ಮಡಿಕೇರಿ, ಮೇ ೬: ಕಾಂಗ್ರೆಸ್ ಪಕ್ಷದಿಂದ ಹೊರಗುಳಿದಿದ್ದ ಪ್ರಮುಖರಾದ ಶ್ರೀಮತಿ ಬಂಗೇರ, ವೀಣಾಕ್ಷಿ, ತಜಸುಂ, ಗಿಲ್ಬರ್ಟ್ ಲೋಬೋ, ಕೆ.ಈ. ಮ್ಯಾಥ್ಯು ಹಾಗೂ ಸುನಿಲ್ ನಂಜಪ್ಪ ಅವರುಗಳು ಕಾಂಗ್ರೆಸ್ಗೆ ಸೇರ್ಪಡೆಗೊಂಡರು.
ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಪಕ್ಷದ ಜಿಲ್ಲಾಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಜಿಲ್ಲಾ ಚುನಾವಣಾ ಉಸ್ತುವಾರಿ ಹೆಚ್.ಎಂ. ನಂದಕುಮಾರ್ ಹಾಗೂ ನಗರಾಧ್ಯಕ್ಷ ಬಿ.ವೈ. ರಾಜೇಶ್ ಅವರುಗಳ ಸಮ್ಮುಖದಲ್ಲಿ ಸೇರ್ಪಡೆಗೊಂಡ ಪ್ರಮುಖರು ಕಾಂಗ್ರೆಸ್ ಅಭ್ಯರ್ಥಿ ಗಳಿಗೆ ಬೆಂಬಲ ಘೋಷಿಸಿದರು.