ವೀರಾಜಪೇಟೆ, ಮೇ ೬: ಕೊಡಗು ವಿಶ್ವವಿದ್ಯಾನಿಲಯದ ಪ್ರಥಮ ಕುಲಪತಿಗಳಾಗಿ ನೇಮಕಗೊಂಡ ಪ್ರೊ. ಅಶೋಕ ಸಂಗಪ್ಪ ಆಲೂರ ಅವರನ್ನು ವೀರಾಜಪೇಟೆಯ ಸಂತ ಅನ್ನಮ್ಮ ವಿದ್ಯಾಸಂಸ್ಥೆ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.

ಕುಲಪತಿಗಳ ಕಚೇರಿಯಲ್ಲಿ ಸಂತ ಅನ್ನಮ್ಮ ವಿದ್ಯಾಸಂಸ್ಥೆಗಳ ವ್ಯವಸ್ಥಾಪಕ ರೆ. ಫಾ. ಐಸಾಕ್ ರತ್ನಕರ್ ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲೆ ತೃಪ್ತಿ ಬೋಪಣ್ಣ, ಐಕ್ಯೂಎಸಿ ಸಂಚಾಲಕಿ ಹೇಮ ಬಿ.ಡಿ. ಉಪಸ್ಥಿತರಿದ್ದರು.