಎಂದು ವಕ್ತಾರರು ತಿಳಿಸಿದ್ದಾರೆ.
ರಾಜ್ಯದಲ್ಲಿ ಮಳೆ ಸಾಧ್ಯತೆ
ಬೆಂಗಳೂರು, ಮೇ ೪: ಮುಂದಿನ ಐದು ದಿನಗಳ ಕಾಲ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಅದರಲ್ಲೂ ವಿಶೇಷವಾಗಿ ದಕ್ಷಿಣ ಒಳನಾಡು ಮತ್ತು ಬೆಂಗಳೂರಿನಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಐಎಂಡಿ ಅಧಿಕಾರಿಗಳ ಪ್ರಕಾರ, ಅರಬ್ಬಿ ಸಮುದ್ರದ ಮೇಲ್ಮೆöÊನಲ್ಲಿ ಸೃಷ್ಟಿಯಾಗಿರುವ ಸುಳಿಗಾಳಿಯ ಪರಿಣಾಮ ರಾಜ್ಯದಲ್ಲಿ ಹಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು, ಹಗಲಿನಲ್ಲಿ ಹಗುರದಿಂದ ಸಾಧಾರಣ ಮಳೆಯಿದ್ದರೆ, ಬೆಂಗಳೂರು ಸೇರಿದಂತೆ ಕರ್ನಾಟಕದ ಒಳನಾಡಿನ ಬಹುತೇಕ ಭಾಗಗಳಲ್ಲಿ ರಾತ್ರಿಯಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದೆ. ಮುಂದಿನ ದಿನಗಳಲ್ಲಿ ಕ್ಲುಮಿನೋನಿಂಬಸ್ ಮೋಡಗಳು ಕೂಡ ರಚನೆಯಾಗಲಿದ್ದು, ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.