ಮಡಿಕೇರಿ, ಮೇ. ೧೨: ಕರ್ನಾಟಕ ವಿಧಾನಸಭೆ ಚುನಾವಣೆ ಜಿಲ್ಲೆಯಲ್ಲಿ ಶಾಂತಿಯುತವಾಗಿ ನಡೆದಿದ್ದು, ಫಲಿತಾಂಶ ಒಂದು ಬಾಕಿ ಇದೆ. ತಾ. ೧೩ ರಂದು (ಇಂದು) ಅಭ್ಯರ್ಥಿಗಳ ಭವಿಷ್ಯ ನಿರ್ಧಾರಗೊಳ್ಳಲಿದ್ದು, ಮಡಿಕೇರಿಯ ಸಂತ ಜೋಸೆಫರ ಶಾಲೆಯಲ್ಲಿ ಈ ಸಂಬAಧ ಸಕಲ ಸಿದ್ಧತೆಯನ್ನು ಮಾಡಿಕೊಳ್ಳಲಾಗಿದೆ.

ಮತ ಎಣಿಕೆ ಪ್ರಕ್ರಿಯೆಯು ಬೆಳಗ್ಗೆ ೮ ಗಂಟೆಗೆ ಆರಂಭವಾಗಲಿದೆ. ಚುನಾವಣಾ ಆಯೋಗದ ನಿಯಮದ ಪ್ರಕಾರ ಮತ ಎಣಿಕೆ ನಡೆಯಲಿದೆ. ಪ್ರತಿ ಟೇಬಲ್‌ನಲ್ಲಿ ಮತ ಎಣಿಕೆ ಮೇಲ್ವಿಚಾರಕರು ಮತ್ತು ಮತ ಎಣಿಕೆ ಸಹಾಯಕರು ಕಾರ್ಯನಿರ್ವಹಿಸಲಿದ್ದು, ಜೊತೆಗೆ ಮೈಕ್ರೋ ವೀಕ್ಷಕರು ಪ್ರಕ್ರಿಯೆಯಲ್ಲಿ ಇರಲಿದ್ದಾರೆ. ಎದುರಿಗೆ ವಿವಿಧ ಪಕ್ಷದ ಏಜೆಂಟರು ಇರಲಿದ್ದಾರೆ.

ಎರಡು ವಿಧಾನಸಭಾ ಕ್ಷೇತ್ರಕ್ಕೆ ಸಂಬAಧಿಸಿದAತೆ ಪ್ರತ್ಯೇಕವಾಗಿ ಮತ ಎಣಿಕೆ ಕಾರ್ಯ ನಡೆಯಲಿದೆ. ಒಂದು ವಿಧಾನಸಭಾ ಕ್ಷೇತ್ರಕ್ಕೆ ಸಂಬAಧಿಸಿದAತೆ ೧೪ ಟೇಬಲ್‌ಗಳಲ್ಲಿ ಮತ ಎಣಿಕೆ ನಡೆಯಲಿದ್ದು, ೨೦ ಸುತ್ತಿನಲ್ಲಿ ಮತ ಎಣಿಕೆ ಕಾರ್ಯ ನಡೆಯಲಿದೆ. ಜೊತೆಗೆ ಅಂಚೆ ಮತ್ತು ಸೇವಾ ಮತದಾರರ ಪತ್ರ ಮತ ಎಣಿಕೆ ಕಾರ್ಯವೂ ಪ್ರತ್ಯೇಕವಾಗಿ ನಡೆಯಲಿದೆ.

ಇದಕ್ಕೂ ಮೊದಲು ತಾ. ೧೦ ರಂದು ಮತದಾನ ಮುಗಿದ ಬಳಿಕ ಸ್ಟಾçಂಗ್ ರೂಂನಲ್ಲಿ ತಂದಿಟ್ಟಿರುವ ಮತಯಂತ್ರಗಳನ್ನು ಹಂತಹAತವಾಗಿ ಕೇಂದ್ರದ ಟೇಬಲ್‌ಗಳಿಗೆ ವರ್ಗಾವಣೆ ಮಾಡಲಾಗುವುದು. ಪಾಸ್ ಇರುವ ಅಧಿಕಾರಿಗಳಿಗೆ, ಸಿಬ್ಬಂದಿಗಳಿಗೆ, ಏಜೆಂಟರಿಗೆ ಹಾಗೂ ಮಾಧ್ಯಮದವರಿಗೆ ಮಾತ್ರ ಪ್ರವೇಶ ಇರಲಿದೆ. ಎಣಿಕೆ ಕೇಂದ್ರದ ಸುತ್ತ ಪೊಲೀಸ್ ಬಿಗಿಬಂದೋಬಸ್ತ್ ಇರಲಿದ್ದು, ಇದಕ್ಕಾಗಿ ಪೊಲೀಸ್ ಇಲಾಖೆಯಿಂದ ಅರೆಸೇನಾಪಡೆಯೂ ಕಾರ್ಯ ನಿರ್ವಹಿಸಲಿದೆ.

