ಮಡಿಕೇರಿ, ಮೇ ೫: ನಗರದ ಮುಖ್ಯ ರಸ್ತೆಗಳಲ್ಲಿ ಮಡಿಕೇರಿ ನಗರ ಮತ್ತು ಬ್ಲಾಕ್ ಕಾಂಗ್ರೆಸ್ ಘಟಕದ ವತಿಯಿಂದ ಬೈಕ್ ಜಾಥಾ ನಡೆಯಿತು.

ಜಾಥಾದಲ್ಲಿ ಡಾ. ಮಂಥರ್ ಗೌಡ ರವರೊಂದಿಗೆ ನಗರ ಕಾಂಗ್ರೆಸ್ ಅಧ್ಯಕ್ಷ ರಾಜೇಶ್ ಯಲ್ಲಪ್ಪ, ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎ. ಹಂಸ, ಪ್ರಚಾರ ಸಮಿತಿ ಅಧ್ಯಕ್ಷ ಟಿ.ಪಿ.ರಮೇಶ್, ಜಿಲ್ಲಾ ಕಾಂಗ್ರೆಸ್ ವಕ್ತಾರ ತೆನ್ನಿರ ಮೈನಾ, ಡಿ.ಸಿ.ಸಿ. ಪ್ರಧಾನ ಕಾರ್ಯದರ್ಶಿ ಮುನೀರ್ ಅಹಮದ್, ಮಹಿಳಾ ಅಧ್ಯಕ್ಷೆ ಸುರಯ್ಯ ಅಬ್ರಾರ್ ಪಕ್ಷದ ಪ್ರಮುಖರು, ಕಾರ್ಯಕರ್ತರು ಪಾಲ್ಗೊಂಡಿದ್ದರು.