ಮಡಿಕೇರಿ, ಮೇ ೪: ಕರ್ನಾಟಕ ವಿಧಾನಸಭಾ ಚುನಾವಣೆ-೨೦೨೩ ರ ಹಿನ್ನೆಲೆಯಲ್ಲಿ ಮತದಾರರಲ್ಲಿ ಮತದಾನದ ಜಾಗೃತಿ ಮೂಡಿಸಲು ಕೊಡಗು ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿ, ಮೂರ್ನಾಡು ಪದವಿ ಕಾಲೇಜಿನ ರೋರ‍್ಯಾಕ್ಟ್ ಕ್ಲಬ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಯೋಗದೊಂದಿಗೆ ತಾ. ೬ ರಂದು ಬೆಳಿಗ್ಗೆ ೮ ಗಂಟೆಗೆ ಮೂರ್ನಾಡು ಗ್ರಾಮದಲ್ಲಿ ಮತದಾನದ ಮಹತ್ವ ಸಾರುವ ಹಿನ್ನೆಲೆಯಲ್ಲಿ ಮ್ಯಾರಥಾನ್ ಕಾರ್ಯಕ್ರಮ ನಡೆಯಲಿದೆ.

ಭಾಗವಹಿಸುವವರು ತಾ. ೫ ರ ಸಂಜೆ ೬ ಗಂಟೆಯೊಳಗೆ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದಾಗಿದೆ (ನೋಂದಣಿಗಾಗಿ ಎ.ಬಿ. ನವೀನ್ ಮೊ.ಸಂ. ೯೯೪೫೧೨೩೯೨೧ ನ್ನು ಸಂಪರ್ಕಿಸಬಹುದು). ಮೊದಲು ನೋಂದಾಯಿಸಿಕೊಳ್ಳುವ ೧೦೦ ಸ್ಪರ್ಧಾರ್ಥಿಗಳಿಗೆ ಸ್ವೀಪ್ ಸಂದೇಶವಿರುವ ಟೀ ಶರ್ಟ್ ಹಾಗೂ ಕ್ಯಾಪ್ ನೀಡಲಾಗುವುದು. ವಿಜೇತರಾದವರಿಗೆ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನದ ಮೆಡಲ್ ನೀಡಲಾಗುವುದು ಹಾಗೂ ನೋಂದಣಿಯಾದ ಎಲ್ಲರಿಗೂ ಪ್ರಮಾಣ ಪತ್ರ ನೀಡಲಾಗುವುದು.

ಜಿಲ್ಲೆಯ ಎಲ್ಲಾ ಸಾರ್ವಜನಿಕರು ಹಾಗೂ ವಿವಿಧ ಸಂಘ-ಸAಸ್ಥೆಗಳ ಪದಾಧಿಕಾರಿಗಳು ಹಾಗೂ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಕೋರಲಾಗಿದೆ.