ಕುಶಾಲನಗರ, ಮೇ ೯: ಕೊಡಗು ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಂದರರಾಜ್ ಅವರು ಕುಶಾಲನಗರÀ ಮತ್ತು ಸುತ್ತಮುತ್ತ ವ್ಯಾಪ್ತಿಯ ವಿವಿಧ ಮತಗಟ್ಟೆಗಳಿಗೆ ಭೇಟಿ ನೀಡಿ ಭದ್ರತಾ ವ್ಯವಸ್ಥೆ ಬಗ್ಗೆ ಪರಿಶೀಲನೆ ನಡೆಸಿದರು. ಕೊಡಗು-ಮೈಸೂರು ಜಿಲ್ಲಾ ಗಡಿಭಾಗದ ಕುಶಾಲನಗರ ಹಾಗೂ ಚುನಾವಣಾ ತಪಾಸಣಾ ಕೇಂದ್ರಕ್ಕೆ ಭೇಟಿ ನೀಡಿ ಅಲ್ಲಿನ ಅಧಿಕಾರಿ ಸಿಬ್ಬಂದಿಗಳ ಜೊತೆ ಚರ್ಚೆ ನಡೆಸಿದರು. ಈ ಸಂದರ್ಭ ಮಾತನಾಡಿದ ಸುಂದರ್ರಾಜ್ ಅವರು, ಮತಗಟ್ಟೆಗಳಲ್ಲಿ ಎಲ್ಲಾ ರೀತಿಯ ವ್ಯವಸ್ಥೆ ಕಲ್ಪಿಸಲಾಗಿದ್ದು ಮತದಾನ ಪ್ರಕ್ರಿಯೆಗೆ ಸಂಪೂರ್ಣ ರೀತಿಯಲ್ಲಿ ಸನ್ನದ್ಧವಾಗಿದೆ ಎಂದು ತಿಳಿಸಿದರು. ಈ ಸಂದರ್ಭ ಕುಶಾಲನಗರ ಡಿವೈಎಸ್ಪಿ ಆರ್.ವಿ ಗಂಗಾಧರಪ್ಪ, ಪಟ್ಟಣ ಪೊಲೀಸ್ ಠಾಣಾಧಿಕಾರಿ ರವೀಂದ್ರ ಇದ್ದರು.