ಮಡಿಕೇರಿ, ಮೇ ೧೩: ಕರ್ನಾಟಕ ವಿಧಾನಸಭೆ ೨೦೨೩ರ ಅಂಗವಾಗಿ ಮಾಧ್ಯಮಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮತ್ತು ಹವ್ಯಾಸಿ ಪತ್ರಿಕಾ ಛಾಯಾಗ್ರಾಹಕರಿಗಾಗಿ ಮತದಾನದ ವಿಷಯದ ಬಗ್ಗೆ ರಾಜ್ಯ ಮಟ್ಟದ ಛಾಯಾಚಿತ್ರ ಸ್ಪರ್ಧೆ ಆಯೋಜಿಸಲಾಗಿದೆ.
ಲೋಕಸಭಾ ಚುನಾವಣೆ-೨೦೧೯ ರಲ್ಲಿ ಹಮ್ಮಿಕೊಂಡಿದ್ದ ರಾಜ್ಯ ಮಟ್ಟದ ಛಾಯಾಚಿತ್ರ ಸ್ಪರ್ಧೆಯ ಮೂಲಕ ಚುನಾವಣಾ ಸಂಬAಧಿತ ಅತ್ಯುತ್ತಮ ಹಾಗೂ ಸಂಗ್ರಹಯೋಗ್ಯ ಛಾಯಾಚಿತ್ರಗಳನ್ನು ಕೇಂದ್ರ ಚುನಾವಣಾ ಆಯೋಗ ಪ್ರಶಂಸಿಸುವುದರ ಜೊತೆಗೆ ತನ್ನ ವರದಿ ಹಾಗೂ ಪುಸ್ತಕಗಳ ಮುಖಪುಟಗಳಲ್ಲಿ ಬಳಸಿಕೊಳ್ಳಲಾಗಿದೆ.
ಈ ಹಿನ್ನೆಲೆಯಲ್ಲಿ ಪ್ರಸ್ತುತ ನಡೆದ ಸಾರ್ವತ್ರಿಕ ಚುನಾವಣೆ ಕರ್ನಾಟಕ ವಿಧಾನಸಭೆ ೨೦೨೩ ನಿಮಿತ್ತ ರಾಜ್ಯ ಮಟ್ಟದ ಛಾಯಾಚಿತ್ರ ಸ್ಪರ್ಧೆಯನ್ನು ಏರ್ಪಡಿಸಿ, ಅತ್ಯುತ್ತಮ ಛಾಯಾಚಿತ್ರ ತೆಗೆದ ಛಾಯಾಗ್ರಾಹಕರಿಗೆ ಪ್ರಮಾಣ ಪತ್ರ ಹಾಗೂ ನಗದು ಬಹುಮಾನ ನೀಡಲಾಗುತ್ತಿದೆ.
ಸ್ಪರ್ಧೆಯಲ್ಲಿ ಭಾಗವಹಿಸ ಲಿಚ್ಚಿಸುವ ಪತ್ರಿಕಾ ಛಾಯಾಗ್ರಾಹಕರು/ ಹವ್ಯಾಸಿ ಛಾಯಾಗ್ರಾಹಕರು ತಾವು ತೆಗೆದ ಗರಿಷ್ಟ ೫ ಅತ್ಯುತ್ತಮ ಛಾಯಾಚಿತ್ರಗಳನ್ನು ಸೂಕ್ತ ಶೀರ್ಷಿಕೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ನೀಡಿರುವ ಅಕ್ರಿಡಿಟೇಷನ್ ಕಾರ್ಡ್ ಅಥವಾ ತಮ್ಮ ಮಾಧ್ಯಮ ಕಚೇರಿ ನೀಡಿರುವ ಗುರುತಿನ ಚೀಟಿ ಅಥವಾ ಆಧಾರ್ ಕಾರ್ಡ್ ಹಾಗೂ ಮನೆ ವಿಳಾಸ, ಮೊಬೈಲ್ ಸಂಖ್ಯೆ ಸೇರಿದಂತೆ ಮತ್ತಿತರ ವಿವರಗಳನ್ನು ಇ-ಮೇಲ್ ಐಡಿ ಞಣಞಛಿeomeಜiಚಿ೨೦೨೩ @gmಚಿiಟ.ಛಿom ಸಲ್ಲಿಸುವುದು. ಸಲ್ಲಿಕೆಗಳನ್ನು ತಾ. ೨೦ ರಂದು ಸಂಜೆ ೫ ಗಂಟೆಯೊಳಗೆ ಇ-ಮೇಲ್ ಮೂಲಕ ಸಲ್ಲಿಸಬೇಕು.
ಪ್ರಥಮ ಬಹುಮಾನ ೨೫ ಸಾವಿರ, ದ್ವಿತೀಯ ಬಹುಮಾನ ೧೫ ಸಾವಿರ, ತೃತೀಯ ಬಹುಮಾನ ೧೦ ಸಾವಿರ, ಸಮಾಧಾನಕರ ಬಹುಮಾನ ರೂ.೬ ಸಾವಿರ ಹಾಗೂ ವಿಶೇಷ ಬಹುಮಾನ ರೂ. ೫ ಸಾವಿರ ನೀಡಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ.