ಬೆAಗಳೂರು, ಮೇ ೭: ೨೦೨೩ರ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ತಾ. ೮ ರಂದು (ಇಂದು) ಪ್ರಕಟವಾಗಲಿದೆ. ಮಾರ್ಚ್ ೩೧ ರಿಂದ ಫೆಬ್ರವರಿ ೧೫ ರವರೆಗೂ ಪರೀಕ್ಷೆ ನಡೆದಿತ್ತು. ಇದೀಗ ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯ ಮುಕ್ತಾಯವಾಗಿದ್ದು, ಇಂದು ಫಲಿತಾಂಶ ಪ್ರಕಟವಾಗಲಿದೆ ಎಂದು ರಾಜ್ಯ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ. ಬೆಳಿಗ್ಗೆ ೧೦ ಗಂಟೆಗೆ ರಾಜ್ಯ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಫಲಿತಾಂಶ ಪ್ರಕಟಿಸಲಾಗುತ್ತದೆ. ಬಳಿಕ ಫಲಿತಾಂಶವನ್ನು ಇಲಾಖೆಯ ಜಾಲತಾಣ hಣಣಠಿ://ಞಚಿಡಿಡಿesuಟಣs.ಟಿiಛಿ.iಟಿ ನಲ್ಲಿ ಫಲಿತಾಂಶ ವೀಕ್ಷಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.