ಗೋಣಿಕೊಪ್ಪಲು, ಮೇ ೬: ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಕೇವಲ ಆರೋಪಗಳನ್ನೇ ಮಾಡುತ್ತ ಸಮಯ ಕಳೆಯುತ್ತಿದೆ. ಕರ್ನಾಟಕದಲ್ಲಿ ಬೊಮ್ಮಾಯಿ ಸರ್ಕಾರ ಹಾಗೂ ಕೇಂದ್ರದಲ್ಲಿ ನರೇಂದ್ರ ಮೋದಿ ಸರ್ಕಾರ ಉತ್ತಮ ರೀತಿಯಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಮಾಡಿದೆ. ಈ ದೇಶಕ್ಕೆ ನರೇಂದ್ರ ಮೋದಿಯವರ ಆಡಳಿತ ಅವಶ್ಯಕತೆ ಇರುವುದರಿಂದ ಈ ಬಾರಿ ನಡೆಯುತ್ತಿರುವ ಕರ್ನಾಟಕ ವಿಧಾನಸಭೆಗೆ ಕೊಡಗು ಜಿಲ್ಲೆಯ ಎರಡು ಬಿಜೆಪಿ ಅಭ್ಯರ್ಥಿಗಳನ್ನು ಆರಿಸಿ ಕಳುಹಿಸುವಂತೆ ಅಸ್ಸಾಂನ ಮುಖ್ಯಮಂತ್ರಿ ಹಿಮಂತ್ ಬಿಸ್ವ ಸರ್ಮ ಕಾರ್ಯಕರ್ತರಿಗೆ ಕರೆ ನೀಡಿದರು.
ಗೋಣಿಕೊಪ್ಪಲುವಿನ ಸರ್ಕಾರಿ ಶಾಲಾ ಮೈದಾನದಲ್ಲಿ ವೀರಾಜಪೇಟೆ ವಿಧಾನಸಭಾ ಕ್ಚೇತ್ರದ ಬಿಜೆಪಿ ಪಕ್ಷದ ಅಭ್ಯರ್ಥಿ ಶಾಸಕ ಕೆ.ಜಿ. ಬೋಪಯ್ಯನವರ ಪರವಾಗಿ ಹಮ್ಮಿಕೊಳ್ಳಲಾಗಿದ್ದ ಬೃಹತ್ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಅಸ್ಸಾಂ ಮುಖ್ಯಮಂತ್ರಿ, ತಮ್ಮ ಭಾಷಣದ ಉದ್ದಕ್ಕೂ ಕಾಂಗ್ರೆಸ್ ಪಕ್ಷದ ಕಾರ್ಯವೈಖರಿಯನ್ನು ತೀವ್ರವಾಗಿ ಖಂಡಿಸಿದರು.
ಕಾAಗ್ರೆಸ್ ಪಕ್ಷ ತನ್ನ ಪ್ರಣಾಳಿಕೆಯಲ್ಲಿ ಒಂದು ಧರ್ಮಕ್ಕೆ ಸೀಮಿತಗೊಂಡAತೆ ಹಲವು ಯೋಜನೆಗಳನ್ನು ಜಾರಿಗೊಳಿ ಸುವುದಾಗಿ ತಿಳಿಸಿದೆ. ಆದರೆ ಉಳಿದ ಧರ್ಮದ ಜನರು ಈ ದೇಶದ ಜನರಲ್ಲವೆ.? ನಿಷೇಧಗೊಂಡಿರುವ ಸಂಘಟನೆಗಳೊAದಿಗೆ ಕಾಂಗ್ರೆಸ್ ನಾಯಕರ ನಿಕಟ ಸಂಪರ್ಕವಿದೆ ಎಂದು ಆರೋಪಿಸಿದ ಇವರು ಈ ಬಾರಿ ನಡೆಯುತ್ತಿರುವ ಚುನಾವಣೆ ಯಲ್ಲಿ ಬಿಜೆಪಿ ಪಕ್ಷಕ್ಕೆ ಸ್ಪಷ್ಟ ಬಹುಮತ ಲಭ್ಯವಾಗಲಿದೆ. ಇದರಲ್ಲಿ ಕೊಡಗಿನ ಎರಡು ಕ್ಷೇತ್ರಗಳು ಬಿಜೆಪಿಯ ಭದ್ರ ಕೋಟೆಯಾಗಿ ಉಳಿಯಬೇಕು ಎಂದರು.
ಸಾರ್ವಜನಿಕರ ಸಭೆಯನ್ನು ಉದ್ದೇಶಿಸಿ
(ಮೊದಲ ಪುಟದಿಂದ) ಮಾತನಾಡಿದ ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಬಿಜೆಪಿ ಪಕ್ಷದ ಅಭ್ಯರ್ಥಿ ಕೆ.ಜಿ. ಬೋಪಯ್ಯ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಆಡಳಿತ ಪಕ್ಷದವರು ತಮ್ಮ ಅವಧಿಯಲ್ಲಿ ಮಾಡಿದ ಸಾಧನೆಗಳನ್ನು ಜನರ ಮುಂದಿಟ್ಟು ಮುಂದಿನ ಅವಧಿಗೂ ಅವಕಾಶ ನೀಡಬೇಕೆಂದು ಕೇಳುತ್ತೇವೆ. ವಿರೋಧ ಪಕ್ಷದವರು ಯಾವುದೇ ಆಧಾರವಿಲ್ಲದೆ ಆಡಳಿತ ಪಕ್ಷದ ಕಾರ್ಯವೈಖರಿಯನ್ನು ಟೀಕಿಸುತ್ತಲೇ ಬಂದಿದ್ದಾರೆ ಎಂದು ದೂರಿದರು.
