ಇಮ್ರಾನ್ ಖಾನ್ ಬಂಧನ ಕಾನೂನುಬಾಹಿರ

ಇಸ್ಲಾಮಾಬಾದ್, ಮೇ ೧೧: ಮಾಜಿ ಪ್ರಧಾನಿ ಇಮ್ರಾನ್ ಖಾನ್ ಬಂಧನ ಕಾನೂನುಬಾಹಿರ ಎಂದಿರುವ ಪಾಕ್ ಸುಪ್ರೀಂ ಕೋರ್ಟ್, ತಕ್ಷಣವೇ ಅವರನ್ನು ಬಿಡುಗಡೆ ಮಾಡುವಂತೆ ಅಧಿಕಾರಿಗಳಿಗೆ ಆದೇಶಿಸಿದೆ. ಇಮ್ರಾನ್ ಖಾನ್ ಬಂಧನವನ್ನು ಅವರ ಕಾನೂನು ತಂಡ ಪ್ರಶ್ನಿಸಿದ ನಂತರ ಅವರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸುವಂತೆ ದೇಶದ ಸರ್ವೋಚ್ಚ ನ್ಯಾಯಾಲಯ ಈ ಹಿಂದೆ ಆದೇಶಿಸಿತ್ತು. ಇಮ್ರಾನ್ ಖಾನ್ ಬಂಧನದ ನಂತರ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಸರ್ಕಾರ ಸೇನೆಯ ನೆರವು ಪಡೆದಿತ್ತು. ಈ ಸಂದರ್ಭದಲ್ಲಿ ಇಮ್ರಾನ್ ಖಾನ್ ಬೆಂಬಲಿಗರು ಹಾಗೂ ಪೊಲೀಸರೊಂದಿಗೆ ನಡೆದ ಘರ್ಷಣೆಯಲ್ಲಿ ಐವರು ಹತ್ಯೆಯಾಗಿದ್ದರು. ಮಿಲಿಟರಿ ಕಟ್ಟಡಗಳ ಮೇಲೆ ದಾಳಿಯಾಗಿತ್ತು. ಅಲ್ಲದೇ, ಸರ್ಕಾರದ ಇನ್ನಿತರ ಕಟ್ಟಡಗಳ ಮೇಲೆ ಬೆಂಕಿ ಹಚ್ಚಲಾಗಿತ್ತು. ಈ ಸಂಬAಧ ಇಲ್ಲಿಯವರೆಗೂ ಸುಮಾರು ೨,೦೦೦ ಜನರನ್ನು ಬಂಧಿಸಲಾಗಿದೆ. ಇಮ್ರಾನ್ ಖಾನ್ ಅವರನ್ನು ಪಾಕ್ ಸಂಸತ್ತಿನಲ್ಲಿ ಅವಿಶ್ವಾಸ ನಿರ್ಣಯ ಮಂಡಿಸುವ ಮೂಲಕ ೨೦೨೨ ಏಪ್ರಿಲ್‌ನಲ್ಲಿ ಪ್ರಧಾನಮಂತ್ರಿ ಹುದ್ದೆಯಿಂದ ಉಚ್ಚಾಟಿಸಲಾಗಿತ್ತು. ಅಭಿಪ್ರಾಯ ಸಂಗ್ರಹಗಳ ಪ್ರಕಾರ ಅವರು ಪಾಕಿಸ್ತಾನದ ಅತ್ಯಂತ ಜನಪ್ರಿಯ ನಾಯಕರಾಗಿದ್ದಾರೆ. ಭೂ ವಂಚನೆ ಪ್ರಕರಣದಲ್ಲಿ ಭ್ರಷ್ಟಾಚಾರ ನಿಗ್ರಹ ದಳ ಇಮ್ರಾನ್ ಖಾನ್ ಅವರನ್ನು ಮಂಗಳವಾರ ಬಂಧಿಸಿತ್ತು. ಆದರೆ, ಯಾವುದೇ ತಪ್ಪು ಮಾಡಿಲ್ಲ ಎಂದು ಇಮ್ರಾನ್ ಖಾನ್ ಪರ ವಕೀಲರು ಸುಪ್ರೀಂಕೋರ್ಟ್ನಲ್ಲಿ ವಾದಿಸಿದರು.

