ಮಡಿಕೇರಿ, ಮೇ ೭: ಕಾಂಗ್ರೆಸ್ ಪಕ್ಷದಲ್ಲಿ ಅಲ್ಪಸಂಖ್ಯಾತ ಯುವಕರನ್ನು ಕಡೆಗಣಿಸಲಾಗುತ್ತಿದೆ ಎಂದು ಕೊಟ್ಟಮುಡಿಯಲ್ಲಿ ಕಾಂಗ್ರೆಸ್ ತೊರೆದು ೨೦೦ಕ್ಕೂ ಹೆಚ್ಚು ಕಾರ್ಯಕರ್ತರು ಜೆಡಿಎಸ್ ಅಭ್ಯರ್ಥಿ ನಾಪಂಡ ಮುತ್ತಪ್ಪ ಹಾಗೂ ಜೆಡಿಎಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಜಾಸೀರ್ ಮೂರ್ನಾಡು ಅವರ ನೇತೃತ್ವದಲ್ಲಿ ಜೆಡಿಎಸ್ ಸೇರ್ಪಡೆಗೊಂಡರು.

ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಶರೀಫ್ ಸುಂಟ್ಟಿಕೊಪ್ಪ, ಜಿಲ್ಲಾ ಜೆಡಿಎಸ್ ಉಪಾಧ್ಯಕ್ಷ ಯೂಸುಫ್ ಕೊಂಡAಗೇರಿ, ಜಿಲ್ಲಾ ಜೆಡಿಎಸ್ ವಕ್ತಾರ ಜಿನಾಸುದ್ದೀನ್ ಸುಂಟ್ಟಿಕೊಪ್ಪ, ಝಕರೀಯಾ ಕೊಟ್ಟಮುಡಿ ಹಾಗೂ ಇತರರು ಇದ್ದರು.