ಹೆಬ್ಬಾಲೆ: ಹೆಬ್ಬಾಲೆ ಗ್ರಾಮದಲ್ಲಿ ಕಾಂಗ್ರೆಸ್ ಪಕ್ಷದ ಪ್ರಚಾರ ಸಭೆಯಲ್ಲಿ ಅಭ್ಯರ್ಥಿ ಡಾ. ಮಂಥರ್ ಗೌಡ ಮತಯಾಚನೆ ಮಾಡಿದರು.

ಇಲ್ಲಿನ ಸಮುದಾಯ ಭವನದಲ್ಲಿ ಏರ್ಪಡಿಸಿದ್ದ ಪ್ರಚಾರ ಕಾರ್ಯಕ್ರಮದಲ್ಲಿ ಗ್ರಾ.ಪಂ. ಮಾಜಿ ಅಧ್ಯಕ್ಷ ಶೇಖರ್ ನೇತೃತ್ವದಲ್ಲಿ ವಿವಿಧ ಪಕ್ಷಗಳ ಮುಖಂಡರು ಕಾಂಗ್ರೆಸ್ ಸೇರ್ಪಡೆಗೊಂಡರು.

ಈ ಸಂದರ್ಭ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ. ಶಶಿಧರ್, ಕೆಪಿಸಿಸಿ ಕಾರ್ಯದರ್ಶಿ ಕೆ.ಪಿ. ಚಂದ್ರಕಲಾ, ಸದಸ್ಯ ಸಂಜಯ್, ಜೀವಿಜಯ, ನಟೇಶ್ ಗೌಡ, ಚುನಾವಣಾ ಉಸ್ತುವಾರಿ ಮಂಜುನಾಥ್ ಗುಂಡೂರಾವ್, ಡಿಸಿಸಿ ಸದಸ್ಯ ಯಾಕುಬ್, ಶಾಜಿ, ಗ್ರಾಮದೇವತಾ ಸಮಿತಿ ಅಧ್ಯಕ್ಷ ಬಸವರಾಜು, ಗ್ರಾಮ ಪಂಚಾಯಿತಿ ಅಧ್ಯಕ್ಷ ಮಂಜುನಾಥ್, ಮಾಜಿ ಅಧ್ಯಕ್ಷ ಹೆಚ್.ಟಿ. ದಿನೇಶ್, ಎಪಿಸಿಎಂಎಸ್ಸಿ ಮಾಜಿ ಉಪಾಧ್ಯಕ್ಷ ಟಿ.ಬಿ. ಜಗದೀಶ್, ಚಂದ್ರಶೇಖರ್, ಮೋಹನ್ ಇದ್ದರು.