ಸಿ.ಟಿ. ರವಿ ಆಸ್ಪತ್ರೆಗೆ ದಾಖಲು

ಚಿಕ್ಕಮಗಳೂರು, ಮೇ ೧೧: ಬಿಜೆಪಿ ರಾಷ್ಟಿçÃಯ ಪ್ರಧಾನ ಕಾರ್ಯದರ್ಶಿ, ಅಭ್ಯರ್ಥಿ ಸಿ.ಟಿ. ರವಿ ತಡರಾತ್ರಿ ಕಿಡ್ನಿ ಸಮಸ್ಯೆಯಿಂದ ನಗರದ ಆಶ್ರಯ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರಿಗೆ ಇತ್ತೀಚೆಗೆ ಕಿಡ್ನಿ ಸಮಸ್ಯೆ ಎದುರಾಗಿದ್ದು, ಶಸ್ತçಕ್ರಿಯೆ ಕೂಡಾ ನಡೆದಿತ್ತು. ಇದೀಗ ಬುಧವಾರ ರಾತ್ರಿ ಆರೋಗ್ಯದಲ್ಲಿ ದಿಢೀರ್ ವ್ಯತ್ಯಾಸವಾಗಿದ್ದರಿಂದ ಅವರನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಚಿಕ್ಕಮಗಳೂರು ನಗರದ ಆಶ್ರಯ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಚುನಾಯಿತ ಸರ್ಕಾರಕ್ಕೆ ಆಡಳಿತಾತ್ಮಕ ಅಧಿಕಾರ ಇರಬೇಕು ; ಸುಪ್ರೀಂ ಕೋರ್ಟ್

ನವದೆಹಲಿ, ಮೇ ೧೧: ರಾಷ್ಟç ರಾಜಧಾನಿಯ ಆಡಳಿತಾತ್ಮಕ ಸೇವೆಗಳ ಮೇಲಿನ ನಿಯಂತ್ರಣದ ವಿಚಾರಕ್ಕೆ ಸಂಬAಧಿಸಿದAತೆ ದೆಹಲಿ ಸರ್ಕಾರದ ಪರವಾಗಿ ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ಅರವಿಂದ ಕೇಜ್ರಿವಾಲ್ ಸರ್ಕಾರಕ್ಕೆ ದೊಡ್ಡ ಗೆಲುವು ಸಿಕ್ಕಂತಾಗಿದೆ. ದೆಹಲಿ ಸರ್ಕಾರವು ಕಾನೂನು ಮತ್ತು ಸುವ್ಯವಸ್ಥೆ, ಭೂಮಿ ಹೊರತುಪಡಿಸಿ ಇತರೆ ಸೇವೆಗಳ ಮೇಲೆ ಅಧಿಕಾರ ಹೊಂದಬಹುದು ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿದೆ. ಈ ಸಂದರ್ಭದಲ್ಲಿ ಕೇಂದ್ರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಸುಪ್ರೀಂ ಕೋರ್ಟ್, ಸಂಪೂರ್ಣ ಆಡಳಿತಾತ್ಮಕ ನಿಯಂತ್ರಣ ಕೇಂದ್ರ ಸರ್ಕಾರದ ಬಳಿ ಇರಬೇಕಾದರೆ ದೆಹಲಿಯಲ್ಲಿ ಚುನಾಯಿತ ಸರ್ಕಾರ ಇರುವುದರ ಉದ್ದೇಶವೇನು ಎಂದು ಪ್ರಶ್ನಿಸಿತು. ದೆಹಲಿಯಲ್ಲಿ ಆಡಳಿತಾತ್ಮಕ ಸೇವೆಗಳ ನಿಯಂತ್ರಣಕ್ಕೆ ಸಂಬAಧಿಸಿದAತೆ ಕೇಂದ್ರ ಮತ್ತು ದೆಹಲಿ ಸರ್ಕಾರದ ನಡುವಿನ ವಿವಾದದ ಕುರಿತು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ನೇತೃತ್ವದ ಐವರು ನ್ಯಾಯಮೂರ್ತಿಗಳ ಪೀಠ ತೀರ್ಪು ಪ್ರಕಟಿಸಿದೆ. ತೀರ್ಪು ಪ್ರಕಟಿಸುವ ಮುನ್ನ ಸಿಜೆಐ, ಎಲ್ಲ ನ್ಯಾಯಾಧೀಶರ ಒಪ್ಪಿಗೆ ಮೇರೆಗೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಿದರು.

