ಕೂಡಿಗೆ, ಮೇ ೫: ಮಡಿಕೇರಿ ವಿಧಾನಸಭಾ ಬಿಜೆಪಿ ಪಕ್ಷದ ಅಭ್ಯರ್ಥಿ ಎಂ.ಪಿ. ಅಪ್ಪಚ್ಚು ರಂಜನ್ ಹೆಬ್ಬಾಲೆ ಮತ್ತು ಶಿರಂಗಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮತ್ತು ತೊರೆನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಳುವಾರ, ಸಿದ್ದಲಿಂಗಪುರ ಹಾಗೂ ಹುಲುಸೆಯಲ್ಲಿ ಕಾರ್ಯಕರ್ತರ ಸಮ್ಮುಖದಲ್ಲಿ ಮೆರವಣಿಗೆಯ ಮೂಲಕ ಮತಯಾಚನೆ ಮಾಡಿದರು. ಹೆಬ್ಬಾಲೆಯಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

ಈ ಸಂದರ್ಭ ವಿಧಾನ ಪರಿಷತ್ ಮಾಜಿ ಸದಸ್ಯ ಎಸ್.ಜಿ. ಮೇದಪ್ಪ, ಕುಶಾಲನಗರ ಪುರಸಭೆಯ ಅಧ್ಯಕ್ಷ ಜಯವರ್ಧನ್, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಹೆಚ್.ಎಸ್. ಅಶೋಕ್, ಮಾಜಿ ಸದಸ್ಯ ಹೆಚ್.ಎಸ್. ಶ್ರೀನಿವಾಸ್, ಶಕ್ತಿ ಕೇಂದ್ರದ ಅಧ್ಯಕ್ಷ ಪರಮೇಶ್, ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಅರುಣಾ ಕುಮಾರಿ, ಸದಸ್ಯರಾದ ಚಂದ್ರಶೇಖರ್ ಜೋಗಿ, ವೆಂಕಟೇಶ್, ಪಕ್ಷದ ವಿವಿಧ ಘಟಕದ ಅಧ್ಯಕ್ಷರು, ಸದಸ್ಯರು, ಪದಾಧಿಕಾರಿಗಳು, ಕಾರ್ಯಕರ್ತರು ಹಾಜರಿದ್ದರು.