ಸಿದ್ದಾಪುರ, ಮೇ ೧೧ : ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಮರಬಿದ್ದು ಕಾರ್ಮಿಕ ಮೃತಪಟ್ಟ ಘಟನೆ ಇಲ್ಲಿಗೆ ಸಮೀಪದ ಕಾನನ್ ಕಾಡು ಕಾಫಿ ತೋಟದಲ್ಲಿ ನಡೆದಿದೆ. ಅಭ್ಯತ್ ಮಂಗಲ ನಿವಾಸಿ ಚಾಮಣ್ಣ ನಾಗಪ್ಪ (೫೪) ಮೃತ ದುರ್ದೈವಿ.

ಕೂಡ್ಲೂರು ಚೆಟ್ಟಳ್ಳಿ ಗ್ರಾ.ಪಂ ವ್ಯಾಪ್ತಿಯ ಕಾನನ್ ಕಾಡು ಕೋಗಿಲಾಳ ಖಾಸಗಿ ಕಾಫಿ ತೋಟದಲ್ಲಿ ಸಿಲ್ವರ್ ಮರ ಕತ್ತರಿಸುತ್ತಿರುವ ಸಂದರ್ಭದಲ್ಲಿ ಮರ ಕಾರ್ಮಿಕನ ಮೇಲೆ ಬಿದ್ದ ಪರಿಣಾಮ ಕಾರ್ಮಿಕ ಸ್ಥಳದಲ್ಲೇ ಮೃತಪಟ್ಟಿದ್ದು ಸ್ಥಳಕ್ಕೆ ಚೆಟ್ಟಳ್ಳಿ ಉಪ ಪೊಲೀಸ್ ಠಾಣೆಯ ಸಿಬ್ಬಂದಿಗಳು ಭೇಟಿ ನೀಡಿ ಪ್ರಕರಣ ದಾಖಲಿಸಿದ್ದಾರೆ.