ಪ್ರತಿಪಕ್ಷಗಳು ಒಗ್ಗೂಡುವಿಕೆಗೆ ಕಾರ್ಯತಂತ್ರ

ಮುAಬೈ, ಮೇ ೧೧: ಎನ್‌ಸಿಪಿ ನಾಯಕ ಶರದ್ ಪವಾರ್ ಗುರುವಾರ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಭೇಟಿಯಾಗಿ ಮಾತುಕತೆ ನಡೆಸಿದರು. ದೇಶದ ಹಿತದೃಷ್ಟಿಯಿಂದ ಪ್ರತಿಪಕ್ಷಗಳು ಒಗ್ಗೂಡಬೇಕಾದ ಅಗತ್ಯವಿದೆ ಎಂದು ಉಭಯ ನಾಯಕರು ಪ್ರತಿಪಾದಿಸಿದರು. ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶರದ್ ಪವಾರ್, ದೇಶದಲ್ಲಿನ ಪರಿಸ್ಥಿತಿ ಮತ್ತು ಪ್ರಜಾಪ್ರಭುತ್ವ ಕಾಪಾಡುವ ನಿಟ್ಟಿನಲ್ಲಿ ಒಟ್ಟಾಗಿ ಕೆಲಸ ಮಾಡಬೇಕಾದ ಅಗತ್ಯವಿದೆ. ದೇಶದ ಪರಿಸ್ಥಿತಿ ನೋಡಿದ ನಂತರ ಒಟ್ಟಾಗಿ ಕೆಲಸ ಮಾಡಿದರೆ, ದೇಶಕ್ಕೆ ಅಗತ್ಯವಾದ ಪರ್ಯಾಯಕ್ಕೆ ನೆರವಾಗಲಿದೆ. ಕರ್ನಾಟಕದ ಚುನಾವಣೆಯಲ್ಲಿ ಜನರು ಬಿಜೆಪಿ ತಿರಸ್ಕರಿಸಿ, ಜಾತ್ಯತೀತ ಸರ್ಕಾರವನ್ನು ರಚಿಸಲಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ ಎಂದರು. ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ನಿತೀಶ್ ಕುಮಾರ್, ವಿರೋಧ ಪಕ್ಷಗಳ ಸಂಖ್ಯೆ ಹೆಚ್ಚಾದಷ್ಟೂ ರಾಷ್ಟçದ ಹಿತಾಸಕ್ತಿ ಉತ್ತಮವಾಗಿರುತ್ತದೆ. ಹಲವು ರಾಜಕೀಯ ಪಕ್ಷಗಳೊಂದಿಗೆ ಮಾತನಾಡಿದ್ದೇವೆ. ನಾವು ಒಟ್ಟಿಗೆ ಕುಳಿತು ಮುಂದಿನ ನಿರ್ಧಾರಗಳನ್ನು ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದರು.