ವೀಕ್ಷಕರ ಭೇಟಿ - ಅಧಿಕಾರಿಗಳಿಂದ ಪರಿಶೀಲನೆ

ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ವೀಕ್ಷಕರಾಗಿ ನೇಮಕಗೊಂಡಿರುವ ಜಿ.ಪ್ರಸನ್ನ ರಾಮಸ್ವಾಮಿ (ಭಾ.ಆ.ಸೇ) ಅವರು ನಗರದ ಸಂತ ಜೋಸೆಫರ ಶಾಲೆಗೆ ಶುಕ್ರವಾರ ಭೇಟಿ ನೀಡಿ ಮತ ಎಣಿಕೆ ಸಿದ್ಧತೆ ಬಗ್ಗೆ ಪರಿಶೀಲಿಸಿದರು.

ಈ ಸಂಬAಧ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ.ಬಿ.ಸಿ.ಸತೀಶ ಅವರ ಜೊತೆ ಸಮಾಲೋಚನೆ ನಡೆಸಿದರು. ಹಾಗೆಯೇ ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಶಬನಾ ಎಂ.ಶೇಕ್ ಅವರಿಂದ ಮತ ಎಣಿಕೆಗೆ ಕೈಗೊಳ್ಳಲಾಗಿರುವ ಸಿದ್ಧತೆ ಬಗ್ಗೆ ಮಾಹಿತಿ ಪಡೆದರು.

ಚುನಾವಣಾ ಸಾಮಾನ್ಯ ವೀಕ್ಷಕರಾಗಿ ನೇಮಕವಾಗಿರುವ ವಿಕ್ರಮ ಸಿಂಗ್ ಮಲ್ಲಿಕ್(ಭಾ.ಆ.ಸೇ) ಅವರು ಮಡಿಕೇರಿ ವಿಧಾನಸಭಾ ಕ್ಷೇತ್ರಕ್ಕೆ ಮತ ಎಣಿಕೆ ವೀಕ್ಷಕರಾಗಿ ಕಾರ್ಯನಿರ್ವಹಿಸಲಿದ್ದಾರೆ.

ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಮತ ಎಣಿಕೆ ಸಂಬAಧಿಸಿದAತೆ ಅಂತಿಮ ಸಿದ್ಧತೆಯನ್ನು ಪರಿಶೀಲಿಸಿದರು. ಹಾಗೆಯೇ ಅಂಚೆ ಮತಪತ್ರ ಎಣಿಕೆ ಹಾಗೂ ವಿದ್ಯುನ್ಮಾನ ಮತಯಂತ್ರದ ಮತ ಎಣಿಕೆ ಸಂಬAಧಿಸಿದAತೆ ಅಧಿಕಾರಿಗಳ ಜೊತೆ ಸಮಾಲೋಚಿಸಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುAಡೇಗೌಡ, ಮಡಿಕೇರಿ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಯತೀಶ್ ಉಳ್ಳಾಲ್, ಸಹಾಯಕ ಚುನಾವಣಾಧಿಕಾರಿಗಳಾದ ಎಸ್.ಎನ್.ನರಗುಂದ, ಕಿರಣ್ ಗೌರಯ್ಯ, ಪ್ರಮೋದ್, ರಾಮಚಂದ್ರ, ವೀಕ್ಷಕರ ಸಂಪರ್ಕ ಅಧಿಕಾರಿಗಳಾದ ಪ್ರಮೋದ್, ಬಾಲಸುಬ್ರಮಣ್ಯ, ಮತ ಎಣಿಕೆ ಅಧಿಕಾರಿಗಳು ಇದ್ದರು.