ಕೂಡಿಗೆ, ಮೇ ೭ : ಬ್ಯಾಡಗೊಟ್ಟ ಗ್ರಾಮದ ನಿವಾಸಿ ಶ್ರೀಧರ್ ಅವರು ೨೮ ವರ್ಷಗಳ ಕಾಲ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿ ಸ್ವಗ್ರಾಮಕ್ಕೆ ಬಂದಾಗ ಅವರನ್ನು ಸ್ಥಳೀಯ ಗ್ರಾಮಸ್ಥರು, ಗೆಳೆಯರು ಸನ್ಮಾನಿಸಿ ಗೌರವಿಸಿದರು.
ಈ ಸಂದರ್ಭ ಗ್ರಾಮದ ಪ್ರಮುಖರಾದ ಧನಂಜಯ, ಬಸಪ್ಪ, ರಾಮೇಗೌಡ, ಶರೀಫ್, ಪ್ರವೀಣ್, ಮಣಿ, ರವಿ, ಚಿಣ್ಣಪ್ಪ ಸೇರಿದಂತೆ ಇತರರು ಹಾಜರಿದ್ದರು.