ಕಡAಗ, ಮೇ ೧೨: ಕಳೆದ ರಾತ್ರಿ ಸುರಿದ ಧಾರಾಕಾರ ಗಾಳಿ ಮಳೆಯಿಂದಾಗಿ ಕಡಂಗ - ವೀರಾಜಪೇಟೆ ಮುಖ್ಯ ರಸ್ತೆಯಲ್ಲಿ ಭಾರೀ ಗಾತ್ರದ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದು ಕೆಲ ಹೊತ್ತು ಸಂಚಾರ ಸ್ಥಗಿತಗೊಂಡಿತ್ತು.
ಅದೇ ರೀತಿ ಕಡಂಗ- ಕೆದುಮುಳ್ಳೂರು ಮುಖ್ಯ ರಸ್ತೆಯಲ್ಲೂ ವಿದ್ಯುತ್ ಕಂಬಗಳು ಮತ್ತು ಮರಗಳು ಧರಾಶಾಯಿಯಾಗಿ ಸಂಚಾರ ವ್ಯವಸ್ಥೆಗೆ ಅಡ್ಡಿಯಾಯಿತು.
ಅದೇ ರೀತಿ ಕಡಂಗದ ದೇವಸ್ಥಾನ ಸಮೀಪದಲ್ಲಿ ಮರದ ಕೊಂಬೆ ಬಿದ್ದು ಸಂಚಾರ ಸ್ಥಗಿತಗೊಂಡಿತ್ತು. ತಕ್ಷಣ ಸಾರ್ವಜನಿಕರು ಸಮಸ್ಯೆ ಸರಿಪಡಿಸಿ ಸಂಚಾರಕ್ಕೆ ಅನುವುಮಾಡಿಕೊಟ್ಟರು.
ಮರ ಮತ್ತು ವಿದ್ಯುತ್ ಕಂಬಗಳು ಬಿದ್ದ ಹಿನ್ನೆಲೆ ಕಡಂಗ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡು ಕತ್ತಲು ಆವರಿಸಿಕೊಂಡಿದೆ.