ಮಡಿಕೇರಿ, ಮೇ ೬: ಕರ್ನಾಟಕ ಪ್ರಜ್ಞಾವಂತ ಜನತಾ ಪಕ್ಷದ ಪ್ರಚಾರ ವಾಹನದ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ಚುನಾವಣಾ ಅಧಿಕಾರಿ ಡಾ.ಯತೀಶ್ ಉಲ್ಲಾಳ್ ಅವರು ತಿಳಿಸಿದ್ದಾರೆ. ಸಂಚಾರ ವೇಳೆಯಲ್ಲಿ ಧ್ವನಿವರ್ಧಕ ಬಳಕೆ ಮಾಡುತ್ತಿದ್ದ ಹಿನ್ನೆಲೆ ಈ ವಾಹನದ ಪರವಾನಗಿ ರದ್ದುಪಡಿಸಲಾಗಿದೆ.
ಅದೇ ರೀತಿ ಚಾಲನಾ ಸಂದರ್ಭದಲ್ಲಿ ಧ್ವನಿವರ್ಧಕ ಬಳಕೆ ಹಿನ್ನೆಲೆ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಮಾಡಿರುವ ಆಮ್ ಆದ್ಮಿ ಪಕ್ಷದ ಪ್ರಚಾರ ವಾಹನದ ಮೇಲೆ ಪ್ರಕರಣ ದಾಖಲಿಸಲಾಗಿದೆ. ಚುನಾವಣಾ ಪ್ರಚಾರ ವಾಹನವನ್ನು ಚಾಲನಾ ಸಂದರ್ಭದಲ್ಲಿ ಧ್ವನಿವರ್ಧಕ ಬಳಸುವುದನ್ನು ನಿಷೇಧಿಸಲಾಗಿದೆ. ಆ ನಿಟ್ಟಿನಲ್ಲಿ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆಗಿರುವುದರಿಂದ ಪ್ರಕರಣ ದಾಖಲಿಸಿ ಪೊಲೀಸರ ಸುಪರ್ದಿಗೆ ವಾಹನ ಒಪ್ಪಿಸಲಾಗಿದೆ. ಜೊತೆಗೆ ಪರವಾನಗಿ ರದ್ದುಪಡಿಸಲಾಗಿದೆ ಎಂದು ಚುನಾವಣಾ ಅಧಿಕಾರಿ ತಿಳಿಸಿದ್ದಾರೆ.