ಸುಂಟಿಕೊಪ್ಪ, ಮೇ ೭: ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ಮಡಿಕೇರಿ ವಿಧಾನಸಭಾ ಕ್ಷೇತ್ರ ಅಭ್ಯರ್ಥಿ ದಲಿತ ಸಂಘರ್ಷ ಸಮಿತಿ ಜಿಲ್ಲಾ ಅಧ್ಯಕ್ಷ ಕೆ.ಬಿ.ರಾಜು ಸುಂಟಿಕೊಪ್ಪ ಪಟ್ಟಣದ ಪ್ರಮುಖ ಬೀದಿ. ವಾಣಿಜ್ಯ ಮಳಿಗೆಗಳಿಗೆ ತೆರಳಿ ಮತ ಯಾಚಿಸಿದರು. ನಂತರ ವಾಹನ ಚಾಲಕರ ಸಂಘದ ವೇದಿಕೆಯ ಮುಂಭಾಗದಲ್ಲಿ ಸಾರ್ವಜನಿಕ ಹಾಗೂ ಕಾರ್ಯಕರ್ತರನ್ನು ಉದ್ದೇಶಿಸಿ ಚುನಾವಣಾ ಪ್ರಚಾರ ಭಾಷಣ ಮಾಡಿದ ಅವರು ಬಿಜೆಪಿ ಸರಕಾರದ ಅವಧಿಯಲ್ಲಿ ಭ್ರಷ್ಟಾಚಾರ, ಬೆಲೆ ಏರಿಕೆ, ರೈತ ವಿರೋಧಿ ನೀತಿಗಳೇ ಹೆಚ್ಚಾಗಿವೆ. ಕೊಡಗಿನಲ್ಲಿ ಜೀತದಾಳು ಪದ್ಧತಿ ಇನ್ನೂ ನಿಂತಿಲ್ಲ. ಸರಕಾರದ ಯಾವುದೇ ಸವಲತ್ತುಗಳು ಬಡವರ್ಗಕ್ಕೆ ತಲುಪುತ್ತಿಲ್ಲ. ದಲಿತರು, ಕಾರ್ಮಿಕರು, ಅಲ್ಪಸಂಖ್ಯಾತರು ಎಲ್ಲರೂ ಶೋಷಣೆಗೆ ಒಳಗಾಗಿದ್ದಾರೆ ಎಂದರು. ಇದುವರೆಗೆ ನಮ್ಮನ್ನಾಳಿದ ಕಾಂಗ್ರೆಸ್, ಬಿ.ಜೆ.ಪಿ ಸರಕಾರಗಳು ಸಂವಿಧಾನವನ್ನು ಜಾರಿ ಮಾಡಲು ವಿಫಲವಾಗಿವೆ ಎಂದು ಆರೋಪಿಸಿದರು.