ಕಾಂಗ್ರೆಸ್ ವಿರುದ್ಧ ಮೋದಿ ವಾಗ್ದಾಳಿ
ಶಿವಮೊಗ್ಗ, ಮೇ ೭: ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಪ್ರಧಾನಿ ನರೇಂದ್ರ ಮೋದಿ ಅವರು, ‘ಹೆದರಿದ' ಪಕ್ಷವು ರಾಜ್ಯದಲ್ಲಿ ತನ್ನ ‘ಸುಳ್ಳು ಕೆಲಸ ಮಾಡದ' ಕಾರಣಕ್ಕಾಗಿ ವಿಧಾನಸಭೆ ಚುನಾವಣೆ ಪ್ರಚಾರಕ್ಕಾಗಿ ತನ್ನ ಹಿರಿಯ ನಾಯಕಿ ಸೋನಿಯಾ ಗಾಂಧಿಯನ್ನು ಕರೆತಂದಿದೆ ಎಂದು ಭಾನುವಾರ ಹೇಳಿದ್ದಾರೆ. ಚುನಾವಣಾ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಮೋದಿ, ‘ಈಗ, ಕಾಂಗ್ರೆಸ್ ಎಷ್ಟು ಹೆದರುತ್ತಿದೆ ಮತ್ತು ಹೆದರಿಕೊಂಡಿದೆ ಎಂದರೆ ಅವರ ಸುಳ್ಳುಗಳು ಕೆಲಸ ಮಾಡದಿದ್ದಾಗ, ಪ್ರಚಾರದಲ್ಲಿ ಭಾಗವಹಿಸದವರನ್ನು ಮರಳಿ ಇಲ್ಲಿಗೆ ಕರೆತರಲಾಗುತ್ತಿದೆ' ಎಂದು ಮಾಜಿ ಕಾಂಗ್ರೆಸ್ ಮುಖ್ಯಸ್ಥರ ಹೆಸರನ್ನು ಉಲ್ಲೇಖಿಸದೆ ಹೇಳಿದರು. ಕಾಂಗ್ರೆಸ್ ಸೋಲಿನ ಹೊಣೆಯನ್ನು ಈಗಾಗಲೇ ಪರಸ್ಪರರ ಹೆಗಲಿಗೆ ಹಾಕಲು ಆರಂಭಿಸಿದೆ ಎಂದು ದೂರಿದರು. ಕಾಂಗ್ರೆಸ್ನ ಸುಳ್ಳಿನ ಬಲೂನ್ ಅನ್ನು ಜನರು ಒಡೆದಿದ್ದು, ಅದು ಇನ್ಮುಂದೆ ಕೆಲಸ ಮಾಡುವುದಿಲ್ಲ ಎಂದು ಪ್ರಧಾನಿ ಹೇಳಿದರು. ಮೋದಿ ಅವರಿಗೆ ಹನುಮಾನ್ ವಿಗ್ರಹ ಮತ್ತು ಕೇಸರಿ ಬಣ್ಣದ 'ಶಿವಾಜಿ' ಪೇಟವನ್ನು ನೀಡುತ್ತಿದ್ದಂತೆ, ಜನರು 'ಜೈ ಶ್ರೀ ರಾಮ್' (ಭಗವಾನ್ ರಾಮನಿಗೆ ಜಯವಾಗಲಿ) ಘೋಷಣೆಗಳನ್ನು ಕೂಗಿದಾಗ, ಪ್ರಧಾನಿ 'ಭಜರಂಗ್ ಬಲಿ ಕಿ ಜೈ' ಘೋಷಣೆಗಳನ್ನು ಕೂಗಿದರು.
