ಮಡಿಕೇರಿ, ಮೇ ೫ : ಕೊಡಗು ಜಿಲ್ಲಾಡಳಿತ, ಜಿಲ್ಲಾ ಮತದಾರರ ಶಿಕ್ಷಣ ಮತ್ತು ಸಹಭಾಗಿತ್ವ ಸಮಿತಿ, ಕೊಡಗು ಸ್ಕೌಟ್ಸ್ ಮತ್ತು ಗೈಡ್ಸ್ ಸಹಯೋಗದಲ್ಲಿ ಮತದಾನದ ಮಹತ್ವ ಕುರಿತು ಜಾಗೃತಿ ಜಾಥಾ ನಡೆಯಿತು.
ಜಾಗೃತಿ ಜಾಥಾಗೆ ಜಿ.ಪಂ. ಸಿಇಒ ಮತ್ತು ಸ್ವೀಪ್ ಸಮಿತಿ ಅಧ್ಯಕ್ಷ ಡಾ. ಎಸ್.ಆಕಾಶ್ ಅವರು ಚಾಲನೆ ನೀಡಿದರು. ಜಾಥಾವು ಮಹದೇವಪೇಟೆಯ ಎ.ವಿ. ಶಾಲೆ ಬಳಿಯಿಂದ ಆರಂಭವಾಗಿ ಮಹದೇವಪೇಟೆಯ ಪ್ರಮುಖ ರಸ್ತೆ ಮೂಲಕ ಸ್ಕಾ÷್ವಡರ್ನ್ ಲೀಡರ್ ಅಜ್ಜಮಾಡ ದೇವಯ್ಯ ವೃತ್ತ ತಲುಪಿತು.
ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಐಮುಡಿಯಂಡ ರಾಣಿ ಮಾಚಯ್ಯ ಮಾತನಾಡಿ ತಾ. ೧೦ ರಂದು ನಡೆಯುವ ವಿಧಾನಸಭೆಯ ಸಾರ್ವತ್ರಿಕ ಚುನಾವಣೆಯಲ್ಲಿ ಅರ್ಹರೆಲ್ಲರೂ ಮತದಾನ ಮಾಡುವ ಮೂಲಕ ಸಂಭ್ರಮಿಸಬೇಕು.
ಜಿಲ್ಲಾಡಳಿತ, ಸ್ವೀಪ್ ಸಮಿತಿ, ಸ್ಕೌಟ್ಸ್ ಮತ್ತು ಗೈಡ್ಸ್ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಸಹಕಾರದಲ್ಲಿ ಮತದಾನ ಮಹತ್ವ ಕುರಿತು ವಿವಿಧ ರೀತಿಯ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ತಪ್ಪದೇ ಮತದಾನ ಮಾಡುವಂತಾಗಬೇಕು ಎಂದು ಕೋರಿದರು.
ಜಾಥಾಗೆ ಚಾಲನೆ ನೀಡಿ ಮಾತನಾಡಿದ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ಡಾ. ಎಸ್. ಆಕಾಶ್ ಅವರು ೧೮ ವರ್ಷ ಪೂರ್ಣಗೊಂಡವರು ಕಡ್ಡಾಯವಾಗಿ ಮತದಾನ ಮಾಡಿ ಬಲಿಷ್ಠ ರಾಷ್ಟç ನಿರ್ಮಾಣಕ್ಕೆ ಕೈಜೋಡಿಸಬೇಕು.
ಮತದಾನದ ಮಹತ್ವ ಕುರಿತು ಹಲವು ರೀತಿಯ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ಆ ನಿಟ್ಟಿನಲ್ಲಿ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ವಿವಿಧ ರೀತಿಯ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.
ಮತದಾನವು ಮೇ ೧೦ ರಂದು ಬೆಳಿಗ್ಗೆ ೭ ರಿಂದ ಸಂಜೆ ೬ ಗಂಟೆಯವರೆಗೆ ನಡೆಯಲಿದ್ದು, ತಪ್ಪದೇ ಮತ ಚಲಾಯಿಸುವಂತಾಗಬೇಕು. ಪ್ರಜಾಪ್ರಭುತ್ವವ ಹಬ್ಬವನ್ನು ಮತ ಹಾಕುವ ಮೂಲಕ ಸಂಭ್ರಮಿಸಬೇಕು ಎಂದರು.
ಸ್ವೀಪ್ ಸಮಿತಿ ಅಧ್ಯಕ್ಷ ಡಾ.ಎಸ್.ಆಕಾಶ್ ಅವರು ಮಹದೇವಪೇಟೆಯ ಮುಖ್ಯ ರಸ್ತೆಯ ಉದ್ದಕ್ಕೂ ಕರಪತ್ರವನ್ನು ಹಂಚಿ ಮತದಾನ ಮಹತ್ವ ಕುರಿತು ಜಾಗೃತಿ ಮೂಡಿಸಿದರು.
ಸ್ಕೌಟ್ಸ್ ಮತ್ತು ಗೈಡ್ಸ್ನ ಪ್ರಧಾನ ಆಯುಕ್ತ ಕೆ.ಟಿ. ಬೇಬಿ ಮ್ಯಾಥ್ಯೂ ಮಾತನಾಡಿ, ಯಾವುದೇ ಆಸೆ, ಆಮಿಷಗಳಿಗೆ ಒಳಗಾಗದೆ ನೈತಿಕ ಮತ್ತು ಕಡ್ಡಾಯ ಮತದಾನ ಮಾಡಬೇಕು. ಮತದಾನ ಎಂಬುದು ೧೮ ವರ್ಷ ಮೇಲ್ಪಟ್ಟವರೆಲ್ಲರಿಗೂ ಅತ್ಯಮೂಲ್ಯವಾದ ಹಕ್ಕಾಗಿದೆ. ಜೊತೆಗೆ ಹೊಣೆಗಾರಿಕೆಯೂ ಆಗಿದೆ. ಆ ನಿಟ್ಟಿನಲ್ಲಿ ನಿರ್ಭೀತಿಯಿಂದ ಮತ ಚಲಾಯಿಸಬೇಕು. ಮತದಾನಕ್ಕಿಂತ ಮತ್ತೊಂದಿಲ್ಲ.
(ಮೊದಲ ಪುಟದಿಂದ) ಖಂಡಿತ ಮತ ಚಲಾಯಿಸುತ್ತೇವೆ ಎಂಬುದು ಅರ್ಹರೆಲ್ಲರಲ್ಲಿಯೂ ಬರಬೇಕು ಎಂದು ತಿಳಿಸಿದರು.
ಜಾಥಾದಲ್ಲಿ ವಿಶೇಷಚೇತನರು ತ್ರಿಚಕ್ರ ವಾಹನದ ಮೂಲಕ ಪಾಲ್ಗೊಂಡು ಗಮನ ಸೆಳೆದರು. ಕೊಡಗು ಜಿಲ್ಲಾ ಚುನಾವಣಾ ರಾಯಬಾರಿಗಳಾದ ಬಸವರಾಜ ಬಡಿಗೇರ್, ಕೆ.ಎಸ್. ಈಶ್ವರಿ, ಕೆ.ಯು. ರವಿ ಮುತ್ತಪ್ಪ, ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕದ ಅಧ್ಯಕ್ಷ ಕೇಶವ ಕಾಮತ್, ಜಾನಪದ ಪರಿಷತ್ ತಾಲೂಕು ಘಕಟಕದ ಅಧ್ಯಕ್ಷ ಅನಿಲ್ ಎಚ್.ಟಿ., ರಾಜ್ಯ ವಿಜ್ಞಾನ ಪರಿಷತ್ತಿನ ಜಿಲ್ಲಾ ಸಮಿತಿ ಅಧ್ಯಕ್ಷ ಟಿ.ಜಿ. ಪ್ರೇಮಕುಮಾರ್, ಲಯನ್ಸ್ ಕ್ಲಬ್ ಅಧ್ಯಕ್ಷೆ ಕನ್ನಂಡ ಕವಿತಾ ಬೊಳ್ಳಪ್ಪ, ಲಯನ್ಸ್ ಕ್ಲಬ್‌ನ ದಾಮೋದರ, ಕೊಡವ ಮಕ್ಕಡ ಕೂಟದ ಅಧ್ಯಕ್ಷ ಬೊಳ್ಳಜ್ಜಿರ ಅಯ್ಯಪ್ಪ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ನ ಸಂಪಾಜೆ ಸ್ಥಳೀಯ ಸಂಸ್ಥೆಯ ಅಧ್ಯಕ್ಷ ಎಂ. ಧನಂಜಯ, ಕಾರ್ಯದರ್ಶಿ ಕೆ.ಬಿ. ಉಷಾರಾಣಿ, ರೋಟರಿ ಮಿಸ್ಟಿ ಹಿಲ್ಸ್ನ ಅಧ್ಯಕ್ಷ ಪ್ರಸಾದ್ ಗೌಡ, ಲಯನ್ಸ್ ಟ್ರಸ್ಟ್ ಅಧ್ಯಕ್ಷ ಅಂಬೆಕಲ್ಲು ನವೀನ್, ಜಿ.