ಕೂಡಿಗೆ, ಮೇ ೫: ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕತ್ತೂರು ಗ್ರಾಮದಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿ ಎಂ.ಪಿ. ಅಪ್ಪಚ್ಚು ರಂಜನ್ ಪರವಾಗಿ ಕಾರ್ಯಕರ್ತರು ಮನೆಮನೆಗೆ ತೆರಳಿ ಮತಯಾಚನೆ ಮಾಡಿದರು.
ಈ ಸಂದರ್ಭ ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಗಣೇಶ್, ಕೂಡುಮಂಗಳೂರು ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಸಿ.ಸಿ. ಸ್ವಾಮಿ, ಪ್ರಮುಖರಾದ ಕುಮಾರ್ ಸ್ವಾಮಿ, ಉದಯ್, ಮಂಜುನಾಥ ಮತ್ತಿತರರು ಇದ್ದರು.