ನಾಪೋಕ್ಲು, ಮೇ ೧೧: ಇಲ್ಲಿನ ಚೆರಿಯಪರಂಬುವಿನ ಜನರಲ್ ಕೆ.ಎಸ್. ತಿಮ್ಮಯ್ಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಬಾಳೆಯಡ ಕಪ್ ಕ್ರಿಕೆಟ್ ನಮ್ಮೆಯ ಗುರುವಾರದ ಪಂದ್ಯಗಳಲ್ಲಿ ನೆರವಂಡ, ಪಂದ್ಯAಡ, ಕಾಣತಂಡ ಮೂರು ತಂಡಗಳು ಮುನ್ನಡೆ ಸಾಧಿಸಿದವು.

ಮೊದಲ ಪಂದ್ಯದಲ್ಲಿ ಪೊರುಕೊಂಡ ತಂಡದ ವಿರುದ್ಧ ನೆರವಂಡ ೩ ವಿಕೆಟ್ ನಷ್ಟಕ್ಕೆ ೮೪ ರನ್‌ಗಳಿಸಿತು. ಉತ್ತರವಾಗಿ ಆಡಿದ ಪೊರುಕೊಂಡ ತಂಡ ನಾಲ್ಕು ವಿಕೆಟ್ ನಷ್ಟಕ್ಕೆ ಕೇವಲ ೩೮ ರನ್ ಗಳಿಸಿ ಸೋಲು ಅನುಭವಿಸಿತು. ಪೊರುಕೊಂಡ ಅನಿಲ್ ಮ್ಯಾನ್ ಆಫ್ ದಿ ಮ್ಯಾಚ್ ಆಗಿ ಹೊರಹೊಮ್ಮಿದರು. ಪಂದ್ಯAಡ ತಂಡ ಯಾವುದೇ ವಿಕೆಟ್ ನಷ್ಟವಿಲ್ಲದೆ ೩೯ ರನ್ ಗಳಿಸಿತು. ಉತ್ತರವಾಗಿ ಆಡಿದ ಚಂಗುಲAಡ ತಂಡ ೬ ವಿಕೆಟ್ ನಷ್ಟಕ್ಕೆ ೩೬ ರನ್ ಗಳಿಸಿ ಸೋಲನ್ನು ಅನುಭವಿಸಿತು. ಚಂಗುಲAಡ ಅಜಿತ್ ಮ್ಯಾನ್ ಆಫ್ ದಿ ಮ್ಯಾಚ್ ಆಗಿ ಹೊರಹೊಮ್ಮಿದರು.

ಮೂರನೇ ಪಂದ್ಯದಲ್ಲಿ ಕಾಣತಂಡ ತಂಡ ಯಾವುದೇ ವಿಕೆಟ್ ನಷ್ಟವಿಲ್ಲದೆ ೭೭ ರನ್ ಗಳಿಸಿತು. ಉತ್ತರವಾಗಿ ಆಡಿದ ಬೊಟ್ಟಂಗಡ ತಂಡ ನಾಲ್ಕು ವಿಕೆಟ್ ನಷ್ಟಕ್ಕೆ ೫೨ ರನ್ ಗಳಿಸಿತು. ಈ ಪಂದ್ಯದಲ್ಲಿ ಕಾಣತಂಡ ತಂಡ ಗೆಲುವುಸಾಧಿಸಿ ಮುಂದಿನ ಸುತ್ತು ಪ್ರವೇಶಿಸಿತು. ಬೊಟ್ಟಂಗಡ ಗೌತಮ್ ಮ್ಯಾನ್ ಆಫ್ ದಿ ಮ್ಯಾಚ್ ಆಗಿ ಹೊರಹೊಮ್ಮಿದರು. - ದುಗ್ಗಳ ಸದಾನಂದ.