ಸೋಮವಾರಪೇಟೆ, ಮೇ ೭: ಬೆಂಗಳೂರಿನ ಖಾಸಗಿ ಕಂಪೆನಿಯೊAದರಲ್ಲಿ ಕೆಲಸ ಮಾಡುತ್ತಿದ್ದ ತಾಲೂಕಿನ ಯುವಕನೋರ್ವ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.
ಸಮೀಪದ ಕಿರಗಂದೂರು ಗ್ರಾಮದ ಶಿವಪ್ಪ ಹಾಗೂ ರುಕ್ಮಿಣಿ ಅವರ ಪುತ್ರ ಜಿತೀನ್ (೨೨) ಬೆಂಗಳೂರಿನ ವಿಜಯನಗರ ದಲ್ಲಿರುವ ಬಾಡಿಗೆ ಮನೆಯಲ್ಲಿ ನೆಲೆಸಿದ್ದು, ಖಾಸಗಿ ಕಂಪೆನಿಯೊAದರಲ್ಲಿ ಕೆಲಸ ಮಾಡುತ್ತಿದ್ದ. ನಿನ್ನೆ ದಿನ ವಾಸದ ಕೊಠಡಿಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಮೈಸೂರಿನ ಕಾಮಾಕ್ಷಿಪಾಳ್ಯ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಂತ್ಯಕ್ರಿಯೆ ಮಾಲಂಬಿ ಗ್ರಾಮದಲ್ಲಿ ಇಂದು ಮಧ್ಯಾಹ್ನ ನಡೆಯಿತು.