ಕುಶಾಲನಗರ, ಮೇ ೮: ಚಲನಚಿತ್ರ ನಟ ಸಾಧುಕೋಕಿಲ, ಇಂಟಕ್ ರಾಜ್ಯಾಧ್ಯಕ್ಷ ಲಕ್ಷಿö್ಮ ವೆಂಕಟೇಶ್ ಅವರುಗಳು ಕುಶಾಲನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಮತಯಾಚಿಸಿದರು.
ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ನಟ ಸಾಧುಕೋಕಿಲ ಅವರು ರಾಜ್ಯದಲ್ಲಿ ಈ ಬಾರಿ ಕಾಂಗ್ರೆಸ್ ಸರ್ಕಾರ ಆಡಳಿತ ನಡೆಸುವುದು ಖಚಿತವಾಗಿದ್ದು, ಮಡಿಕೇರಿ ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿ ಡಾ. ಮಂಥರ್ ಗೌಡ ಅವರ ಗೆಲುವಿಗೆ ಪ್ರತಿಯೊಬ್ಬರೂ ಕೈಜೋಡಿಸಬೇಕೆಂದರು.
ಕಾAಗ್ರೆಸ್ ಪ್ರಮುಖರಾದ ಚಂದ್ರಮೌಳಿ, ಇಂಟೆಕ್ ಜಿಲ್ಲಾಧ್ಯಕ್ಷ ಬಿ.ಡಿ. ಅಣ್ಣಯ್ಯ, ನಗರ ಕಾಂಗ್ರೆಸ್ ಅಧ್ಯಕ್ಷ ಪ್ರಮೋದ್ ಮುತ್ತಪ್ಪ ಮತ್ತಿತರರು ಇದ್ದರು.