ಠಾಕ್ರೆ ಸರ್ಕಾರ ಪುನಃಸ್ಥಾಪಿಸಲು ಸಾಧ್ಯವಿಲ್ಲ-ಸುಪ್ರೀಂ ಕೋರ್ಟ್

ನವದೆಹಲಿ, ಮೇ ೧೧: ಮಹಾರಾಷ್ಟçದಲ್ಲಿ ಉದ್ಧವ್ ಠಾಕ್ರೆ ಬಣದ ಮಹಾರಾಷ್ಟç ವಿಕಾಸ ಅಘಾಡಿ ಸರ್ಕಾರ ರಚನೆ ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್ ಗುರುವಾರ ಹೇಳಿದೆ. ಮಹಾರಾಷ್ಟç ಮೂಲ ಶಿವಸೇನೆಯಿಂದ ಬಂಡಾಯವೆದ್ದು ಏಕನಾಥ ಶಿಂಧೆ ಹಿಂದೆ ಹೋಗಿದ್ದ ೧೬ ಮಂದಿ ಶಾಸಕರನ್ನು ಅನರ್ಹಗೊಳಿಸಬೇಕು ಎಂದು ಕೋರಿ ಮಾಜಿ ಸಿಎಂ ಉದ್ಧವ್ ಠಾಕ್ರೆ ಬಣ ಸಲ್ಲಿಸಿದ್ದ ಅರ್ಜಿ ಸೇರಿದಂತೆ ೨ ತೀರ್ಪುಗಳನ್ನು ಸುಪ್ರೀಂಕೋರ್ಟ್ ಇಂದು ಪ್ರಕಟಿಸಿದೆ. ತೀರ್ಪು ಪ್ರಕಟಿಸಿರುವ ಸುಪ್ರೀಂಕೋರ್ಟ್, ಉದ್ಧವ್ ಠಾಕ್ರೆ ವಿಶ್ವಾಸಮತ ಸಾಬೀತು ಪಡಿಸದೆ ರಾಜೀನಾಮೆ ನೀಡಿದ್ದರಿಂದ ಸರ್ಕಾರವನ್ನು ಮರುಸ್ಥಾಪಿಸಲಾಗದು ಎಂದು ಹೇಳಿದೆ. ಉಧ್ಧವ್ ಠಾಕ್ರೆ ರಾಜೀನಾಮೆ ನೀಡಿದ್ದರಿಂದ ಏಕನಾಥ ಶಿಂಧೆ ನೇತೃತ್ವದ ಬಣವನ್ನು ಸರ್ಕಾರ ರಚನೆಗೆ ಆಹ್ವಾನಿಸಿರುವ ರಾಜ್ಯಪಾಲರ ಕ್ರಮ ಸರಿಯಾಗಿತ್ತು. ಆದರೆ ಠಾಕ್ರೆ ಸರ್ಕಾರ ಬಹುಮತ ಕಳೆದುಕೊಂಡಿದೆ ಎಂದು ಭಾವಿಸಿ ಸದನಲ್ಲಿ ಬಹುಮತ ಸಾಬೀತುಪಡಿಸಲು ಆದೇಶಿಸಿದ್ದೂ ಸರಿಯಾದ ನಿರ್ಧಾರವಲ್ಲ ಎಂದು ರಾಜ್ಯಪಾಲರನ್ನು ತರಾಟೆಗೆ ತೆಗೆದುಕೊಂಡಿದೆ.

ಸಿAಗಾಪುರಕ್ಕೆ ಪ್ರಯಾಣ ಬೆಳೆಸಿದೆ ಹೆಚ್.ಡಿ.ಕೆ.

ಬೆಂಗಳೂರು, ಮೇ ೧೧: ರಾಜ್ಯ ವಿಧಾನಸಭಾ ಚುನಾವಣೆಗೆ ಮತದಾನ ನಡೆದಿದ್ದು, ೨ ದಿನಗಳಲ್ಲಿ ಫಲಿತಾಂಶ ಹೊರಬೀಳಲಿದೆ. ಮತದಾನ ಮುಕ್ತಾಯಗೊಂಡ ಬೆನ್ನಲ್ಲೇ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಯವರು ವಿದೇಶಕ್ಕೆ ಹಾರಿದ್ದಾರೆಂದು ತಿಳಿದುಬಂದಿದೆ. ಕುಮಾರಸ್ವಾಮಿಯವರು ಬುಧವಾರ ತಡರಾತ್ರಿ ಆಪ್ತರ ಜೊತೆ ಬೆಂಗಳೂರಿನಿAದ ಸಿಂಗಾಪೂರಕ್ಕೆ ತೆರಳಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ. ಕಳೆದ ಆರು ತಿಂಗಳಿನಿAದ ಸತತ ಪ್ರಚಾರ, ಪ್ರವಾಸದಿಂದ ಸುಸ್ತಾಗಿದ್ದ ಹೆಚ್.ಡಿ.ಕೆ. ಎರಡು ದಿನಗಳ ಕಾಲ ವಿಶ್ರಾಂತಿಗಾಗಿ ಸಿಂಗಾಪುರಕ್ಕೆ ಪ್ರಯಾಣ ಬೆಳೆಸಿದ್ದಾರೆಂದು ಮೂಲಗಳು ತಿಳಿಸಿವೆ.

