ಗುಡ್ಡೆಹೊಸೂರು, ಮೇ ೫: ಮಡಿಕೇರಿ ವಿಧಾನಸಭಾ ಕ್ಷೇತ್ರದ ಬಿ.ಜೆ.ಪಿ. ಅಭ್ಯರ್ಥಿ ಅಪ್ಪಚ್ಚು ರಂಜನ್ ಪರ ಗುಡ್ಡೆಹೊಸೂರು ಗೌಡ ಸಮಾಜದ ಸದಸ್ಯರ ಸಮ್ಮುಖದಲ್ಲಿ ಇಲ್ಲಿನ ಸಮುದಾಯಭವನದಲ್ಲಿ ಸಭೆ ಏರ್ಪಡಿಸಲಾಗಿತ್ತು.
ಈ ಸಂದರ್ಭ ಜಿಲ್ಲಾ ಬಿ.ಜೆ.ಪಿ. ಅಧ್ಯಕ್ಷ ರಾಬಿನ್ ದೇವಯ್ಯ, ಇಲ್ಲಿನ ಸಮಾಜದ ಅಧ್ಯಕ್ಷ ಗುಡ್ಡೆಮನೆ ವಿಶುಕುಮಾರ್, ಶಕ್ತಿ ಕೇಂದ್ರದ ಅಧ್ಯಕ್ಷ ಕುಡೆಕಲ್ ನಿತ್ಯಾನಂದ, ಕುಶಾಲನಗರ ಗೌಡ ಸಮಾಜದ ಅಧ್ಯಕ್ಷ ಚಿಲ್ಲನ ಗಣಿಪ್ರಸಾದ್ ಮತ್ತು ಸಮಾಜದ ಅಧಿಕ ಮಂದಿ ಹಾಜರಿದ್ದರು.
ಸಭೆಯಲ್ಲಿದ್ದ ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಮಾತನಾಡಿ, ಜಿಲ್ಲೆಯಲ್ಲಿ ಮತ್ತು ಈ ಕ್ಷೇತ್ರದಲ್ಲಿ ಕೇಂದ್ರ ಸರಕಾರ ಮತ್ತು ರಾಜ್ಯ ಸರಕಾರದ ಹಲವು ಯೋಜನೆಗಳ ಬಗ್ಗೆ ವಿವರಿಸಿದರು. ಒಂದು ಜನಾಂಗದ ಮತಕ್ಕಾಗಿ ರಾಷ್ಟçಭಕ್ತಿ ಹೊಂದಿರುವ ಭಜರಂಗದಳವನ್ನು ನಿಷೇಧಿಸುವ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು. ಈ ಬಾರಿ ಕೊಡಗಿನ ಎರಡು ಕ್ಷೇತ್ರಗಳು ಬಿ.ಜೆ.ಪಿ ಪಾಲಾಗಲಿವೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.