ಜಿಲ್ಲೆಯಲ್ಲಿ ಸಾಕಷ್ಟು ಅಭಿವೃದ್ಧಿಗಳನ್ನು ಈಗಾಗಲೇ ಮಾಡಲಾಗಿದೆ. ಕೊರೊನಾ ಸಂದರ್ಭ ಹೊರತುಪಡಿಸಿದರೆ ಉಳಿದ ಅವಧಿಯಲ್ಲಿ ಕೋಟ್ಯಂತರ ಅನುದಾನವನ್ನು ತರುವ ಮೂಲಕ ನಾಗರಿಕರಿಗೆ ಅವಶ್ಯವಿರುವ ರಸ್ತೆ, ಕುಡಿಯುವ ನೀರು ಸೇರಿದಂತೆ ಇನ್ನಿತರ ಸವಲತ್ತುಗಳನ್ನು ಒದಗಿಸಲಾಗಿದೆ. ಇದೇ ಮೊದಲ ಬಾರಿಗೆ ಚುನಾವಣೆಯಲ್ಲಿ ಜಾತಿಯನ್ನು ಎಳೆದು ತರಲಾಗುತ್ತಿದೆ. ಆದರೆ ಕೊಡಗಿನ ಜನತೆ ಪ್ರಜ್ಞಾವಂತ ಮತದಾರರಾಗಿರುವುದರಿಂದ ಇಂತಹ ಜಾತಿ ವ್ಯವಸ್ಥೆಗೆ ಮನ್ನಣೆ ನೀಡಲಾರ ಎಂದು ಅಭಿಪ್ರಾಯಪಟ್ಟರು.
ವೀರಾಜಪೇಟೆ ಮಂಡಲ ಅಧ್ಯಕ್ಷ ನೆಲ್ಲೀರ ಚಲನ್ ಕುಮಾರ್ ಪ್ರ‍್ರಾಸ್ತಾವಿಕವಾಗಿ ಮಾತನಾಡಿದರು. ವೇದಿಕೆಯಲ್ಲಿ ಅಸ್ಸಾಂ ಸಚಿವರಾದ ತುಲೈರಾಮ್, ಬಿಜೆಪಿ ಜಿಲ್ಲಾಧ್ಯಕ್ಷ ಪಳೆಯಂಡ ರಾಬಿನ್ ದೇವಯ್ಯ, ಮಡಿಕೇರಿ ಗ್ರಾಮಾಂತರ ಅಧ್ಯಕ್ಷ ಕಾಂಗಿರ ಸತೀಶ್, ಚುನಾವಣೆ ಪ್ರಬಾರಿ ಪ್ರತಾಪ್ ಸಿಂಹ ನಾಯಕ್, ರಾಜ್ಯ ಶಿಸ್ತು ಸಮಿತಿಯ ಸದಸೆÀ್ಯ ರೀನಾ ಪ್ರಕಾಶ್, ಮಾಜಿ ಜಿಲ್ಲಾಧ್ಯಕ್ಷ ಮನು ಮುತ್ತಪ್ಪ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುಞಂಗಡ ಅರುಣ್ ಭೀಮಯ್ಯ, ಮಂಡಲ ಪ್ರಧಾನ ಕಾರ್ಯದರ್ಶಿ ಅಜ್ಜಿಕುಟ್ಟಿರ ಪ್ರವೀಣ್, ಜೀವ ವೈವಿದ್ಯ ನಿಗಮದ ಅಧ್ಯಕ್ಷ ನಾಪಂಡ ರವಿ ಕಾಳಪ್ಪ, ಕೋಡಿರ ಪ್ರಸನ್ನ, ಡೀನ್ ಬೋಪಣ್ಣ ಸೇರಿದಂತೆ ಇತರ ಗಣ್ಯರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಬಿಜೆಪಿ ಪಕ್ಷದ ಪ್ರಮುಖರಾದ ಗುಮ್ಮಟ್ಟಿರ ಕಿಲನ್ ಗಣಪತಿ, ಸಿ.ಕೆ. ಬೋಪಣ್ಣ, ಚೆಪ್ಪುಡೀರ ಮಾಚು, ಕಟ್ಟೆರ ಈಶ್ವರ್, ವಾಟೇರಿರ ಬೋಪಣ್ಣ, ಆದೇಂಗಡ ವಿನುಚಂಗಪ್ಪ, ಕಾಡ್ಯಮಾಡ ಭರತ್, ಅಜಿತ್ ಕರುಂಬಯ್ಯ, ಬಿ.ಎನ್. ಪ್ರಕಾಶ್, ಸೌಮ್ಯಬಾಲು, ಸೇರಿದಂತೆ ಅನೇಕರು ಉಪಸ್ಥಿತರಿದ್ದರು. ಮಂಡಲ ಪ್ರಧಾನ ಕಾರ್ಯದರ್ಶಿ ವಾಟೇರಿರ ಬೋಪಣ್ಣ ಸ್ವಾಗತಿಸಿ ಬಿ.ಎನ್. ಪ್ರಕಾಶ್ ನಿರೂಪಿಸಿ ಜಿಲ್ಲಾಧ್ಯಕ್ಷ ರಾಬಿನ್ ದೇವಯ್ಯ ವಂದಿಸಿದರು.
-ಹೆಚ್.ಕೆ.ಜಗದೀಶ್