ಮಣಿಪುರ:ರಾಷ್ಟçಪತಿ ಆಡಳಿತ ಜಾರಿಗೆ ಕಾಂಗ್ರೆಸ್ ಒತ್ತಾಯ

ಇಂಪಾಲ್, ಮೇ ೧೧: ಮಣಿಪುರ ಹಿಂಸಾಚಾರ ಪೂರ್ವಯೋಜಿತ ಎಂದು ಕಾಂಗ್ರೆಸ್ ಆರೋಪಿಸಿದ್ದು, ಶಾಂತಿ ಮತ್ತು ಸಹಜ ಪರಿಸ್ಥಿತಿ ಪುನರ್ ಸ್ಥಾಪಿಸಲು ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆಯನ್ನು ತಕ್ಷಣವೇ ಹೇರಬೇಕೆಂದು ಒತ್ತಾಯಿಸಿದೆ. ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಕಾಂಗ್ರೆಸ್ ವಕ್ತಾರ, ಪಕ್ಷದ ರಾಜ್ಯ ಉಸ್ತುವಾರಿ ಭಕ್ತ ಚರಣ್ ದಾಸ್, ಹಿಂಸಾಚಾರದಲ್ಲಿ ಸಾವನ್ನಪ್ಪಿದವರ ಕುಟುಂಬಗಳಿಗೆ ರೂ. ೨೦ ಲಕ್ಷ ಮತ್ತು ಮನೆ ಕಳೆದುಕೊಂಡವರಿಗೆ ೫ ಲಕ್ಷ ರೂಪಾಯಿ ಪರಿಹಾರ ಗಾಯಾಳುಗಳಿಗೆ ತಕ್ಷಣ ಚಿಕಿತ್ಸೆ ನೀಡಬೇಕು ಮತ್ತು ಜನರು ತಮ್ಮ ಮನೆಗೆ ಮರಳಲು ಸುರಕ್ಷಿತ ಸ್ಥಳದ ಅಗತ್ಯವಿದೆ ಎಂದರು. ಬಿಜೆಪಿ ಸರ್ಕಾರ ಪರಿಸ್ಥಿತಿ ನಿಯಂತ್ರಿಸಲು ಸಂಪೂರ್ಣವಾಗಿ ವಿಫಲವಾಗಿದೆ. ಅದು ಹಿಂಸಾಚಾರ ತಡೆಯಲು ಸಾಧ್ಯವಾಗಲಿಲ್ಲ, ಶಸಾಸ್ತç ಲೂಟಿ ಮಾಡುವುದನ್ನು ತಡೆಯಲು ಅಥವಾ ಅವುಗಳನ್ನು ವಶಪಡಿಸಿಕೊಳ್ಳಲು ಸಾಧ್ಯವಾಗಲಿಲ್ಲ, ಅಮಾಯಕರನ್ನು ರಕ್ಷಿಸಲು ಮತ್ತು ಪರಿಹಾರ ಶಿಬಿರಗಳಲ್ಲಿ ಇರುವವರಿಗೆ ಸೂಕ್ತ ಸೌಲಭ್ಯ ನೀಡುತ್ತಿಲ್ಲ ಎಂದು ಆರೋಪಿಸಿದರು.