ಬಿಜೆಪಿ ವಿರುದ್ಧ ರಾಹುಲ್ ಗುಡುಗು
ಬೆಂಗಳೂರು, ಮೇ ೭: ಕರ್ನಾಟಕದಲ್ಲಿ ಭ್ರಷ್ಟಾಚಾರದ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರ ಮೌನವನ್ನು ಪ್ರಶ್ನಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ‘ಡಬಲ್ ಇಂಜಿನ್ ಸರ್ಕಾರದ' ಪ್ರತಿ ಇಂಜಿನ್ಗೆ ರಾಜ್ಯದ ಶೇ. ೪೦ರಷ್ಟು ಕಮಿಷನ್'ನಿಂದ ಎಷ್ಟು ಸಿಕ್ಕಿದೆ ಎಂದು ಹೇಳಿ ಎಂದು ಕೇಳಿದ್ದಾರೆ. ಇದೇ ವೇಳೆ ಸಂಸತ್ತಿನಲ್ಲಿ ಅದಾನಿ ವಿಷಯವನ್ನು ಪ್ರಸ್ತಾಪಿಸಿದ್ದಕ್ಕಾಗಿ ನನ್ನನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಿದ್ದಾರೆ ಎಂದು ರಾಹುಲ್ ಗಾಂಧಿ ಆರೋಪಿಸಿದರು. ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಆನೇಕಲ್ನಲ್ಲಿ ಕಾಂಗ್ರೆಸ್ ಚುನಾವಣಾ ಸಭೆಯನ್ನು ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ಕಳೆದ ಮೂರು ವರ್ಷಗಳಿಂದ ಕರ್ನಾಟಕದಲ್ಲಿ ಬಿಜೆಪಿ ಸರಕಾರವಿದ್ದು, ಪ್ರಧಾನಿಗೆ ಇಲ್ಲಿನ ಭ್ರಷ್ಟಾಚಾರದ ಬಗ್ಗೆ ಅರಿವಿದೆ. ನೀವು ಅದನ್ನು ಕೇವಲ ‘ಡಬಲ್ ಇಂಜಿನ್ ಸರ್ಕಾರ' ಎನ್ನುತ್ತಿದ್ದೀರಿ. ಈ ಬಾರಿ ಡಬಲ್ ಇಂಜಿನ್ ಕಳ್ಳತನವಾಗಿದೆ ಎಂದು ಹೇಳಿದರು. ೪೦ ಪರ್ಸೆಂಟ್ ಕಮಿಷನ್ನಲ್ಲಿ ಯಾವ ಇಂಜಿನ್ಗೆ ಎಷ್ಟು ಸಿಕ್ಕಿತು ಎಂಬುದನ್ನು ದಯವಿಟ್ಟು ಕರ್ನಾಟಕದ ಜನತೆಗೆ ತಿಳಿಸಿ. ಶೇ. ೪೦ ರಷ್ಟು ಕಮಿಷನ್ ವಸೂಲಿ ಮಾಡಲಾಗಿದೆ ಎಂದು ಕರ್ನಾಟಕದಲ್ಲಿ ಗುತ್ತಿಗೆದಾರರ ಸಂಘವು ಪ್ರಧಾನಿಗೆ ಪತ್ರ ಬರೆದಿದ್ದರೂ ಮೋದಿ ಉತ್ತರಿಸಲಿಲ್ಲ ಎಂದು ರಾಹುಲ್ ಹೇಳಿದರು.
