ಕೂಡಿಗೆ, ಮೇ ೬: ಕೊಡಗು ಜಿಲ್ಲೆಯ ಬಿಜೆಪಿ ಎರಡು ಅಭ್ಯರ್ಥಿಗಳು ಕಳೆದ ಬಾರಿಗಿಂತ ಈ ಬಾರಿ ಶೇ. ೧೦ ರಷ್ಟು ಹೆಚ್ಚಿನ ಮತಗಳನ್ನು ಪಡೆದು ಜಯಗಳಿಸಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ ಹೇಳಿದರು.
ಕುಶಾಲನಗರದಲ್ಲಿ ವರದಿಗಾರ ರೊಂದಿಗೆ ಮಾತನಾಡಿದ ಅವರು, ಕೊಡಗು ಜಿಲ್ಲೆಗೆ ನೀಡಿದ ಕೊಡುಗೆ ಗಳನ್ನು ಜನ ಮರೆಯಬಾರದು. ಇತರ ಪಕ್ಷಗಳನ್ನು ಮರೆತು ಬಿಜೆಪಿಯನ್ನು ಮತ್ತೊಮ್ಮೆ ಬೆಂಬಲಿಸಬೇಕಿದೆ ಎಂದು ಕೋರಿದರು.
ಶಾಸಕ ಅಪ್ಪಚ್ಚು ರಂಜನ್ ಮಾತನಾಡಿ, ಕಾಂಗ್ರೆಸ್‌ನಲ್ಲಿ ರಾಜೀನಾಮೆ ಪರ್ವ ಆರಂಭಗೊAಡಿದ್ದು, ಇದು ಆ ಪಕ್ಷದ ಪತನದ ಸಂಕೇತ. ಹಲವು ಮುಖಂಡರು ಶೀಘ್ರದಲ್ಲೇ ಬಿಜೆಪಿ ಸೇರಲಿದ್ದಾರೆ ಎಂದರು.
ಈ ಸಂದರ್ಭ ಬಿಜೆಪಿ ಜಿಲ್ಲಾಧ್ಯಕ್ಷ ರಾಬಿನ್ ದೇವಯ್ಯ, ಮಾಜಿ ಎಂಎಲ್‌ಸಿ ಎಸ್.ಜಿ. ಮೇದಪ್ಪ, ಕುಡಾ ಅಧ್ಯಕ್ಷ ಎಂ.ಎA. ಚರಣ್, ಪ್ರಮುಖರಾದ ಮಹೇಶ್ ಜೈನಿ, ಗಣಿಪ್ರಸಾದ್ ಮತ್ತಿತರರು ಇದ್ದರು.