ಮಡಿಕೇರಿ, ಮೇ ೧೩: ರಾಜ್ಯ ಬಾಲಭವನ ಸೊಸೈಟಿ, ಜಿಲ್ಲಾ ಬಾಲಭವನ ಸಮಿತಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇವರ ಸಹಯೋಗದೊಂದಿಗೆ (೧ ರಿಂದ ೧೦ನೇ ತರಗತಿ) ೫ ರಿಂದ ೧೬ ವರ್ಷದ ಮಕ್ಕಳಿಗಾಗಿ ಮಡಿಕೇರಿಯ ಪೊನ್ನಮ್ಮ ಕುಶಾಲಪ್ಪ ಸ್ಕೌಟ್ಸ್ ಅಂಡ್ ಗೈಡ್ಸ್ ಭವನ, ತಾ. ೧೫ ರಿಂದ ೨೯ ರವರೆಗೆ ಉಚಿತ ಬೇಸಿಗೆ ಶಿಬಿರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಶಿಬಿರದಲ್ಲಿ ಸೃಜನಾತ್ಮಕ ಹಾಗೂ ಕ್ರಿಯಾತ್ಮಕ ಚಟುವಟಿಕೆಗಳನ್ನು ಸಂಪನ್ಮೂಲ ವ್ಯಕ್ತಿಗಳಿಂದ ಮಕ್ಕಳಿಗೆ ತರಬೇತಿ ನೀಡಲಾಗುವುದು. ಆದ್ದರಿಂದ ಈ ಶಿಬಿರದಲ್ಲಿ ಭಾಗವಹಿಸಲು ಆಸಕ್ತಿ ಇರುವ ಮಕ್ಕಳು ದೂರವಾಣಿ ಸಂಖ್ಯೆ ೮೬೧೮೮೬೧೫೦೫, ೬೩೬೩೨೮೫೬೮೫ ಕಚೇರಿ ಸಮಯದಲ್ಲಿ ಸಂಪರ್ಕಿಸಿ ಹೆಸರು ನೋಂದಾಯಿಸಿಕೊಳ್ಳುವAತೆ ತಿಳಿಸಿದೆ. ಕಚೇರಿಯಲ್ಲಿ ಹೆಸರು ನೋಂದಾಯಿಸಿದ ಮಕ್ಕಳಿಗೆ ಮಾತ್ರ ಶಿಬಿರದಲ್ಲಿ ಭಾಗವಹಿಸಲು ಅವಕಾಶ ನೀಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಎನ್. ಮಂಜುನಾಥ್ ಅವರು ತಿಳಿಸಿದ್ದಾರೆ.