ಬಹಿರಂಗ ಪ್ರಚಾರ ಇಂದು ಅಂತ್ಯ
ಬೆAಗಳೂರು, ಮೇ ೭: ತಾ. ೧೦ ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆ ಬಹಿರಂಗ ಪ್ರಚಾರಕ್ಕೆ ತಾ. ೮ ರ ಸಂಜೆ ತೆರೆ ಬೀಳಲಿದೆ. ಬಹಿರಂಗ ಪ್ರಚಾರ ಅಂತ್ಯಗೊAಡ ನಂತರ ಕ್ಷೇತ್ರದ ಮತದಾರರಲ್ಲದವರು ಆ ಕ್ಷೇತ್ರಗಳನ್ನು ಬಿಟ್ಟು ತೆರಳಬೇಕಿದ್ದು, ಸ್ಟಾರ್ ಪ್ರಚಾರಕರು ಕ್ಷೇತ್ರಗಳಲ್ಲಿ ಉಳಿಯುವಂತಿಲ್ಲ. ಆಯಾ ಕ್ಷೇತ್ರಗಳ ಮತಪಟ್ಟಿಯಲ್ಲಿ ಹೆಸರಿಲ್ಲದ ರಾಜಕೀಯ ನಾಯಕರುಗಳೂ ಸೇರಿದಂತೆ ಎಲ್ಲಾ ಮುಖಂಡರು ಜಾಗ ಖಾಲಿ ಮಾಡಬೇಕು ಎಂದು ಚುನಾವಣಾ ಆಯೋಗ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಮತದಾನ ಮುಕ್ತಾಯದ ೪೮ ಗಂಟೆಗೂ ಮುನ್ನ ಬಹಿರಂಗ ಪ್ರಚಾರ ಅಂತ್ಯವಾಗಲಿದೆ. ಅದರಂತೆ ನಾಳೆ ಸಂಜೆ ೬ ಗಂಟೆಗೆ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ. ಬಹಿರಂಗ ಪ್ರಚಾರ ಅಂತ್ಯಗೊAಡ ನಂತರ ಯಾವುದೇ ಅಭ್ಯರ್ಥಿ ಧ್ವನಿವರ್ಧಕ ಬಳಸಿ, ಸಮಾವೇಶ, ರೋಡ್ ಶೋಗಳ ಮೂಲಕ ಮತಯಾಚಿಸುವಂತಿಲ್ಲ. ಆದರೆ, ಮನೆ ಮನೆಗೆ ತೆರಳಿ ಮಂಗಳವಾರ ಸಂಜೆಯವರೆಗೂ ಮತ ಕೇಳಬಹುದು.
ರಾಜ್ಯದಲ್ಲಿ ಮುಂದುವರಿದ ಐಟಿ ದಾಳಿ
ಬೆಂಗಳೂರು, ಮೇ ೭: ರಾಜ್ಯದಲ್ಲಿ ಆದಾಯ ತೆರಿಗೆ ಅಧಿಕಾರಿಗಳ ದಾಳಿ ಮುಂದುವರೆದಿದ್ದು, ಕರ್ನಾಟಕ ಮಾಜಿ ಸಿಎಂ ಎಸ್ ಎಂ ಕೃಷ್ಣ ಅವರ ಸಂಬAಧಿಕರ ಮನೆ ಸೇರಿದಂತೆ ಬೆಂಗಳೂರಿನ ಹಲವೆಡೆ ಐಟಿ ಆಧಿಕಾರಿಗಳು ದಾಳಿ ನಡೆಸಿದ್ದಾರೆ. ೨೦೨೩ರ ಕರ್ನಾಟಕ ವಿಧಾನಸಭೆ ಚುನಾವಣೆಗೆ ಕೇವಲ ಮೂರೇ ದಿನಗಳು ಬಾಕಿ ಇದ್ದು, ಈ ವೇಳೆ ಹರಿದಾಡುವ ಹಣದ ಮೇಲೆ ಆದಾಯ ತೆರಿಗೆ (ಐಟಿ) ಇಲಾಖೆ ಹದ್ದಿನ ಕಣ್ಣಿಟ್ಟಿದೆ. ಇದೀಗ ರಾಜ್ಯದಲ್ಲಿ ಐಟಿ ದಾಳಿ ಮುಂದುವರೆದಿದ್ದು, ಬಿಜೆಪಿ ನಾಯಕ ಹಾಗೂ ಮಾಜಿ ಸಿಎಂ ಎಸ್.ಎಂ. ಕೃಷ್ಣ ಅವರ ಸಹೋದರಿ ನಿವಾಸದ ಮೇಲೆಯೂ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರಿನ ಕೋರಮಂಗಲದ ೧ನೇ ಬ್ಲಾಕ್ನಲ್ಲಿರುವ ನಿವಾಸ ಎಸ್.ಎಂ. ಕೃಷ್ಣ ಸಹೋದರಿ ಎಸ್.ಎಂ. ಸುನೀತಾ ಅವರ ಮನೆ ಮೇಲೆ ಐಟಿ ದಾಳಿಯಾಗಿದ್ದು, ಬಾಗ್ಮನೆ ಹೆಸರಿನಲ್ಲಿರುವ ನಿವಾಸ ಹಾಗೂ ಬಾಗ್ಮನೆ ಬಿಲ್ಡರ್ ಕಚೇರಿಗಳ ಮೇಲೆಯೂ ದಾಳಿ ನಡೆಸಲಾಗಿದೆ, ಮೂಲಗಳ ಪ್ರಕಾರ ಕಳೆದ ಎರಡು ದಿನಗಳಿಂದ ಪರಿಶೀಲನೆ ನಡೆಯುತ್ತಿದ್ದು, ಈ ವೇಳೆ ಅಧಿಕಾರಿಗಳು ಸಾಕಷ್ಟು ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದೆ.