ಪಂ. ಯೋಜನಾ ವಿಭಾಗದ ನವೀನ್, ವಿಶೇಷಚೇತನರ ಇಲಾಖೆಯ ಅಧಿಕಾರಿ ವಿಮಲ, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಸದಾಶಿವ ಪಲ್ಲೇದ್, ಹಿಂದುಳಿದ ವರ್ಗಗಳ ತಾಲೂಕು ಅಧಿಕಾರಿ ಮೋಹನ್ ಕುಮಾರ್, ಸ್ಕೌಟ್ಸ್ ಮತ್ತು ಗೈಡ್ಸ್ನ ಜಿಲ್ಲಾ ಸ್ಥಾನಿಕ ಆಯುಕ್ತ ಎಚ್.ಆರ್. ಮುತ್ತಪ್ಪ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ.ಎA. ವಸಂತಿ, ಸಿ.ಪಿ .ಕುಟ್ಟಪ್ಪ, ಕೆ.ಯು. ರಂಜಿತ್, ಪ್ರಸನ್ನ, ವಸಂತ್ ಕುಮಾರ್, ಸರೋಜಿನಿ ದೇವಿ, ಬೋಪಣ್ಣ, ಹ್ಯಾರೀಸ್, ಅಜ್ಜಮಾಡ ವಿನು, ಪ್ರಸನ್ನ ಕುಮಾರ್, ಕೆ.ಬಿ. ಕುಮಾರಸ್ವಾಮಿ, ಗೌರಿ, ನಾಪೋಕ್ಲುವಿನ ಅಂಕುರ್ ಪಬ್ಲಿಕ್ ಶಾಲೆಯ ರತ್ನ ಚರ್ಮಣ, ಪ್ರಾಂಶುಪಾಲರಾದ ಮಮತ, ಶೃತಿ, ಪಿ.ಬಿ. ಮಹೇಶ್, ಅಭಿಮರಿಯಂ, ಪರಿಸರ ಅಧಿಕಾರಿ ಎಂ.ಜಿ. ರಘುರಾಮ್, ಸ್ಕೌಟ್ಸ್ ಮತ್ತು ಗೈಡ್ಸ್ನ ಸಂಘಟಕರಾದ ದಮಯಂತಿ, ಸ್ಕೌಟ್ಸ್ ಮತ್ತು ಗೈಡ್ಸ್ನ ರೋರ‍್ಸ್ ಮತ್ತು ರೇಂರ‍್ಸ್ ವಿದ್ಯಾರ್ಥಿಗಳು, ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜಿನ ವಿದ್ಯಾರ್ಥಿಗಳು, ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಉಪನ್ಯಾಸಕರು, ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಇತರರು ಪಾಲ್ಗೊಂಡಿದ್ದರು.
ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ವಿದ್ಯಾರ್ಥಿಗಳು, ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ ಪ್ರತಿನಿಧಿಗಳು, ಇತರರು ಇದ್ದರು.
ನಗರದ ಸ್ಕಾ÷್ವಡ್ರನ್ ಲೀಡರ್ ಅಜ್ಜಮಾಡ ಬಿ. ದೇವಯ್ಯ ವೃತ್ತದಲ್ಲಿ ಎಲ್ಲರೂ ಒಂದೆಡೆ ಸೇರಿ ಪ್ರತಿಜ್ಞಾ ವಿಧಿ ಸ್ವೀಕರಿಸಲಾಯಿತು. ಸ್ಕೌಟ್ಸ್ ಮತ್ತು ಗೈಡ್ಸ್ ಪ್ರಧಾನ ಆಯುಕ್ತ ಕೆ.ಟಿ.ಬೇಬಿ ಮ್ಯಾಥ್ಯೂ ಅವರು ಪ್ರತಿಜ್ಞಾವಿಧಿ ಬೋಧಿಸಿದರು.