ಮಡಿಕೇರಿ, ಮೇ ೧೧: ದಕ್ಷಿಣ ಕೊಡಗಿನ ಕೊಟ್ಟಗೇರಿಯ ಲಕ್ಷö್ಮಣತೀರ್ಥ ಸಂಘದ ಒಂಭತ್ತನೇ ವಾರ್ಷಿಕೋತ್ಸವದ ಅಂಗವಾಗಿ ತಾ. ೨೧ ಮತ್ತು ೨೨ ರಂದು ಬಾಳೆಲೆಯಲ್ಲಿ ಜಿಲ್ಲಾಮಟ್ಟದ ಹೊನಲು ಬೆಳಕಿನ ಮುಕ್ತ ವಾಲಿಬಾಲ್ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಮಚ್ಚಮಾಡ ಅಯ್ಯಪ್ಪ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಾಳೆಲೆ ವಿಜಯಲಕ್ಷಿö್ಮ ಪದವಿಪೂರ್ವ ಕಾಲೇಜು ಮೈದಾನದಲ್ಲಿ ತಾ. ೨೧ ರಂದು ಮಧ್ಯಾಹ್ನ ಪಂದ್ಯಾವಳಿ ಉದ್ಘಾಟನೆಗೊಳ್ಳಲಿದ್ದು, ತಾ. ೨೨ ರಂದು ಸಂಜೆ ೬ ಗಂಟೆಯ ಬಳಿಕ ಅಂತಿಮ ಪಂದ್ಯ ನಡೆಯಲಿದೆ. ಪಂದ್ಯಾವಳಿ ನಾಕ್‌ಔಟ್ ಮಾದರಿಯಲ್ಲಿ ನಡೆಯಲಿದ್ದು, ೨೫ ರಿಂದ ೩೦ ತಂಡಗಳು ಪಾಲ್ಗೊಳ್ಳುವ ನಿರೀಕ್ಷೆ ಇರುವುದಾಗಿ ತಿಳಿಸಿದರು. ಪಂದ್ಯಾವಳಿಯಲ್ಲಿ ಪಾಲ್ಗೊಳ್ಳಲು ಇಚ್ಛಿಸುವ ತಂಡಗಳು ತಾ. ೧೫ ರೊಳಗಾಗಿ ಶುಲ್ಕದೊಂದಿಗೆ ತಮ್ಮ ಹೆಸರನ್ನು ನೋಂದಾಯಿಸಿ ಕೊಳ್ಳಬಹುದು. ಈ ಕುರಿತ ಮಾಹಿತಿಗಾಗಿ ಮಚ್ಚಮಾಡ ಅಯ್ಯಪ್ಪ ಮೊ. ೯೪೮೦೭೩೧೭೯೭, ಮಾಚಂಗಡ ಸುಬ್ರಮಣಿ ಮೊ. ೯೯೮೦೬೭೨೯೫೮, ಅವರನ್ನು ಸಂಪರ್ಕಿಸಬಹುದೆAದು ತಿಳಿಸಿದರು. ಪಂದ್ಯಾವಳಿ ವಿಜೇತ ತಂಡಕ್ಕೆ ರೂ. ೧ ಲಕ್ಷ ನಗದು ಮತ್ತು ಟ್ರೋಫಿ, ದ್ವಿತೀಯ ಬಹುಮಾನ ರೂ. ೫೦ ಸಾವಿರ ಮತ್ತು ಟ್ರೋಫಿ, ಮೂರನೇ ಬಹುಮಾನ ರೂ. ೧೦ ಸಾವಿರ ಮತ್ತು ಟ್ರೋಫಿ, ನಾಲ್ಕನೇ ಬಹುಮಾನ ರೂ. ೧೦ ಸಾವಿರ ಮತ್ತು ಟ್ರೋಫಿಯನ್ನು ನೀಡಲಾಗುವುದು ಎಂದು ಮಾಹಿತಿ ನೀಡಿದರು.
ಗೋಷ್ಠಿಯಲ್ಲಿ ಸಂಘÀದ ಕಾರ್ಯದರ್ಶಿ ಮಾಚಂಗಡ ಸುಬ್ರಮಣಿ, ಪಂದ್ಯಾವಳಿ ಉಸ್ತುವಾರಿ ಮಾಚಂಗಡ ಉಮೇಶ್ ಮುತ್ತಣ್ಣ, ಸಂಘದ ಮಾಜಿ ಅಧ್ಯಕ್ಷ ಮಾಚಂಗಡ ಸಂಪತ್ ಅಯ್ಯಪ್ಪ, ಸದಸ್ಯರಾದ ಮಾಚಂಗಡ ವಿನೋದ್ ಬೋಪಣ್ಣ, ಅಳಮೇಂಗಡ ಚಂಗಪ್ಪ ಉಪಸ್ಥಿತರಿದ್ದರು.