ಇಬ್ಬರು ಮಾವೋವಾದಿಗಳ ಎನ್ಕೌಂಟರ್
ಹೈದರಾಬಾದ್, ಮೇ ೭: ತೆಲಂಗಾಣದಲ್ಲಿ ಭಾನುವಾರ ನಕ್ಸಲ್ ಎನ್ಕೌಂಟರ್ ನಡೆದಿದ್ದು, ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳು ಇಬ್ಬರು ಮಾವೋವಾದಿಗಳನ್ನು ಹೊಡೆದುರುಳಿಸಿದೆ. ನಕ್ಸಲ್ ವಿರುದ್ಧದ ಕಾರ್ಯಾಚರಣೆಯಲ್ಲಿ ಇಬ್ಬರು ನಕ್ಸಲರು ಹತ್ಯೆಯಾಗಿರುವ ಘಟನೆ ಛತ್ತೀಸಗಡಕ್ಕೆ ಹೊಂದಿಕೊAಡಿರುವ ತೆಲಂಗಾಣದ ಗಡಿ ಜಿಲ್ಲೆಯಾಗಿರುವ ಭದ್ರಾದ್ರಿ ಕೊತ್ತಾಗುಡಂ ಜಿಲ್ಲೆಯ ಅರಣ್ಯದಲ್ಲಿ ಭಾನುವಾರ ನಡೆದಿದೆ. ಗುಂಡಿನ ಚಕಮಕಿಯಲ್ಲಿ ನಿಷೇಧಿತ ಸಿಪಿಐ ಮಾವೋವಾದಿ ಸಂಘಟನೆಗೆ ಸೇರಿದ ಇಬ್ಬರು ನಕ್ಸಲರು ಹತ್ಯೆಯಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಮೃತರನ್ನು ಚೇರ್ಲಾ ಸಂಘಟನೆಯ ರಾಜೇಶ್ ಎಂದು ಗುರುತಿಸಲಾಗಿದ್ದು, ಇನ್ನೊಬ್ಬನ ಗುರುತು ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರಿಂದ ಎರಡು ಎಸ್ಎಲ್ಆರ್ ರೈಫಲ್ ಸೇರಿದಂತೆ ಕೆಲವು ಸ್ಫೋಟಕಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಕಾರ್ಯಾಚರಣೆ ಮುಂದುವರೆದಿದೆ. ಇತ್ತೀಚೆಗೆ ಛತ್ತೀಸಗಡದ ದಾಂತೇವಾಡ ಜಿಲ್ಲೆಯಲ್ಲಿ ನಕ್ಸಲರು ಸ್ಫೋಟಕ ಸಿಡಿಸಿ ೧೧ ಪೊಲೀಸರನ್ನು ಕೊಂದಿದ್ದರು. ತೆಲಂಗಾಣ-ಛತ್ತೀಸ್ಗಢ ಗಡಿಯಲ್ಲಿರುವ ಮಂಡಲದ ಪುಟ್ಟಪಾಡು ಅರಣ್ಯದಲ್ಲಿ ಗ್ರೇಹೌಂಡ್ಸ್ ಪಡೆಗಳು ಕೂಂಬಿAಗ್ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ನಕ್ಸಲರು ಉಪಸ್ಥಿತಿ ಕಂಡ ಸೈನಿಕರು ಗುಂಡಿನ ದಾಳಿ ನಡೆಸಿದ್ದಾರೆ. ಈ ವೇಳೆ ಇಬ್ಬರು ನಕ್ಸಲರು ಹತರಾಗಿದ್ದಾರೆ.
