ಮಡಿಕೇರಿ, ಮೇ ೭: ಕರ್ನಾಟಕ ಸರ್ಕಾರ, ಕಾಲೇಜು ಶಿಕ್ಷಣ ಇಲಾಖೆ, ಮಂಗಳೂರು ವಿಶ್ವವಿದ್ಯಾನಿಲಯ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮಡಿಕೇರಿ, ಮಾನಿನಿ ಮಹಿಳಾ ಘಟಕ ಮತ್ತು ಆಂತರಿಕ ಭರವಸೆ ಕೋಷದ ಸಂಯುಕ್ತಾಶ್ರಯದಲ್ಲಿ ಮಹಿಳೆಯರಲ್ಲಿ ಆತ್ಮಸ್ಥೆöÊರ್ಯ ತುಂಬುವ ಸ್ಫೂರ್ತಿದಾಯಕ ವಿಷಯಗಳ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮಡಿಕೇರಿಯಲ್ಲಿ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಮೊಣ್ಣಂಡ ಶೋಭಾ ಸುಬ್ಬಯ್ಯ ಮಾತನಾಡಿ, ಮಹಿಳೆಯರು ಆಧುನಿಕ ಸಮಾಜದಲ್ಲಿ ಎಲ್ಲಾ ಕ್ಷೇತ್ರಗಳಲ್ಲೂ ಗುರುತಿಸಿಕೊಂಡಿದ್ದಾರೆ. ಈ ಹಿಂದೆ ಕೇವಲ ಅಡುಗೆ ಮನೆಗೆ ಸೀಮಿತವಾಗಿದ್ದ ಮಹಿಳೆ ಸಮಾಜದ ಕೇಂದ್ರ ಭಾಗದಲ್ಲೂ ಕಾಣಿಸಿಕೊಂಡಿದ್ದಾಳೆ. ಪುರುಷ ಪ್ರಧಾನ ಸಮಾಜದಿಂದ ದೂರ ಸರಿದು ಇಂದು ಸ್ವಾವಲಂಬಿ ಬದುಕನ್ನು ಕಂಡುಕೊAಡಿದ್ದಾಳೆ. ಇನ್ಫೋಸಿಸ್ ಸಂಸ್ಥೆಯ ಸಂಸ್ಥಾಪಕಿ ಸುಧಾ ಮೂರ್ತಿಯವರನ್ನು ಉದಾಹರಣೆ ನೀಡಿ, ಅವರು ಪ್ರತಿಯೊಬ್ಬ ಮಹಿಳೆಗೂ ಸ್ಫೂರ್ತಿ, ಅವರಿಂದಲೇ ಸಮಾಜದ ಎಷ್ಟೋ ಹೆಣ್ಣು ಮಕ್ಕಳು ಪ್ರಭಾವಿತರಾಗಿ ಮುನ್ನೆಲೆಗೆ ಬಂದಿದ್ದಾರೆ. ಬರುವ ಎಲ್ಲಾ ಅವಮಾನಗಳನ್ನು, ಕಷ್ಟಗಳನ್ನು ಮೀರಿ ನಿಂತಾಗ ಮಹಿಳೆ ಸ್ವಾವಲಂಬಿಯಾಗಿ ಸಮಾಜದಲ್ಲಿ ಬದುಕಲು ಸಾಧ್ಯ. ಅಲ್ಲದೆ ಅಂತಹ ಯಾವುದೇ ಸಂದರ್ಭಗಳು ಎದುರಾದರೂ ಆತ್ಮಸ್ಥೆöÊರ್ಯವನ್ನು ಕಳೆದುಕೊಳ್ಳಬಾರದು ಎಂದರು. ಕಾಲೇಜಿನ ವಿದ್ಯಾರ್ಥಿನಿಯರಿಗೆ ಕೆಲವೊಂದು ಚಟುವಟಿಕೆಗಳ ಮೂಲಕ ಆತ್ಮಸ್ಥೆöÊರ್ಯ ವೃದ್ಧಿಸುವುದು ಹೇಗೆ ಎಂಬುದನ್ನು ಮನವರಿಕೆ ಮಾಡಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕ ವೃಂದದವರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿನಿಯರು ಪಾಲ್ಗೊಂಡಿದ್ದರು.