ಬುಡಕಟ್ಟು ಜನರೊಂದಿಗೆ ಮೋದಿ ಸಂವಾದ
ಶಿವಮೊಗ್ಗ, ಮೇ ೭: ಪ್ರಧಾನಿ ನರೇಂದ್ರ ಮೋದಿ ಅವರು ‘ಆಪರೇಷನ್ ಕಾವೇರಿ' ಮೂಲಕ ಸುಡಾನ್ನಿಂದ ಕರೆತರಲಾದ ಹಕ್ಕಿಪಿಕ್ಕಿ ಬುಡಕಟ್ಟು ಜನರೊಂದಿಗೆ ಸಂವಾದ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಸುಡಾನ್ನಲ್ಲಿ ತಮ್ಮ ಸಮಯೋಚಿತ ಹಾಗೂ ಸುರಕ್ಷಿತ ಸ್ಥಳಾಂತರಕ್ಕೆ ಕೇಂದ್ರ ಸರ್ಕಾರ ತೆಗೆದುಕೊಂಡ ಕ್ರಮಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸ್ಥಳಾಂತರಿಸಲ್ಪಟ್ಟವರು ಕೃತಜ್ಞತೆ ಸಲ್ಲಿಸಿದರು. ಅಲ್ಲದೇ ಸುಡಾನ್ನಲ್ಲಿ ಎದುರಿಸಿದ ಕಠಿಣ ಸಂದರ್ಭಗಳು ಮತ್ತು ತಮ್ಮ ಸುರಕ್ಷತೆ ಖಾತ್ರಿಗೆ ಸರ್ಕಾರ ಮತ್ತು ಭಾರತೀಯ ರಾಯಭಾರ ಕಚೇರಿ ಹೇಗೆ ಸ್ಪಂದಿಸಿದವು ಎಂಬುದನ್ನು ವಿವರಿಸಿದರು ಎಂದು ಅಧಿಕಾರಿಯೊಬ್ಬರು ತಿಳಿಸಿದರು. ೧೬ನೇ ಶತಮಾನದ ದೊರೆ ಮಹಾರಾಣಾ ಪ್ರತಾಪ್ ಜೊತೆಗೆ ತಮ್ಮ ಪೂರ್ವಜರು ಹೇಗೆ ನಿಂತಿದ್ದರು ಎಂಬುದನ್ನು ಬುಡಕಟ್ಟು ಜನರಿಗೆ ನೆನಪಿಸಿಕೊಂಡ ಪ್ರಧಾನಿ, ಇಡೀ ಜಗತ್ತಿನಲ್ಲಿ ಯಾವುದೇ ಭಾರತೀಯರು ಯಾವುದೇ ರೀತಿಯ ತೊಂದರೆಯಲ್ಲಿದ್ದರೆ, ಸಮಸ್ಯೆ ಬಗೆಹರಿಯುವವರೆಗೂ ಸರ್ಕಾರ ವಿರಮಿಸುವುದಿಲ್ಲ ಎಂದು ಒತ್ತಿ ಹೇಳಿದರು. ಕೆಲವು ರಾಜಕಾರಣಿಗಳು ಈ ವಿಷಯವನ್ನು ರಾಜಕೀಯಗೊಳಿಸಲು ಪ್ರಯತ್ನಿಸಿದರು. ಅಲ್ಲದೇ ಭಾರತೀಯರು ಏಲ್ಲಿದ್ದಾರೆ ಎಂಬುದನ್ನು ಬಹಿರಂಗಪಡಿಸಿದರೆ, ಹೆಚ್ಚಿನ ಅಪಾಯವನ್ನು ಎದುರಿಸಬಹುದು ಎಂಬುದು ನಮ್ಮ ಕಳವಳವಾಗಿತ್ತು. ಆದ್ದರಿಂದ ಸರ್ಕಾರವು ಎಲ್ಲರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಸದ್ದಿಲ್ಲದೆ ಕೆಲಸ ಮಾಡಿದೆ ಎಂದು ಮೋದಿ ಉಲ್ಲೇಖಿಸಿದ್ದಾರೆ.